DK Shivakumar| ಗಣಪತಿ ಮೂರ್ತಿ 2-4 ಅಡಿಗೆ ನಿರ್ಬಂಧ ಆದೇಶ ಹಿಂಪಡೆಯಬೇಕು; ಸರಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

ಸರ್ಕಾರ ಅಂತಿಮ ಗಳಿಗೆಯಲ್ಲಿ ಈ ನಿರ್ಧಾರ ತೆಗೆದುಕೊಂಡರೆ, ಈಗ ಮಾಡಿರುವ ಮೂರ್ತಿಗಳನ್ನು ನಿರ್ಧಾರ ಪ್ರಕಟಿಸಿರುವವರ ಮನೆ ಮುಂದೆ ಇಡಬೇಕಾ? ನಿರ್ಧಾರ ಪ್ರಕಟಿಸಿರುವವರೇ ಇವುಗಳನ್ನು ಖರೀದಿಸಲಿ ಎಂದು ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಡಿ.ಕೆ. ಶಿವಕುಮಾರ್.

ಡಿ.ಕೆ. ಶಿವಕುಮಾರ್.

 • Share this:
  ಬೆಂಗಳೂರು (ಸೆಪ್ಟೆಂಬರ್ 08): ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. 'ಕಳೆದ 2 ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು ಮೂರು ತಿಂಗಳ ಹಿಂದೆಯೇ ಹೇಳಿದ್ದರೆ, ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ' ಎಂದು ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  'ಕೋವಿಡ್ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಈ ನಿರ್ಬಂಧ ಹೇರಿದರೆ ಅವರು ಎಲ್ಲಿಗೆ ಹೋಗಬೇಕು? ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಹೀಗಿರುವಾಗ ಈ ರೀತಿ ನಿರ್ಬಂಧ ಎಷ್ಟು ಸರಿ? ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದ್ದಾರೆ.

  'ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿರುವುದು ದುರಾದೃಷ್ಟಕರ ಸಂಗತಿ. ಗಣೇಶ ಪ್ರತಿಮೆಯನ್ನು ಮನೆಯಲ್ಲಿ 2 ಅಡಿ, ಸಾರ್ವಜನಿಕ ಪ್ರದೇಶದಲ್ಲಿ 4 ಅಡಿಗೆ ಸೀಮಿತಗೊಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ' ಎಂದು ಕುಟುಕಿದ್ದಾರೆ.

  'ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ ಗಣೇಶನ ಪ್ರತಿಮೆ 2-4 ಅಡಿಯೇ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ? ಹಿಂದೂ ಸಂಸ್ಕೃತಿ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ?' ಎಂದು ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

  ಇದನ್ನೂ ಓದಿ: Arrest Trisha is trending| ಹಿಂದೂಗಳ ಭಾವನೆಗೆ ಧಕ್ಕೆ; ನಟಿ ತ್ರಿಶಾ, ನಿರ್ದೇಶಕ ಮಣಿರತ್ನಂ ಬಂಧನಕ್ಕೆ ಒತ್ತಾಯ

  ಸರ್ಕಾರ ಅಂತಿಮ ಗಳಿಗೆಯಲ್ಲಿ ಈ ನಿರ್ಧಾರ ತೆಗೆದುಕೊಂಡರೆ, ಈಗ ಮಾಡಿರುವ ಮೂರ್ತಿಗಳನ್ನು ನಿರ್ಧಾರ ಪ್ರಕಟಿಸಿರುವವರ ಮನೆ ಮುಂದೆ ಇಡಬೇಕಾ? ನಿರ್ಧಾರ ಪ್ರಕಟಿಸಿರುವವರೇ ಇವುಗಳನ್ನು ಖರೀದಿಸಲಿ ಎಂದು ಒತ್ತಾಯಿಸಿದ್ದಾರೆ.

  ಸರಕಾರದ ಈ ತಿಕ್ಕಲುತನದ ನಿರ್ಧಾರ "ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ" ಎಂಬಂತಿದೆ ಎಂದು ಅವರು ಟೀಕಿಸಿದ್ದಾರೆ. ನಾವು ಕೋವಿಡ್ ನಿಯಮದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ, ಸರ್ಕಾರದ ಅವೈಜ್ಞಾನಿಕ ತೀರ್ಮಾನ ಪ್ರಶ್ನಿಸುತ್ತಿದ್ದೇವೆ. ಈ ವೃತ್ತಿ ಅವಲಂಬಿಸಿರುವವರ ಬದುಕು ಬೀದಿ ಪಾಲಾಗಬಾರದು. ಗಣೇಶ ಹಬ್ಬಕ್ಕೆ ಇನ್ನು ಎರಡು ದಿನ ಕಾಲಾವಕಾಶ ಇದೆ. ಸರ್ಕಾರ ಈ ಅರ್ಥಹೀನ ನಿರ್ಬಂಧ ವಾಪಸ್ ಪಡೆಯಬೇಕು ಅಥವಾ ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು' ಎಂದು ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

  ಇದನ್ನೂ ಓದಿ: Crime News| ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ದರೋಡೆಗೆ ಯತ್ನ; ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರು!

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: