40 ಮಹಿಳೆಯರಿಂದ ರೊಟ್ಟಿ ತಯಾರಿಕೆ; ಸ್ತ್ರೀ ಸಬಲೀಕರಣಕ್ಕೆ ನಾಂದಿ ಹಾಡಿದ ಮಹಾದೇವಿ ಕಬ್ಬೂರು
ರಾತ್ರಿ ಶಾಲೆ ನಡೆಸುವ ಸಮಯದಲ್ಲಿ ಹುಟ್ಟಿದ ಯೋಜನೆಯೊಂದು ಇಂದು ಸಾಕಾರಗೊಂಡಿದೆ. ಹಾರೂಗೇರಿ ಪಟ್ಟಣದಲ್ಲಿ ಸುಮಾರು 40 ಮನೆಗಳಲ್ಲಿ ದಿನ ಒಂದಕ್ಕೆ ಸುಮಾರು 4 ಸಾವಿರಕ್ಕೂ ಹೆಚ್ಚು ವಿವಿಧ ರೀತಿಯ ರೊಟ್ಟಿಗಳು ತಯಾರಾಗುತ್ತವೆ.
ಚಿಕ್ಕೋಡಿ (ಮಾ.10) : ಗ್ರಾಮೀಣ ಭಾಗದಲ್ಲಿ ಹೆಣ್ಣು ಅಂದ್ರೆ ಬರಿ ಅಡುಗೆ ಮಾಡೋದು, ಮಕ್ಕಳು ಮತ್ತು ಸಂಸಾರ ನೋಡಿಕೊಂಡು ಹೋಗುವ ಭಾವನೆ ಇದೆ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರದ ಜೊತೆಗೆ ಇತರೆ 40 ಜನರ ಸಂಸಾರಗಳಿಗೂ ಆಸರೆಯಾಗಿದ್ದಾರೆ.
ತೊಟ್ಟಿಲನ್ನು ತೂಗುವ ಕೈ ಜಗತ್ತನ್ನಾಳುವುದು ಎಂಬ ಮಾತಿನಂತೆ ನಮ್ಮ ದೇಶದಲ್ಲಿ ಅದೆಷ್ಟೋ ಮಹಿಳೆಯರು ಸಾಧನೆಯ ಶಿಖರವನ್ನೇರಿ ಪುರುಷರಿಗಿಂತ ತಾವೇನೂ ಕಮ್ಮಿಯಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ರಾಜಕೀಯ, ಸಾಮಾಜಿಕ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿ ಎಲ್ಲಾ ವಿಭಾಗಗಳಲ್ಲೂ ಸಹ ಮಹಿಳೆಯರೇ ಈಗ ಎತ್ತಿದ ಕೈ. ಆದರೆ ಗ್ರಾಮೀಣ ಭಾಗದ ಮಹಿಳೆಯರಿಗೆ ತನ್ನೊಂದಿಗೆ ಬೆಳೆಯುವ ಅವಕಾಶ ಕೊಟ್ಟು ತನ್ಮೂಲಕ ಅವರನ್ನೂ ಬೆಳೆಸುತ್ತಿರುವ ಈ ತಾಯಿಯ ಹೆಸರು ಮಹಾದೇವಿ ಕಬ್ಬೂರು. ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಪಟ್ಟಣದವರು.
ಮೊದ ಮೊದಲು ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿದ್ದ ಮಹಾದೇವಿ ರಾತ್ರಿ ಶಾಲೆ ನಡೆಸಿ ಮಹಿಳೆಯರಿಗೆ ಅಕ್ಷರ ಜ್ಞಾನ ನೀಡುತ್ತಿದ್ದರು. ಈ ಸಮಯಲ್ಲಿ ಹುಟ್ಟಿದ ಚಿಂತನೆಯೊಂದು ಈಗ 40 ಜನರ ಬದುಕು
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ