ಶುಕ್ರವಾರ ಸಚಿವ ಸಂಪುಟ ಸಭೆ; ಜಿಂದಾಲ್​, ವಾಲ್ಮೀಕಿ ಸಮುದಾಯದ ಮೀಸಲಾತಿ ಸೇರಿದಂತೆ ಅನೇಕ ವಿಚಾರಗಳ ಚರ್ಚೆ!

ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಸ್ತುತ ರಾಯಚೂರಿನ ಕರೇಗುಡ್ಡ ಎಂಬ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದು ಗುರುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

MAshok Kumar | news18
Updated:June 26, 2019, 12:05 PM IST
ಶುಕ್ರವಾರ ಸಚಿವ ಸಂಪುಟ ಸಭೆ; ಜಿಂದಾಲ್​, ವಾಲ್ಮೀಕಿ ಸಮುದಾಯದ ಮೀಸಲಾತಿ ಸೇರಿದಂತೆ ಅನೇಕ ವಿಚಾರಗಳ ಚರ್ಚೆ!
ಹೆಚ್​.ಡಿ. ಕುಮಾರಸ್ವಾಮಿ.
  • News18
  • Last Updated: June 26, 2019, 12:05 PM IST
  • Share this:
ಬೆಂಗಳೂರು (ಜೂನ್​.26); ರಾಜ್ಯದ ಮಹತ್ವದ ಸಚಿವ ಸಂಪುಟ ಸಭೆ ಶುಕ್ರವಾರ ಮಧ್ಯಾಹ್ನ 12.30 ಕ್ಕೆ ವಿಧಾನಸೌಧದಲ್ಲಿ ನಡೆಯಲಿದ್ದು, ಜಿಂದಾಲ್​ ಕಂಪೆನಿಗೆ ಭೂ ಪರಭಾರೆ, ವಾಲ್ಮೀಕಿ ಸಮುದಾಯದ ಮೀಸಲಾತಿ ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಸ್ತುತ ರಾಯಚೂರಿನ ಕರೇಗುಡ್ಡ ಎಂಬ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದು ಗುರುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದನ್ನೂ ಓದಿ : ರಾಯಚೂರಿಗೆ 3 ಸಾವಿರ ಕೋಟಿ ರೂ. ಅನುದಾನ; ಗ್ರಾಮವಾಸ್ತವ್ಯಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಭರವಸೆ

 ಸಭೆಯಲ್ಲಿ ಚರ್ಚೆಯಾಗಲಿವೆ ಮಹತ್ವದ ವಿಚಾರಗಳು!

 ಜಿಂದಾಲ್​ಗೆ ಕಂಪೆನಿಗೆ ಭೂ ಪರಭಾರೆ ಹಾಗೂ ವಾಲ್ಮೀಕಿ ಸಮಾಜದ ಮೀಸಲಾತಿ ವಿಚಾರ ಪ್ರಸ್ತುತ ಇಡೀ ರಾಜ್ಯದ ಗಮನ ಸೆಳೆದಿರುವ ಪ್ರಮುಖ ವಿಚಾರಗಳು. ಈಗಾಗಲೇ ಜಿಂದಾಲ್​ಗೆ ಭೂ ಪರಭಾರೆಯನ್ನು ವಿರೋಧಿಸಿ ಬಿಜೆಪಿ ಎರಡು ದಿನ ಅಹೋರಾತ್ರಿ ಧರಣಿ ನಡೆಸಿ ಇಡೀ ರಾಜ್ಯದ ಗಮನ ಸೆಳೆದಿತ್ತು. ಅಲ್ಲದೆ ಆಡಳಿತ ಸರ್ಕಾರದಲ್ಲೇ ಈ ವಿಚಾರದ ಕುರಿತಾಗಿ ಅನೇಕ ನಾಯಕರು ಈಗಾಗಲೇ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ಚರ್ಚೆಯಾಗಲಿದೆ ಅಲ್ಲದೆ, ಈ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನೂ ವಾಲ್ಮೀಕಿ ಸಮಾಜದ ಮೀಸಲಾತಿ ವಿಚಾರವೂ ಪ್ರಸ್ತುತ ದೊಡ್ಡ ಮಟ್ಟ ಚರ್ಚೆಗೆ ಕಾರಣವಾಗಿದ್ದು ಸಭೆಯಲ್ಲಿ ಮೀಸಲಾತಿ ಪರಾಮರ್ಶೆಗೆ ತಜ್ಙರ ಸಮಿತಿ ಅಥವಾ ಅಧ್ಯಯನ ಆಯೋಗ ರಚಿಸಿ ಅದರ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರ ಮೀಸಲಾತಿ ಕುರಿತು ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ : ಪರಮೇಶ್ವರ್ ನಾಯ್ಕ್ ಓರ್ವ ನಾಲಾಯಕ್ ಸಚಿವ'; ತಮ್ಮದೇ ಪಕ್ಷದ ಸಚಿವರ ವಿರುದ್ಧ ಶಾಸಕ ಭೀಮಾ ನಾಯ್ಕ್ ವಾಗ್ದಾಳಿ

ಇದಲ್ಲದೆ, ಶರಾವತಿ ಮತ್ತು ಅಘನಾಶಿನಿ ನದಿಯಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ವಿಚಾರ ಹಾಗೂ ಮಳೆಗಾಲದ ಅಧಿವೇಶನಕ್ಕೆ ದಿನಾಂಕವನ್ನು ತುರ್ತಾಗಿ ನಿಗಧಿ ಮಾಡಬೇಕಾದ ಅವಶ್ಯಕತೆ ರಾಜ್ಯ ಸರ್ಕಾರದ ಮೇಲಿದ್ದು, ಈ ಕುರಿತು ಸಹ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

First published: June 26, 2019, 12:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading