ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಕಳೆದ ಶೈಕ್ಷಣಿಕ ವರ್ಷದಲ್ಲಿ ವಿತರಿಸಲಾದ ವಿದ್ಯಾರ್ಥಿ ರಿಯಾಯಿತಿ ಪಾಸುಗಳ ಮಾನ್ಯತಾ ಅವಧಿಯು ಈಗಾಗಲೇ ಮುಗಿದಿದೆ. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು‌ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಈ ಕ್ರಮ ಕೈಗೊಂಡಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್​​

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್​​

  • Share this:
ಹುಬ್ಬಳ್ಳಿ(ಸೆ.06): ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಸಪ್ಟೆಂಬರ್ 7ರಿಂದ 19ರವರೆಗೆ  ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯಲ್ಲಿ ಸುಮಾರು 8500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೂರಕ ಪರೀಕ್ಷೆಗಳನ್ನು ಬರೆಯಲಿದ್ದಾರೆ. ಸದರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವರ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ವಿತರಿಸಲಾದ ವಿದ್ಯಾರ್ಥಿ ರಿಯಾಯಿತಿ ಪಾಸುಗಳ ಮಾನ್ಯತಾ ಅವಧಿಯು ಈಗಾಗಲೇ ಮುಗಿದಿದೆ. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು‌ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಈ ಕ್ರಮ ಕೈಗೊಂಡಿದೆ. 

ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು  ತಮ್ಮ ಕಾಲೇಜಿನ ಗುರುತಿನ ಚೀಟಿ, ಪೂರಕ ಪರೀಕ್ಷೆಯ ಪ್ರವೇಶ ಪತ್ರ ಮತ್ತು 2019- 20 ನೇ ಸಾಲಿನಲ್ಲಿ ವಿತರಿಸಲಾದ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ತೋರಿಸಿ  ಪರೀಕ್ಷೆಯ ದಿನಗಳಂದು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗಿ ಬರಲು ಸಾರಿಗೆ ಸಂಸ್ಥೆಯ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

BS6 Bikes: 65 ಸಾವಿರಕ್ಕಿಂತ ಕಡಿಮೆ ಬೆಲೆಗೆ ಸಿಗುವ ಬಿಎಸ್​6 ಬೈಕ್​ಗಳು!

ಸೆ.07 ರಿಂದ ಬಿ.ಆರ್.ಟಿ.ಎಸ್ ನಿಯಮಿತ ನಿಲುಗಡೆ ಬಸ್ ಸಂಚಾರ ಆರಂಭ

ಸರ್ಕಾರದ ಲಾಕ್ ಡೌನ್ ಸಡಿಲಿಕೆ ನಿಯಮದ ಅನುಸಾರ ಸೆ.07 ರಿಂದ ಬಿ.ಆರ್.ಟಿ.ಎಸ್ ನಿಯಮಿತ ನಿಲುಗಡೆಯ 100 ಡಿ ಬಸ್ಸ್ ಸಂಚಾರವನ್ನು ಪುನಃ ಆರಂಭಿಸಲಾಗುತ್ತಿದೆ. ಹುಬ್ಬಳ್ಳಿ ಕೇಂದ್ರೀಯ ಬಸ್ ನಿಲ್ದಾಣದಿಂದ ಧಾರವಾಡ ಬಿ.ಆರ್.ಟಿ.ಎಸ್ ( ಮಿತ್ರ ಸಮಾಜ ) ಬಸ್ ನಿಲ್ದಾಣವರೆಗೆ ನಿಯಮಿತ ನಿಲುಗಡೆಯೊಂದಿಗೆ ಚಿಗರಿ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.‌ 12 ಅನುಸೂಚಿಗಳಲ್ಲಿ ಬೆಳಿಗ್ಗೆ 07:30 ರಿಂದ ಸಾಯಂಕಾಲ 06:30 ವರೆಗೆ ಬಸ್ ಓಡಾಟವಿರಲಿದೆ. ಜನದಟ್ಟಣೆಗೆ ಅನುಗುಣವಾಗಿ ಬಸ್ ಕಾರ್ಯಾಚರಣೆ ಸಮಯ ಹಾಗೂ ಅನೂಸೂಚಿಗಳನ್ನು ಹೆಚ್ಚಿಸಲಾಗುವುದು ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
Published by:Latha CG
First published: