Basavaraj Bommai: ಮಳೆಯಿಂದಾದ ಮನೆ ಹಾನಿಗೆ ತಕ್ಷಣ ಪರಿಹಾರ ನೀಡಿ: ಸಿಎಂ ಬೊಮ್ಮಾಯಿ ಸೂಚನೆ

ಜೂನ್ ಒಂದರಿಂದ ಈವರೆಗೆ ಆಗಿರುವ ಭಾರೀ ಮಳೆಯಿಂದ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

  • Share this:
    ಬೆಂಗಳೂರು (ಆ.02): ಮಳೆಯಿಂದ ರಾಜ್ಯದ ಹಲವಡೆ ಭಾರೀ ಹಾನಿಯಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು (Rain Damage) 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ (Video Conference) ನಡೆಸಿದರು. ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆಯಿಂದ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಮಳೆಯಿಂದಾದ ಹಾನಿ ಬಗ್ಗೆ ವರದಿ ನೀಡಲಾಗಿದೆ.  ಬೆಳೆ ಹಾನಿ: ಒಟ್ಟು 3499 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ದು, 2057 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶವಾಗಿದೆ. 2430 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 4378 ಮನೆಗಳು ಭಾಗಶಃ ಹಾನಿಯಾಗಿವೆ.  ಜೀವ ಹಾನಿ -39. 99 ಪ್ರಾಣಿ ಹಾನಿಯಾಗಿದೆ. 1730 ಕಿ.ಮೀ ರಸ್ತೆ ಹಾನಿ, 5419 ಕಿ.ಮಿ ಗ್ರಾಮೀಣ ರಸ್ತೆ ಹಾನಿಯಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    629 ಸೇತುವೆಗಳು ಹಾನಿಯಾಗಿವೆ - 3264 ಶಾಲಾ ಕಟ್ಟಡಗಳು ಹಾನಿಯಾಗಿದ್ದು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳ ಹಾನಿಯಾಗಿವೆ. 11796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಹಾಗೂ 759 ಟ್ರಾನ್ಸ್ ಫಾರ್ಮರ್​ಗಳು ಹಾನಿಗೊಳಪಟ್ಟಿವೆ.

    ಇದನ್ನೂ ಓದಿ: Monkeypox: ಕರ್ನಾಟಕದಲ್ಲಿ 3 ಶಂಕಿತ ಕೇಸ್, ಆದ್ರೂ ಆತಂಕ ಬೇಡ ಅಂತಿದ್ದಾರೆ ಸುಧಾಕರ್​

    ಸಭೆಯ  ಅಧಿಕಾರಿಗಳಿಗೆ ಸಿಎಂ ಸೂಚನೆ

    1. ಸತತ ಮಳೆಯಿಂದ ಎಲ್ಲಾ ಕೆರೆಗಳು ತುಂಬಿವೆ. ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿರುತ್ತವೆ. ಸಂಗ್ರಹ ಸಾಮರ್ಥ್ಯ ಹೆಚ್ಚಿರುವ ಕೆರೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆರೆಗಳು ವಡ್ಡು ಬಿರುಕು ಬಿಡದಂತೆ ಎಚ್ಚರ ವಹಿಸಬೇಕು. ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್ ಈ ಬಗ್ಗೆ ಜಂಟಿಯಾಗಿ ಕಾರ್ಯನಿರ್ವಹಿಸುವುದು.

    2. ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚನೆ

    3. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು ಪುನ:ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಿ

    4. ಬಿದ್ದುಹೋದ ಮನೆಗಳ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ ಕೈಗೊಳ್ಳುವುದು. ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವುದು.

    5. ಭಟ್ಕಳದಲ್ಲಿ ಹಾಗೂ ಸುಳ್ಯದ ಸೇರಿದಂತೆ ಇತರ ಕಡೆಗಳ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸುವುದು.

    6. ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು

    7. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತವಾಗುವ ಬಗ್ಗೆ ಎಚ್ಚರ ವಹಿಸಬೇಕು.

    8. ಪ್ರವಾಹದಂಥ ತುರ್ತು ಸಂದರ್ಭದಲ್ಲಿ ತಕ್ಷಣ ಪರಿಹಾರ ಕ್ರಮ‌ಕೈಗೊಂಡು, ಆ ಮೂಲಕ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂಬ ಸಂದೇಶ ರವಾನೆ ಮಾಡಬೇಕಿದೆ.

    ಇದನ್ನೂ ಓದಿ: HDK Warning: 'ಇನ್ನೆಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರ್ತಿದ್ದಾರೆ ಅಮಿತ್​ ಶಾ?'​

    9. ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ, ಕೂಡಲೇ ಪರಿಹಾರ ವಿತರಿಸಲು ಸೂಚನೆ.

    10. ಹಾನಿಯಾಗಿರುವ ಮನೆಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ತಾಲೂಕಿನ ಇಓ ಗಳಿಂದ ಪಡೆಯುವುದು.

    11. ಕಾಳಜಿ ಕೇಂದ್ರಗಳಲ್ಲಿ ಎಲ್ಲಾ ವ್ಯವಸ್ಥೆ ಗಳನ್ನು ತಹಶೀಲ್ದಾರ್ ಗಳು ಖಾತರಿ ಪಡಿಸಿಕೊಂಡು ಅದನ್ನು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು.

    12. ಮೈಸೂರು, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು.

    13. ಹಾನಿಗೊಳಗಾಗಿರುವ ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡಲು ಸೂಚನೆ

    14. ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವುದು.

    ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
    Published by:Pavana HS
    First published: