ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್..!

ನಡೆದ ಘಟನೆ ಬಗ್ಗೆ ಮನೆಯಲ್ಲಿ ತಿಳಿಸಿದರೂ ಆಕೆಯ ಪೋಷಕರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎನ್ನಲಾಗಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಸಂತ್ರಸ್ತೆ ತನ್ನ ಗೆಳತಿಯ ಜೊತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದಾಳೆ ಎಂದು ತಿಳಿದು ಬಂದಿದೆ.

news18
Updated:February 12, 2019, 1:26 PM IST
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್..!
ಸಾಂದರ್ಭಿಕ ಚಿತ್ರ
news18
Updated: February 12, 2019, 1:26 PM IST
ಪುಟ್ಟಪ್ಪ

ಮೈಸೂರು,(ಫೆ.12): ಸಾಂಸ್ಕೃತಿಕ ನಗರಿ, ಅರಮನೆ ನಗರಿ ಎಂದೇ ಪ್ರಸಿದ್ಧಿಯಾಗಿರುವ ಮೈಸೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಸಿಲಿಕಾನ್​ ಸಿಟಿಯಂತಹ ಮಹಾನಗರಿಗಳಲ್ಲಿ ಸದ್ದು ಮಾಡುತ್ತಿದ್ದ ಗ್ಯಾಂಗ್​ ರೇಪ್​ ಪದ ಮೈಸೂರಿನಲ್ಲಿಯೂ ಕೇಳಿ ಬಂದಿದ್ದು, ಜನ ಬೆಚ್ಚಿ ಬಿದ್ದಿದ್ಧಾರೆ.

ಯುವತಿಯ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ನಿಕೃಷ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಫೆ.3 ರಂದೇ ನಡೆದಿದ್ದು,  ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸಂಬಂಧ ಫೆ. 8 ರಂದು ಮೈಸೂರಿನ ನಜರ್​ಬಾದ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ಒಬ್ಬ ಆರೋಪಿಯನ್ನು ಬಂಧಿಸಿದ್ಧಾರೆ.

ಯುವತಿಯ ಸ್ನೇಹಿತ ಚಿರಾಗ್​ ಎಂಬಾತ ಬಂಧಿತ ಆರೋಪಿ. ಈತ ಯುವತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್​ನಲ್ಲಿ ಕೊಳ್ಳೇಗಾಲಕ್ಕೆ ತೆರಳುವ ರಸ್ತೆಯಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ಧಾನೆ. ಬಳಿಕ ಆತನ ಗೆಳೆಯರು ಜೊತೆ ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ಧಾರೆ ಎಂದು ಸಂತ್ರಸ್ತೆ ದೂರಿನಲ್ಲಿ ದಾಖಲಿಸಿದ್ದಾರೆ.

ಯುವತಿಯನ್ನು ಕಾರಿನಿಂದ ಹೊರಗೆಳೆದು 10 ಮಂದಿಯಿಂದ ಸಾಮೂಹಿಕ ಅತ್ಯಾಚಾರ!

ತನ್ನ ಗುಪ್ತಾಂಗವನ್ನು ಬ್ಲೇಡ್​ನಲ್ಲಿ ಕೊಯ್ದಿದ್ಧಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ಧಾಳೆ. ನಡೆದ ಘಟನೆ ಬಗ್ಗೆ ಮನೆಯಲ್ಲಿ ತಿಳಿಸಿದರೂ ಆಕೆಯ ಪೋಷಕರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎನ್ನಲಾಗಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಸಂತ್ರಸ್ತೆ ತನ್ನ ಗೆಳತಿಯ ಜೊತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ನಜರ್​ಬಾದ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ಧಾರೆ. ಆರೋಪಿ ಚಿರಾಗ್​ ಪೊಲೀಸರ ವಶದಲ್ಲಿದ್ದು, ಆತನ ಸ್ನೇಹಿತರಿಗಾಗಿ ಹುಡುಕಾಟ ನಡೆಸಿದ್ಧಾರೆ.
Loading...

ಪ್ರವಾಸಿ ತಾಣವಾಗಿರುವ ಮೈಸೂರಿಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಘಟನೆ ನಡೆದಿರುವುದು ಮೈಸೂರಿಗೆ ಕಪ್ಪು ಚುಕ್ಕೆಯಂತಾಗಿದ್ದು, ಜನತೆ ಭಯಭೀತರಾಗಿದ್ದಾರೆ.

First published:February 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ