‘ಕಾಂಗ್ರೆಸ್ ಹಿತದೃಷ್ಟಿಯಿಂದ ಸಾಧ್ಯವಾದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ನೇಮಕವಾಗಲಿ‘: ಮಾಜಿ ಸಂಸದ ಕೆ.ಎಚ್​​ ಮುನಿಯಪ್ಪ

ನಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ. ಹಲವು ನಾಯಕರು ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ಹೈಕಮಾಂಡ್ ಮುಂದೆ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಉದ್ದೇಶ ಪಕ್ಷ ಸಂಘಟಿತವಾಗಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ಕೆ.ಎಚ್​​ ಮುನಿಯಪ್ಪ ಹೇಳಿದರು.

news18-kannada
Updated:January 21, 2020, 6:00 PM IST
‘ಕಾಂಗ್ರೆಸ್ ಹಿತದೃಷ್ಟಿಯಿಂದ ಸಾಧ್ಯವಾದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ನೇಮಕವಾಗಲಿ‘: ಮಾಜಿ ಸಂಸದ ಕೆ.ಎಚ್​​ ಮುನಿಯಪ್ಪ
ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ
  • Share this:
ಬೆಂಗಳೂರು(ಜ.21): ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಸಾಧ್ಯವಾದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ನೇಮಕವಾಗಬೇಕು ಎಂದು ಮಾಜಿ ಸಂಸದ ಕೆ.ಎಚ್​​​ ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಕೆ.ಎಚ್​​ ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಎಲ್ಲಾ ಕಾಂಗ್ರೆಸ್​ ನಾಯಕರು ಹೈಕಮಾಂಡ್​​ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದ್ದರಿಂದ ಹೈಕಮಾಂಡ್​ ಯಾರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೂ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ಸೋನಿಯಾ ಗಾಂಧಿ ನಿರತರಾಗಿದ್ದರು. ಹಾಗಾಗಿಯೇ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ವಿಳಂಬ ಆಗಿರಬಹುದು. ಇನ್ನು ಕಾರ್ಯಾಧ್ಯಕ್ಷ ಹುದ್ದೆ ಸಾಮಾನ್ಯವಾಗಿ ಒಂದು, ಎರಡು ಇರುತ್ತೆ. ಅಂತೆಯೇ ಈಗ ಕೂಡ ಒಬ್ಬರೇ ಕಾರ್ಯಾಧ್ಯಕ್ಷರು ಇರುವುದು. ಪಕ್ಷಕ್ಕೆ ಅಧ್ಯಕ್ಷರು ಮುಖ್ಯ. ಅಧ್ಯಕ್ಷರಿಗೆ ಸಹಾಯವಾಗಲೀ ಎಂದು ಕಾರ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಒಂದು ಅಥವಾ ಕಾರ್ಯಾಧ್ಯಕ್ಷರ ನೇಮಕಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೀಗ ನಾಲ್ಕೈದು ಕಾರ್ಯಾಧ್ಯಕ್ಷರ ನೇಮಕ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದು ಸಿದ್ದರಾಮಯ್ಯರ ಅಭಿಪ್ರಾಯ ಎಂದರು ಮಾಜಿ ಸಂಸದ ಕೆ.ಎಚ್​​ ಮುನಿಯಪ್ಪ.

ನಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ. ಹಲವು ನಾಯಕರು ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ಹೈಕಮಾಂಡ್ ಮುಂದೆ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಉದ್ದೇಶ ಪಕ್ಷ ಸಂಘಟಿತವಾಗಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ರಾಜ್ಯಾಧ್ಯಕ್ಷ ಹುದ್ದೆಗೆ ಡಿಕೆಶಿ?; ಕುಗ್ಗಿರುವ ಪಕ್ಷದ ವರ್ಚಸ್ಸನ್ನು ವೃದ್ಧಿಸಲು ಟ್ರಬಲ್ ಶೂಟರ್​ಗೆ ಮಣೆ ಹಾಕಿತಾ ಹೈಕಮಾಂಡ್?

ಇನ್ನು ಕಾಂಗ್ರೆಸ್​ ಶಾಸಕಾಂಗ ನಾಯಕ ಮತ್ತು ವಿರೋಧ ಪಕ್ಷದ ನಾಯಕರ ಸ್ಥಾನಕ್ಕೂ ಬೇರೆ ಬೇರೆಯವರನ್ನು ನೇಮಕ ಮಾಡುವಂತಹ ಪ್ರಯತ್ನ ಮಹಾರಾಷ್ಟ್ರದಲ್ಲಿ ಮಾಡಿದ್ದೇವೆ. ಕರ್ನಾಟಕದಲ್ಲೂ ಇಂತಹ ಪ್ರಯತ್ನ ಮಾಡಬಹುದು. ಕಾಂಗ್ರೆಸ್​ನ ಹಲವು ಹಿರಿಯ ನಾಯಕರು ಇದ್ದಾರೆ. ಎರಡು ಸ್ಥಾನಕ್ಕೂ ಬೇರೆಯವರನ್ನೇ ನೇಮಕ ಮಾಡಿದರೆ ತಪ್ಪೇನಿಲ್ಲ. ಪ್ರತಿಯೊಬ್ಬರಿಗೂ ಅಧಿಕಾರ ಹಂಚಿಕೆಯಾಗಲೇಬೇಕು. ಆಗ ಮಾತ್ರ ಪಕ್ಷ ಸರಿಯಾದ ದಾರಿಯಲ್ಲಿ ನಡೆಯಲು ಸಾಧ್ಯ ಎಂದು ತಿಳಿಸಿದರು.

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಹೀನಾಯ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ ಶಾಸಕಾಂಗ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಂತೆಯೇ ದಿನೇಶ್​ ಗುಂಡೂರಾವ್​​ ಕೂಡ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರ ರಾಜೀನಾಮೆ ಅಂಗೀಕಾರ ಆಗುವ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನಕ್ಕೆ ಹೈಕಮಾಂಡ್​​ ಬಳಿ ಕಾಂಗ್ರೆಸ್​​ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್​​, ಎಚ್​​. ಕೆ ಪಾಟೀಲ್​​, ಕೆ. ಎಚ್ ಮುನಿಯಪ್ಪ​​ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಕೆ. ಎಚ್​​ ಮುನಿಯಪ್ಪ ಬೆಂಬಲಕ್ಕೆ ಬಿ.ಕೆ ಹರಿಪ್ರಸಾದ್​​ ನಿಂತಿದ್ದು, ಎಚ್​.ಕೆ ಪಾಟೀಲ್​​ ಬೆನ್ನಿಗೆ ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ್​​ ಖರ್ಗೆ ನಿಂತಿದ್ಧಾರೆ. ಆದರೀಗ ಎಂಬಿ ಪಾಟೀಲ್​​ ಮತ್ತು ಡಿಕೆಶಿ ನಡುವೇ ಕೆಪಿಸಿಸಿ ಅಧ್ಯಕ್ಷರ ಗಾದಿಗಾಗಿ ಪೈಪೋಟಿ ನಡೆಯುತ್ತಿದೆ.
First published: January 21, 2020, 6:00 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading