ಸತತ ನೆರೆಯಿಂದ ತತ್ತರಿಸಿರುವ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡಲಿ ; ಕೇಂದ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ

ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

news18-kannada
Updated:August 7, 2020, 1:19 PM IST
ಸತತ ನೆರೆಯಿಂದ ತತ್ತರಿಸಿರುವ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡಲಿ ; ಕೇಂದ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ
ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ
  • Share this:
ಬೆಂಗಳೂರು(ಆಗಸ್ಟ್​.07): ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡುವ ಅವರು, ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ. ಇದರ ಜೊತೆಗೆ ದುರದೃಷ್ಟವಶಾತ್ ರಾಜ್ಯದಲ್ಲಿ ಅತಿವೃವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿದೆ. ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ‌. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಮತ್ತು ಸಚಿವರುಗಳು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ, ಹೆಚ್ಚುತ್ತಿದೆ ನದಿ ನೀರಿನ ಹರಿವು ; ತಗ್ಗುತ್ತಿಲ್ಲ ಕಡಲಿನ ಅಲೆಗಳ ಅಬ್ಬರ

ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

 ರಾಜ್ಯಾದ್ಯಂತ ವರುಣನ ಆರ್ಭಟ :ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿಸಲಾಗಿದ್ದು, ನದಿ ಪಾತ್ರದ ಜನತೆ ಭಯ ಭೀತರಾಗಿದ್ದಾರೆ. ಮಹಾ ಮಳೆಗೆ ಬೆಳಗಾವಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮತ್ತೆ ನೆರೆ ಪ್ರವಾಹ ಭೀತಿ ಎದುರಾಗಿದೆ.ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಗೆ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದ್ದು, ಚಿಕ್ಕೋಡಿ, ನಿಪ್ಪಾಣಿಯಲ್ಲಿ 7 ಸೇತುವೆಗಳು ಜಲಾವೃತವಾಗಿವೆ.
Published by: G Hareeshkumar
First published: August 7, 2020, 1:14 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading