Karnataka Weather Today: ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ- ವಿವಿಧ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Rainfall: ಮಳೆಗೆ ಶೇಷಾದ್ರಿಪುರಂನ ಶಿರೂರು ಪಾರ್ಕ್ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ಮಂತ್ರಿಮಾಲ್ ಕಡೆಗೆ ಸಾಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್  ಸಮಸ್ಯೆ ಉಂಟಾಗಿ ಜನರು ಪರದಾಡುವಂತಾಗಿತ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.13):ಮುಂಗಾರು (Monsoon)ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ (Javab)ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ(Karnataka) ಸಹ ಕಳೆದ ಮಳೆಯಾಗುತ್ತಿದೆ(Rainfall). ಇನ್ನು ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವ, ವಾಯುಭಾರ ಕುಸಿತ ಉಂಟಾಗಿದ್ದು ಜೊತೆಗೆ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ  ಮೂರ್ನಾಲ್ಕು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇಂದು ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.  ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಎಲ್ಲೆಲ್ಲಿ ಅಲರ್ಟ್ ಘೋಷಣೆ?

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಅಕ್ಟೋಬರ್ 15ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ

ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು.ನಿನ್ನೆ ಸಂಜೆ ವೇಳೆಗೆ ಆರಂಭವಾಗಿ ತಡರಾತ್ರಿವರೆಗೂ ಸುರಿದ ಮಳೆಯಿಂದಾಗಿ ಬೆಂಗಳೂರು ಜನರು ಹೈರಾಣಾಗಿದ್ದಾರೆ.  ಕೆ.ಆರ್‌.ಮಾರುಕಟ್ಟೆ, ಟೌನ್‌ಹಾಲ್‌ ಮುಂಭಾಗ, ಕೆ.ಆರ್‌.ವೃತ್ತ, ಶಿವಾಜಿನಗರ, ರಾಜಾಜಿನಗರ, ಮೈಸೂರು ರಸ್ತೆ, ತುಮಕೂರು ರಸ್ತೆ, ಓಕಳಿಪುರಂ ರಸ್ತೆ ಅಂಡರ್‌ಪಾಸ್‌, ಮೇಖ್ರಿ ವೃತ್ತ ಸೇರಿದಂತೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು.

ಮಳೆಗೆ ಶೇಷಾದ್ರಿಪುರಂನ ಶಿರೂರು ಪಾರ್ಕ್ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ಮಂತ್ರಿಮಾಲ್ ಕಡೆಗೆ ಸಾಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್  ಸಮಸ್ಯೆ ಉಂಟಾಗಿ ಜನರು ಪರದಾಡುವಂತಾಗಿತ್ತು.

ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ?

ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಲಕ್ಷದ್ವೀಪ ಮತ್ತು ತಮಿಳುನಾಡು, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಸಾಧಾರಣ ಮಳೆಯಾಗಿದ್ದು, ಆಗ್ನೇಯ ರಾಜಸ್ಥಾನ, ನೈರುತ್ಯ ಮಧ್ಯಪ್ರದೇಶ, ಕರಾವಳಿ ಒಡಿಶಾ, ದಕ್ಷಿಣ ಒಳಗಿನ ಕರ್ನಾಟಕ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಅಧಿಕ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ?  

ಇದನ್ನೂ ಓದಿ: 15 ಕೋಟಿ ರೂ. ಬೆಲೆಯ ಕಡಲೆ ಕಾಳಿಗೆ ಹುಳು ಕಾಟ : ಉಗ್ರಾಣದಲ್ಲೇ ಹಾಳಾಗುತ್ತಿದೆ 3,330 ಮೆಟ್ರಿಕ್ ಟನ್ ಕಡಲೆ

ಮುಂದಿನ 24 ಗಂಟೆಗಳಲ್ಲಿ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾ ಪಶ್ಚಿಮ ಬಂಗಾಳ, ಕರಾವಳಿ ಒಡಿಶಾ, ಲಕ್ಷದ್ವೀಪ, ಕೊಂಕಣ ಮತ್ತು ಗೋವಾ ಮತ್ತು ಕರಾವಳಿ ಆಂಧ್ರಪ್ರದೇಶ, ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್ ಮತ್ತು ಈಶಾನ್ಯ ಭಾರತ ಮತ್ತು ಮಧ್ಯಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Published by:Sandhya M
First published: