Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, 4,200 ರೂ.ಇಳಿಕೆ ಕಂಡ ಬೆಳ್ಳಿ ಬೆಲೆ

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

ಚಿನ್ನಾಭರಣ

ಚಿನ್ನಾಭರಣ

  • Share this:
Gold Rate on October 11 2021: ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ(Gold Price) ನಿರಂತರವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಡುತ್ತಿದೆ. ಇಂದು ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,940 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,940 ರೂ. ಇತ್ತು. ಇಂದೂ ಸಹ ಅದೇ ಬೆಲೆ ಕಾಯ್ದುಕೊಂಡಿದೆ.

ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,890 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,900 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,890 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,900 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಇಂದಿನ ಬೆಳ್ಳಿ ದರ:

ಕಳೆದ 2 ದಿನಗಳಿಂದ ಬೆಳ್ಳಿ ದರ (Silver Rate) ಏರಿಕೆಯಾಗುತ್ತಿತ್ತು. ಆದರೆ ಇಂದು ಬೆಳ್ಳಿ ಬೆಲೆ ಇಳಿಕೆಯಾಗಿದೆ. ಇಂದು 1 ಕೆಜಿ ಬೆಳ್ಳಿಗೆ 4,200 ರೂಪಾಯಿ ಕಡಿಮೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 65,900 ರೂ. ಇತ್ತು. ಇಂದು 1 ಕೆಜಿ ಬೆಳ್ಳಿಗೆ 61,700 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 61,700 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,800 ರೂ. ಆಸುಪಾಸಿನಲ್ಲಿದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by:Latha CG
First published: