• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕಲ್ಯಾಣ ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಸಂಘ ಅಸ್ತಿತ್ವಕ್ಕೆ - ಸಂಘದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಕಲ್ಯಾಣ ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಸಂಘ ಅಸ್ತಿತ್ವಕ್ಕೆ - ಸಂಘದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬಸವರಾಜ​​​ ಪಾಟೀಲ್ ಸೇಡಂ

ಬಸವರಾಜ​​​ ಪಾಟೀಲ್ ಸೇಡಂ

ಈಗಾಗಲೇ ವಿಕಾಸ ಅಕಾಡೆಮಿ ಮೂಲಕ ಮಾನನ ಸಂಪನ್ಮೂಲ ಅಭಿವೃದ್ಧಿ ಚಟುವಟಿಕೆಯಲ್ಲಿ ಬಸವರಾಜ ಪಾಟೀಲ್​​​ ಸೇಡಂ ಅವರು ತೊಡಗಿಕೊಂಡಿದ್ದರು. ಅದೇ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವರ ನೇಮಕ ಮಾಡಲಾಗಿದೆ

  • Share this:

ಕಲಬುರ್ಗಿ(ಫೆ.12) :  ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ತಂದಿದೆ. ಸಂಘದ ಪ್ರಥಮ ಅಧ್ಯಕ್ಷರನ್ನಾಗಿ ರಾಜ್ಯಸಭೆ ಮಾಜಿ ಸದಸ್ಯ, ಬಿಜೆಪಿಯ ಹಿರಿಯ ಮುಖಂಡ ಬಸವರಾಜ ಪಾಟೀಲ್ ಸೇಡಂ ಅವರನ್ನು ನೇಮಕ ಮಾಡಿದೆ. ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.


ಈಗಾಗಲೇ ಅಸ್ತಿತ್ವತದಲ್ಲಿರುವ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಸಂಘ ರಚನೆ ಮಾಡಲಾಗಿದ್ದು, ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾನವ ಸಂಪನ್ಮೂಲ ಅಭವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಸಂಘ ಸ್ಥಾಪಿಸಲಾಗಿದೆ. ಸಹಕಾರ ಸಂಘಗಳ ಕಾಯ್ದೆ ಅಡಿ ಸಂಘದ ನೋಂದಣಿ ಮಾಡಲಾಗಿದೆ.


ಸಾವಯವ ಕೃಷಿಗೆ ಉತ್ತೇಜನ, ಆರೋಗ್ಯ ವೃದ್ಧಿ, ಶಿಕ್ಷಣ ಸುಧಾರಣೆ, ಮಹಿಳಾ ಸಬಲೀಕರಣ, ದೇಸೀ ಗೋತಳಿ ಅಭಿವೃದ್ಧಿ, ಸಾಂಸ್ಕೃತಿಕ ಸಿರಿವಂತಿಕೆ ಕಾಪಾಡುವುದು ಸೇರಿದಂತೆ ವಿವಿಧ ಉದ್ದೇಶಗಳನ್ನು ಈ ಸಂಘ ಹೊಂದಿದೆ. ಈಗಾಗಲೇ ವಿಕಾಸ ಅಕಾಡೆಮಿ ಮೂಲಕ ಮಾನನ ಸಂಪನ್ಮೂಲ ಅಭಿವೃದ್ಧಿ ಚಟುವಟಿಕೆಯಲ್ಲಿ ಸೇಡಂ ತೊಡಗಿಕೊಂಡಿದ್ದರು. ಅದೇ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವರ ನೇಮಕ ಮಾಡಲಾಗಿದೆ.


ಕಲಬುರ್ಗಿ ಸಹಕಾರಿ ಸಂಘಗಳ ನಿಬಂಧಕರ ಕಛೇರಿಯಲ್ಲಿ ನೂತನ ಸಂಘದ ನೋಂದಣಿ ಮಾಡಲಾಗಿದೆ. ಈ ಸಂಘವೂ ಬೇರೆ ಸಂಘದ ರೀತಿಯಲ್ಲಿ ಒಂದು. ಆದರೆ ಇದಕ್ಕೆ ರಾಜ್ಯ ಸರ್ಕಾರವೇ ಅಧ್ಯಕ್ಷರನ್ನು ನೇಮಕ ಮಾಡಿ, ಅದರ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಬಸವರಾಜ ಪಾಟೀಲ್ ಸೇಡಂ ಅವರು ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಸಂಘ ಪರಿವಾರದ ಮುಖಂಡರಾಗಿ ಸೇವೆ ಸಲ್ಲಿಸಿದವರು.ಬಿಜೆಪಿ ಸಂಘಟಿಸುವ ಜೊತೆಗೆ, ಕಲಬುರ್ಗಿ ಲೋಕಸಭೆಯಿಂದ ಒಮ್ಮೆ ಆಯ್ಕೆಯಾಗಿದ್ದರು. ಒಮ್ಮೆ ರಾಜ್ಯಸಭಾ ಸದಸ್ಯರೂ ಆಗಿದ್ದರು.


ಇದನ್ನೂ ಓದಿ : ಆರು ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ; ಪ್ರದೇಶದ ಅಭಿವೃದ್ಧಿಗೆ ವಿಶೇಷ ಯೋಜನೆಗಳ ಭರವಸೆ ಇತ್ತ ಸಿಎಂ ಯಡಿಯೂರಪ್ಪ


ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲೆಂದು ಈ ರೀತಿ ಮಾಡಲಾಗಿದೆ ಎಂಬ ಮಾತು ಕೇಳಿಬಂದಿದೆ. ಹೀಗೆ ಒಂದೊಂದೇ ಸಂಘಗಳನ್ನು ಅಸ್ತಿತ್ವಕ್ಕೆ ತಂದು ಎಷ್ಟು ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಾರೆ ಎನ್ನುವ ಪ್ರಶ್ನೆಯೂ ಎದುರಾಗಿದೆ.

Published by:G Hareeshkumar
First published: