ರೆಕ್ಕೆಯನ್ನಲ್ಲ, ತಲೆನೇ ತೆಗೆಯುತ್ತೇನೆ ಎಂದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​

'ನೋಡಿ ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ಕೊಡುತ್ತೇನೆ.

ದರ್ಶನ್​

ದರ್ಶನ್​

 • Share this:
  ಮೈಸೂರಿನ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಬಂದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ದರ್ಶನ್ ಎಚ್ಚರಿಕೆ ನೀಡಿದರು.

  'ನೋಡಿ ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ಕೊಡುತ್ತೇನೆ ಎಂದು ಹೇಳಿದರು.

  ದರ್ಶನ್ ಗುಡುಗಲು ಕಾರಣವೇನು?

  ಮೈಸೂರು ನಗರದ ಹೆಬ್ಬಾಳದಲ್ಲಿ ಇರುವ 'ಮೈಸೂರು ಯೂನಿಯನ್ ಕ್ಲಬ್ ನಡೆಸುತ್ತಿರುವ ಹರ್ಷ ಮೆಲಂತಾ ಎನ್ನುವ ವ್ಯಕ್ತಿಯನ್ನು ಜೂನ್ 16 ನೇ ತಾರೀಕು ಅರುಣ್ ಕುಮಾರಿ ಎನ್ನುವವರು ಭೇಟಿ ಮಾಡಿ "ನಾನು ಬ್ಯಾಂಕ್ ವ್ಯವಸ್ಥಾಪಕಿ ಎಂದು ಪರಿಚಯಿಸಿಕೊಂಡಿದ್ದಾರೆ. 'ಬೆಂಗಳೂರಿನ ಸೌತ್ ಎಂಡ್ ಸರ್ಕಲ್ಲಿನಲ್ಲಿ ಇರುವ ಕೆನರಾ ಬ್ಯಾಂಕಿನಲ್ಲಿ ನೀವು 25 ಕೋಟಿ ಸಾಲಕ್ಕೆ ನೀವು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಚಲನಚಿತ್ರ ನಟ ದರ್ಶನ್ ಅವರ ಆಸ್ತಿಯ ನಕಲಿ ದಾಖಲೆ ಒದಗಿಸಿದ್ದು ಅಲ್ಲದೆ ಅವರ ಸಹಿಯನ್ನೂ ಸಹ ನಕಲು ಮಾಡಿ ಮೋಸ ಮಾಡಿದ್ದೀರಿ ಎಂದು ಹೇಳಿ ಅವರಿಗೆ ಬ್ಲಾಕ್ ಮೇಲ್ ಮಾಡಿದ್ದಾರೆ.

  ಅಲ್ಲದೇ ಈ ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು 25 ಲಕ್ಷ ಹಣ ನೀಡ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದಾದ ಮೇಲೆ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿದೆ, ಅವರು ತಕ್ಷಣ ಜುಲೈ 3 ನೇ ತಾರೀಕು ದೂರು ದಾಖಲಿಸುತ್ತಾರೆ.

  ಅಲ್ಲದೇ ಇದೇ ಮಹಿಳೆ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಗೆ ಹೋಗಿ ಜೂನ್​ 17 ರಂದು ಅರುಣ ಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

  ಇದನ್ನೂ ಓದಿ: Rakshith Shetty: ರಿಚರ್ಡ್ ಆಂಟನಿಯಾಗಿ ರಕ್ಷಿತ್ ಶೆಟ್ಟಿ, ಹೊಂಬಾಳೆ ಫಿಲಂಸ್​ ಹೊಸಾ ಚಿತ್ರದಲ್ಲಿ ರಿಚ್ಚಿ ಸಮುದ್ರರಾಜ !

  ಈ ವಿಚಾರವಾಗಿ ಇನ್ನೂ ನಾವು ಯಾರನ್ನೂ ಬಂಧಿಸಿಲ್ಲ ಹಾಗೂ ವಿಚಾರಣೆಗೆ ಕಡರೆದಿಲ್ಲ, ತನಿಖೆ ನಡೆಸುತ್ತೇವೆ ಇದಾದ ಮೇಲೆ ಏನೆಂದು ಹೇಳುತ್ತೇವೆ ಎಂದು ಡಿಸಿಪಿ ಪ್ರದೀಪ್​ ಗುಂಟಿ ಅವರು ಮಾಧ್ಯಮದ ಎದುರು ಪ್ರತಿಕ್ರಿಯಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:HR Ramesh
  First published: