ಪಾಕ್​​​​​​ ಪರ ಘೋಷಣೆ ಆರೋಪ: ಅರುದ್ರಾಗೆ 14 ದಿನ ನ್ಯಾಯಾಂಗ ಬಂಧನ

ಇನ್ನು ಪಾಕ್​​ ಪರ ಘೋಷಣೆ ಕೂಗಿದ್ದಾಳೆ ಎನ್ನಲಾದ ಮತ್ತೋರ್ವ ಯುವತಿ ಅರುದ್ರಾ ವಿರುದ್ಧ ಎಸ್‌ಜೆ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ 153ಎ ಮತ್ತು153ಬಿ ಸೆಕ್ಷನ್​​ ಅಡಿಯಲ್ಲಿ ಪೊಲೀಸರು ಎಫ್​​ಐಆರ್​ ದಾಖಲಿಸಿಕೊಂಡಿದ್ದಾರೆ.

ಬಂಧಿತ ಯುವತಿ ಅರಿದ್ರಾ.

ಬಂಧಿತ ಯುವತಿ ಅರಿದ್ರಾ.

  • Share this:
    ಬೆಂಗಳೂರು(ಫೆ.21): ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಗರದ 6ನೇ ಎಸಿಎಂಎ ನ್ಯಾಯಾಧೀಶ ಕೃಷ್ಣಮೂರ್ತಿಯವರು ಹೀಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಮಾರ್ಚ್​​​​ 5ರವೆಗೂ ನ್ಯಾಯಾಂಗ ಬಂಧನದಲ್ಲಿರುವ ಅರುದ್ರಾಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ.

    ಇಂದು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ಮೂಲಕ ವಿವಾದ ಸೃಷ್ಟಿಸಿದ್ದ ಅಮೂಲ್ಯ ಲಿಯೋನಾ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಟೌನ್ ಹಾಲ್ ಬಳಿ ಹಿಂದೂಪರ ಸಂಘಟನೆಗಳು ಅಮೂಲ್ಯ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲೀಗ ಮತ್ತೋರ್ವ ಯುವತಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೂಗಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಹೀಗೆ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎನ್ನಲಾದ ಯುವತಿಯನ್ನು ಅರುದ್ರಾ ಎಂದು ಗುರುತಿಸಲಾಗಿದೆ.

    ಸಿಎಎ ವಿರೋಧಿಸಿ ಪ್ರತಿಭಟನೆ ವೇಳೆ ಫ್ರೀಡಂ ಪಾರ್ಕ್‌ನಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಅಮೂಲ್ಯ ಲಿಯೋನಾ ಘೋಷಣೆ ಕೂಗಿದ್ದಳು. ಈಕೆ ವಿರುದ್ಧ ಹಿಂದೂಪರ ಸಂಘಟನೆಗಳು ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದವು. ಆಗ ಅರುದ್ರಾ ಎಂಬಾಕೆ ದಿಢೀರ್​​​, ಮುಸಲ್ಮಾನ್, ದಲಿತ, ಕಾಶ್ಮೀರಿ, ಟ್ರಾನ್ಸ್ , ಆದಿವಾಸ ಮುಕ್ತಿ' ಎಂದು ಬರೆದಿದ್ದ ಭಿತ್ತಿಪತ್ರ ಪ್ರದರ್ಶಿಸಿದಳು. ನಂತರ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಳೆ ಎಂದು ಪ್ರತಿಭಟನೆ ಆಯೋಜಿಸಿದ್ದ ಸಂಘಟಕರು ಆರೋಪಿಸಿದ್ದಾರೆ.

    ಇದನ್ನೂ ಓದಿ: ‘ಪಾಕ್​​​​​​ ಪರ ಘೋಷಣೆ‘ ಕೂಗಿದ ಆರೋಪ ಹೊತ್ತ ಮತ್ತೋರ್ವ ಯುವತಿ ಯಾರು? ಆಕೆ ಹಿನ್ನೆಲೆಯೇನು?

    ಇನ್ನು ಪಾಕ್​​ ಪರ ಘೋಷಣೆ ಕೂಗಿದ್ದಾಳೆ ಎನ್ನಲಾದ ಮತ್ತೋರ್ವ ಯುವತಿ ಅರುದ್ರಾ ವಿರುದ್ಧ ಎಸ್‌ಜೆ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ 153ಎ ಮತ್ತು153ಬಿ ಸೆಕ್ಷನ್​​ ಅಡಿಯಲ್ಲಿ ಪೊಲೀಸರು ಎಫ್​​ಐಆರ್​ ದಾಖಲಿಸಿಕೊಂಡಿದ್ದಾರೆ.

    ಅರುದ್ರಾ ಗ್ರಾಫಿಕ್ ಡಿಸೈನರ್. ಮೂಲತ ಮಲ್ಲೇಶ್ವರ ನಿವಾಸಿ. ಆಕೆ ಖಾಸಗಿ ಕಾಲೇಜೊಂದರಲ್ಲಿ ಪದವಿ ಪೂರ್ಣಗೊಳಿಸಿದ್ದಳು. ಸದ್ಯ ಖಾಸಗಿ ಕಂಪನಿಯಲ್ಲಿ ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಳು. ಅರುದ್ರಾಳ ಮೂಲ ಹೆಸರು ಅನ್ನಪೂರ್ಣ ಎನ್ನಲಾಗಿದೆ. ಅರುದ್ರಾ ತಾಯಿ ರಮಾ, ತಂದೆ ನಾರಾಯಣ್. ಎರಡು ವರ್ಷದ ಹಿಂದೆ ಈಕೆ ಅಪ್ಪ ಅಮ್ಮನಿಂದ ದೂರವಾಗಿದ್ದಳು. ನಂತರ ಮಲ್ಲೇಶ್ವರಂನ ಅಜ್ಜಿ ಮನೆಯಲ್ಲಿ ಇದ್ದಳು. ಬಳಿಕ ಸ್ನೇಹಿತೆಯೊಂದಿಗೆ ವಾಸವಿದ್ದಳು. ಎಡಪಂಥೀಯ ಚಿಂತನೆಗಳತ್ತ ಒಲವು ಹೊಂದಿದ್ದ ಅರುದ್ರಾ, ತನ್ನ ಹೆಸರು ಬದಲಿಸಿಕೊಂಡಿದ್ದಳು.
    First published: