ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಈ ಆಡಳಿತಾವಧಿಯ ಕೊನೆಯ ಬಜೆಟ್ (Budget) ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ ಆಗಿರುವುದರಿಂದ ಬಜೆಟ್‌ನಲ್ಲಿ ಎಲ್ಲಾ ವರ್ಗದ ಜನರನ್ನು ತಲುಪಲು ಪ್ರಯತ್ನ ಪಟ್ಟಿರುವ ಸಿಎಂ ಬೊಮ್ಮಾಯಿ, ಭರಪೂರ ಘೋಷಣೆಗಳನ್ನು ಮಾಡಿದ್ದಾರೆ. ಇದರ ಜೊತೆಜೊತೆಗೆ ಯುವ ಜನತೆಗೆ ಅನುಕೂಲವಾಗುವ ಯೋಜನೆಗಳನ್ನೂ ಘೋಷಣೆ ಮಾಡಿದ್ದಾರೆ.
ಶಾಲೆಗೆ ಹೋಗುವ ವಿದ್ಯಾರ್ಥಿನಿಯರಿಗೆ (Students) ಆರ್ಥಿಕ ಸೌಲಭ್ಯ ನೀಡುವ ನಿಟ್ಟಿನಲ್ಲಿ ಹಾಗೂ ಕೆಲಸಕ್ಕೆ ತೆರಳುವ ಮಹಿಳೆಯರಿಗೆ (Women) ಅನುಕೂಲವಾಗುವ ರೀತಿಯಲ್ಲಿ ಉಚಿತ ಪಾಸ್ (Free Pass) ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಇಂದು ಬಜೆಟ್ ಮಂಡಿಸುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಒದಗಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ಯುವಜನರ ಬೆಂಬಲ ಪಡೆಯಲು ಅವರು ಮುಂದಾಗಿದ್ದಾರೆ ಎನ್ನಲಾಗಿದೆ. ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ, 50 ಲಕ್ಷ ಮಹಿಳೆಯರಿಗೆ ಉಚಿತ ಪಾಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸ್ತ್ರೀ ಸಬಲೀಕರಣಕ್ಕೆ ರಾಜ್ಯ ಬಜೆಟ್ ನಲ್ಲಿ ಬಂಪರ್ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: Karnataka Budget 2023 Live Updates: ರೈತರಿಗೆ ಬಂಪರ್ ಆಫರ್- ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಇದರಿಂದ ಶಾಲೆಗೆ ತೆರಳುವ ವಿದ್ಯಾರ್ಥಿನಿಯರಿಗೆ ಹಾಗೂ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಸಾಕಷ್ಟು ಸಹಾಯವಾಗಲಿದೆ. ಶಾಲಾ ಕಾಲೇಜುಗಳ ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೂಡ ಕೈಗೊಳ್ಳಲಾಗುತ್ತದೆ. ಮಕ್ಕಳ ಬಸ್ಸು ಯೋಜನೆ ಪ್ರಾರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. 100 ಕೋಟಿ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ಸಾಧ್ಯತೆ ಇದೆ.
350 ಕೋಟಿ ಇದಕ್ಕೆಂದೇ ಮೀಸಲು
ವಿದ್ಯಾವಾಹಿನಿ ಯೋಜನೆ ಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ಸು ಪಾಸ್ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ.ಈ ಭಾರಿ ಕರ್ನಾಟಕ ಬಜೆಟ್ ಮಂಡನೆಯ ಸಂದರ್ಭದಲ್ಲಿ ಉತ್ತಮ ಸೌಲಭ್ಯಗಳನ್ನು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಯುವ ಜನತೆಗೆ ನೀಡಲಾಗುತ್ತಿದೆ. ಈ ಯೋಜನೆಗಳಿಂದ ಎಷ್ಟು ಸಹಾಯವಾಗಲಿದೆ ಹಾಗೂ ಯಾವ ರೀತಿಯ ಯೋಜನೆಯನ್ನು ಈ ಬಾರಿ ನೀಡಲಾಗಿದೆ. IIT, IIM, IISc, NIT ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಪ್ರೊತ್ಸಾಹ ಧನವನ್ನು 2 ರಿಂದ 4 ಲಕ್ಷ ಕ್ಕೆ ಎರಿಕೆ ಮಾಡಲಾಗಿದೆ. ಇದರಿಂದ ಹಲವಾರಿಗೆ ಆರ್ಥಿಕವಾಗಿ ಸಹಾಯವಾಗಲಿದೆ.
30 ಕೋಟಿ ವೆಚ್ಚದಲ್ಲಿ ಸ್ಟಾರ್ಟ್ಪ್ ಪಾರ್ಕ್
ಬೆಂಗಳೂರಿನಲ್ಲಿ ಎಲ್ಲರಿಗೂ ಅನುಕೂಲವಾಗುವಂತೆ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಸ್ಟಾರ್ಟ್ಪ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸೌಲಭ್ಯ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದಾರೆ. ಎಲ್ಲಾ ಫ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ವನ್ನು ಹೊಂದಲು ಅನುವು ಮಾಡಿಕೊಡಲು ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಪ್ರಾರಂಭ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಹೇಳಿದ್ದಾರೆ. ಒಟ್ಟಿನಲ್ಲಿ ಈ ಬಾರಿ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಬಜೆಟ್ ಬಿಡುಗಡೆಯಾಗಿದ್ದು ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ಸಿಕ್ಕಿದೆ ಪಾಲಕರಿಗೂ ಸಹ ಈ ಯೋಜನೆಯಿಂದ ತುಂಬಾ ಸಹಾಯವಾಗಲಿದೆ. ಆದರೆ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ