Gold and Silver Price : ಏರಿಕೆ ಕಂಡ ಚಿನ್ನದ ಬೆಲೆ- ಚಿನ್ನಾಭರಣ ಪ್ರಿಯರಿಗೆ ಬಿಗ್ ಶಾಕ್

Today's Gold and silver Rate: ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಚಿನ್ನಾಭರಣ  ಎಂದರೆ ಪ್ರತಿಯೊಬ್ಬರಿಗೂ ಇಷ್ಟ. ಅದರಲ್ಲೂ ಭಾರತೀಯರಿಗೆ ಅವುಗಳ ಮೇಲೆ ವ್ಯಾಮೋಹ ಜಾಸ್ತಿ. ಇನ್ನು ಮದುವೆ ಸೀಸನ್ ಆರಂಭವಾಗುತ್ತಿದೆ ಚಿನ್ನ ಬೆಳ್ಳಿ ಖರೀದಿ ಮಾಡಲು ಜನ ಮುಗಿ ಬೀಳುತ್ತಾರೆ, ಆದರೆ ಕಳೆದ ಕೆಲವು ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಳಿತಗಳಾಗುತ್ತಿವೆ. ಇಂದು ಪ್ರಮುಖ ನಗರದ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ನಿನ್ನೆ ಬೆಲೆಗೆ ಹೋಲಿಸಿದರೆ ಹೇಗಿದೆ  ಎಂಬುದು  ಇಲ್ಲಿದೆ.

 ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ಇದೆ. ಸುಮಾರು 1,500 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ಇದೆ. 1,600 ರೂಪಾಯಿ ಏರಿಕೆ ಆಗಿದೆ. ಕಳೆದ 2 ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆಯಾಗಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ.

ಭಾರತದಲ್ಲಿ ಮೊನ್ನೆಯಿಂದ ಇಳಿಕೆ ಕಾಣುತ್ತಿದ್ದ ಬೆಳ್ಳಿ ಬೆಲೆ ಇಂದು  ಹೆಚ್ಚಾಗಿದೆ. ನಿನ್ನೆ 1 ಕೆ.ಜಿ ಬೆಳ್ಳಿಗೆ 200 ರೂಪಾಯಿ ಕಡಿಮೆಯಾಗಿತ್ತು. ಆದರೆ ಇಂದೂ ಸಹ 1 ಕೆಜಿ ಬೆಳ್ಳಿಗೆ 800 ರೂಪಾಯಿ ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 63,000  ರೂ. ಇತ್ತು. ಇಂದು ಅದೇ ಬೆಳ್ಳಿಗೆ ರೂ.63.800 ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 63,800 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 68,700 ರೂ. ಆಸುಪಾಸಿನಲ್ಲಿದೆ.

ಇದನ್ನೂ ಓದಿ: ಬಳ್ಳಾರಿ, ದಾವಣಗೆರೆಯಲ್ಲಿ 107 ರೂ ಗಡಿ ದಾಟಿದ ಪೆಟ್ರೋಲ್ ಬೆಲೆ- ಬೆಂಗಳೂರು ಸೇರಿ ಜಿಲ್ಲಾವಾರು ಪಟ್ಟಿ

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

 
Published by:Sandhya M
First published: