ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ನಿಷೇಧ; ಕೋಲಾರ ಡಿಸಿ ಸಿ.ಸತ್ಯಭಾಮ

ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ, ಧ್ವನಿವರ್ಧಕ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಸರ್ಜನೆಯನ್ನು ನಿಷೇಧಿಸಿದ್ದು, ಮನೆಗಳಲ್ಲಿಯೇ ಗಣೇಶ ಪ್ರತಿಷ್ಠಾಪಿಸಿ ಆರಾಧಿಸಿ ಎಂದು ಡಿಸಿ ಸಿ ಸತ್ಯಭಾಮ ಸಲಹೆ ನೀಡಿದ್ದಾರೆ.

news18-kannada
Updated:August 13, 2020, 9:37 AM IST
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ನಿಷೇಧ; ಕೋಲಾರ ಡಿಸಿ ಸಿ.ಸತ್ಯಭಾಮ
ಕೋಲಾರ ಡಿಸಿ
  • Share this:
ಕೋಲಾರ(ಆ.13): ಕೊರೋನಾ ಮಹಾಮಾರಿಯ ಕಾರ್ಮೋಡ ಹಿನ್ನಲೆ ನಿರೀಕ್ಷೆಯಂತೆ ಈ ಬಾರಿಯ ಸಂಭ್ರಮದ ಗಣೇಶ ಚತುರ್ಥಿ ಹಬ್ಬವನ್ನ, ಸಾರ್ವಜನಿಕವಾಗಿ ಆಚರಿಸದಂತೆ ಸರ್ಕಾರ ಆದೇಶಿಸಿದೆ. ಈ ಹಿನ್ನಲೆ ಕೋಲಾರ ಜಿಲ್ಲಾಡಳಿತ ಪತ್ರಿಕಾಗೋಷ್ಠಿ ನಡೆಸಿ, ಸಾರ್ವಜನಿಕವಾಗಿ ಗಣೇಶ ಹಬ್ಬವನ್ನು ಆಚರಿಸದಂತೆ ಆದೇಶ ಹೊರಡಿಸಿದೆ. ಅದರ ಬದಲಾಗಿ ಪರಿಸರ ಸ್ನೇಹಿಯಾದ ಸಗಣಿಯಿಂದ, ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿನ ಸೇರಿಸಿ ತಯಾರಿಸಿದ ಗಣಪತಿ ಮೂರ್ತಿಗಳನ್ನು ತಮ್ಮ ಮನೆಗಳಲ್ಲಿ ತಯಾರಿಸಿ ಪೂಜಿಸಬೇಕು ಎಂದಿದ್ದಾರೆ.

ಅರಿಶಿಣದ ಬಳಕೆಯಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುತ್ತದೆ. ಇದರಿಂದ ಪರಿಸರಕ್ಕೆ ಯಾವುದೇ ಹಾನಿ ಆಗದೆ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವುದರಿಂದ ಪರಿಸರಕ್ಕೆ ಅಪಾರ ಕೊಡುಗೆ ನೀಡಿದಂತೆ ಆಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು.

ಮಂಡ್ಯ ಜಿ.ಪಂ. ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಜೆಡಿಎಸ್​ ಮತ್ತೆ ಮೇಲುಗೈ; ಬಿಜೆಪಿಗೆ ತೀವ್ರ ಮುಖಭಂಗ

ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ, ಧ್ವನಿವರ್ಧಕ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಸರ್ಜನೆಯನ್ನು ನಿಷೇಧಿಸಿದ್ದು, ಮನೆಗಳಲ್ಲಿಯೇ ಗಣೇಶ ಪ್ರತಿಷ್ಠಾಪಿಸಿ ಆರಾಧಿಸಿ ಎಂದು ಡಿಸಿ ಸಿ ಸತ್ಯಭಾಮ ಸಲಹೆ ನೀಡಿದ್ದಾರೆ.

ಇನ್ನು  ಸಾರ್ವಜನಿಕ ಕೆರೆ, ಬಾವಿಗಳಲ್ಲಿ ಈ ಬಾರಿ ಗಣೇಶ ವಿಸರ್ಜನೆಗೆ ಅವಕಾಶ ಇರುವುದಿಲ್ಲ. ತಮ್ಮ ತಮ್ಮ ಮನೆಗಳಲ್ಲಿಯೇ ನೀರಿನ ಬಕೆಟ್, ಪಾತ್ರೆಗಳಲ್ಲಿ ವಿಸರ್ಜನೆ ಮಾಡಬೇಕು. ಗಣೇಶ ಹಬ್ಬವನ್ನು ಎಲ್ಲರೂ ಸರಳವಾಗಿ ಮತ್ತು ಕುಟುಂಬಕ್ಕೆ ಸೀಮಿತಗೊಳಿಸಿ ನಮ್ಮ-ನಮ್ಮ ಮನೆಗಳಲ್ಲಿಯೊ ಆಚರಿಸೋಣ. ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಿ, ಮಾದರಿಯಾಗೋಣ ಎಂದು ಅಧಿಕಾರಿಗಳು  ಹೇಳಿದರು.

ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲದಿರುವುದರಿಂದ  ಡಿಜೆ ಅಥವಾ ಮೈಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ಬಳಕೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗಣೇಶ ಹಬ್ಬವನ್ನು ಆಚರಿಸುವುದು ಕಡ್ಡಾಯ,  ಜೊತೆಗೆ ಪಿಓಪಿ ಗಣೇಶ ಮೂರ್ತಿಗಳ ಸಂಗ್ರಹ ಅಥವಾ ಮಾರಾಟ ಮಾಡುವುದು ಕಂಡು ಬಂದರೆ ಪೋಲಿಸ್ ಸಹಾಯವಾಣಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಬಿತ್ತಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೋಲಿಸ್ ಎಸ್ಪಿ ಕಾರ್ತಿಕ್ ರೆಡ್ಡಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪ್ರಾದೇಶಿಕ ಕಛೇರಿಯ ಜಿಲ್ಲಾ ಪರಿಸರ ಅಧಿಕಾರಿಗಳು ಹಾಜರಿದ್ದರು.
Published by: Latha CG
First published: August 13, 2020, 8:33 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading