• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ

ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ

ಜಿಲ್ಲಾಧಿಕಾರಿಗಳ ಸಭೆ

ಜಿಲ್ಲಾಧಿಕಾರಿಗಳ ಸಭೆ

ಹಬ್ಬ ಆಚರಣೆ ವೇಳೆ ಗುಂಪು ಸೇರಿದರೆ ಒಬ್ಬರಿಂದ ಎಲ್ಲರಿಗೂ ಈ ಮಹಾಮಾರಿ ಕೋರೊನಾ ವೈರಸ್ ಹರಡುತ್ತದೆ ಎಂಬುದನ್ನು ಎಲ್ಲರೂ ಅರಿಯಬೇಕು. ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಸೂಚಿಸಿದರು. 

  • Share this:

ಬೀದರ್(ಆ.18): ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದಶಿಗಳು ಆದೇಶ ಹೊರಡಿಸಿ ತಿಳಿಸಿದ ಮಾರ್ಗಸೂಚಿನುಸಾರ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಬೀದರ ಜಿಲ್ಲೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲು ಮನವಿ ಮಾಡಿದರು. 


ಧರ್ಮದ ವಿರುದ್ಧ ಮಾಡಿರುವ ಮಾರ್ಗಸೂಚಿ ಎಂದು ಯಾರೂ ಕೂಡ ತಪ್ಪಾಗಿ ಭಾವಿಸದೇ, ನಮ್ಮೆಲ್ಲರ ಆರೋಗ್ಯ ಹಿತೃದೃಷ್ಟಿಯಿಂದ ಮಾಡಿದ ಮಾರ್ಗಸೂಚಿ ಎಂದು ತಿಳಿದು ಸಹಕರಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಬೀದರ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು. ನಮ್ಮ ಮುಂದಿನ ಪೀಳಿಗೆಗೆ ಸುರಕ್ಷಿತ ಪರಿಸರ ಕಲ್ಪಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಆದ್ದರಿಂದ ಗಣೇಶೋತ್ಸವ ಆಚರಣೆ ವೇಳೆ ಸುರಕ್ಷತೆಗೆ ಸಾಕಷ್ಟು ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳಯ ತಿಳಿಸಿದರು.


ಇದಕ್ಕೆ ಸಂಬಂಧಿಸಿದಂತೆ ಜೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳಿಗೆ ಮಾರ್ಗಸೂಚಿ ಪಾಲನೆಗೆ ಸೂಚಿಸಲಾಗುವುದು ಎಂದರು.  ಹಬ್ಬ ಆಚರಣೆ ವೇಳೆ ಗುಂಪು ಸೇರಿದರೆ ಒಬ್ಬರಿಂದ ಎಲ್ಲರಿಗೂ ಈ ಮಹಾಮಾರಿ ಕೋರೊನಾ ವೈರಸ್ ಹರಡುತ್ತದೆ ಎಂಬುದನ್ನು ಎಲ್ಲರೂ ಅರಿಯಬೇಕು. ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಸೂಚಿಸಿದರು.


Happy Birthday Gulzar: 86 ವಸಂತಗಳನ್ನು ಪೂರೈಸಿದ ಬಾಲಿವುಡ್​ನ ಖ್ಯಾತ ಕವಿ ಗುಲ್ಜಾರ್


ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್.ಅವರು ಮಾತನಾಡಿ, ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ, ಸರಳ ಆಚರಣೆ ನಡೆಸಿ ಸಹಕರಿಸಲು ಮನವಿ ಮಾಡಿದರು.


ಜಿಲ್ಲಾಡಳಿತದ ಮಾರ್ಗಸೂಚಿನುಸಾರ ಗಣೇಶೋತ್ಸವ ಆಚರಣೆಗೆ ಸಹಕರಿಸುವುದಾಗಿ ಗಣೇಶ ಮಹಾಮಂಡಳದ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ, ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ಹಾಗೂ ಮಹಾಮಂಡಳದ ಪದಾಧಿಕಾರಿಗಳಾದ ಸೂರ್ಯಕಾಂತ ಶೆಟಕಾರ, ರಜನೀಶ ವಾಲಿ, ವೀರಶೆಟ್ಟಿ, ವೆಂಕಟೇಶ ಮೋರ್ಕಂಡಿ ಅವರು ತಿಳಿಸಿದರು.


ದೊಡ್ಡ ದೊಡ್ಡ ಗಾತ್ರದ ಗಣೇಶ ಮೂರ್ತಿಗಳು ಹೈದ್ರಾಬಾದ್ ಮತ್ತು ಇನ್ನಿತರ ಕಡೆಗಳಿಂದ ಬೀದರ್​​ಗೆ ಬರುವುದನ್ನು ಜಿಲ್ಲಾಡಳಿತವು ಬ್ಯಾನ್ ಮಾಡಬೇಕು. ಇನ್ನುಳಿದ ಎಲ್ಲ ನಿಯಮಗಳ ಪಾಲನೆಗೆ ಕ್ರಮವಹಿಸಬೇಕು ಎಂದು ಗಣೇಶ ಮಹಾಮಂಡಳದ ಎಲ್ಲ ಸದಸ್ಯರು ಜಿಲ್ಲಾಡಳಿತಕ್ಕೆ ಸಲಹೆ ಮಾಡಿದರು.


ಸರ್ಕಾರದ ಮಾರ್ಗಸೂಚಿಯನುಸಾರ ಅವಕಾಶವಿದ್ದರೆ, ಚಿಕ್ಕ ಚಿಕ್ಕ ಮಣ್ಣಿನ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ಮಾಡಿದರೆ, ಮುಂದಿನ ವರ್ಷದಿಂದ ಜನರು ಇದೇ ನಿಯಮ ಪಾಲನೆ ಮಾಡುವುದರಿಂದ ಪರಿಸರಕ್ಕೆ ಅನುಕೂಲವಾಗಲಿದೆ ಎಂದು ಮಹಾಮಂಡಳದ ಎಲ್ಲ ಸದಸ್ಯರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

Published by:Latha CG
First published: