ಮಂಗಳೂರು: ನಗರದ ನೆಹರೂ ಮೈದಾನದ (Nehru Football Ground, Mangaluru) ಬಳಿಯ ಫುಟ್ಬಾಲ್ ಗ್ರೌಂಡ್ನಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಮಂಗಳವಾರ ಬಿಜೆಪಿ ಕಾರ್ಯಕರ್ತ 45 ವರ್ಷದ ಜನಾರ್ದನ ಬರಿಂಜ್ ಎಂಬವರ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ (Bantwal) ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಮಂಗಳವಾರ ಮಧ್ಯಾಹ್ನ ಮೈದಾನದಲ್ಲಿ ಜನಾರ್ದನ್ ಕುಳಿತಿರುವಾಗ ಬಂದ ಹಂತಕರು ಕೊಲೆ ಮಾಡಿದ್ದಾರೆ ಎಂದು ಒನ್ ಇಂಡಿಯಾ ವರದಿ ಮಾಡಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದರೋಡೆ ಮಾಡಲು ಬಂದವರೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯ ವಿಷಯ ತಿಳಿಯುತ್ತಿದ್ದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಸಕ್ರಿಯ ಬಿಜೆಪಿ ಕಾರ್ಯಕರ್ತ
ಚಾಲಕರಾಗಿದ್ದ ಜನಾರ್ದನ್ ಬರಿಂಜ್ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯ ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಜನದಟ್ಟಣೆಯಿಂದ ಕೂಡಿರುವ ನೆಹರೂ ಮೈದಾನದಲ್ಲಿ ಕೊಲೆ ನಡೆದಿದೆ. ಹಗಲಿನಲ್ಲಿ ಹತ್ಯೆ ನಡೆದಿರುವ ಬಗ್ಗೆ ಡಿಸಿಪಿ ಆಶ್ಚರ್ಯ ಸೂಚಿಸಿದ್ದಾರೆ.
ಇದನ್ನೂ ಓದಿ: Miracle: ಮೃತಪಟ್ಟಿರುವುದಾಗಿ ಡಾಕ್ಟರ್ ಘೋಷಿಸಿದ್ರೂ ಬದುಕಿದ ವ್ಯಕ್ತಿ!
ಈ ಸಂಬಂಧ ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತಷ್ಟು ಜನರು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ