Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿಗೆ 200 ರೂ. ಕುಸಿತ

ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಮತ್ತೆ ಕುಸಿತ ಕಂಡಿದೆ. ಇಂದು 200 ರೂ. ಇಳಿಕೆ ಕಾಣುವ ಮೂಲಕ 1 ಕೆಜಿ ಬೆಳ್ಳಿಗೆ 68,500 ರೂ. ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold Rate Today: ಕಳೆದ 5 ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿತ್ತು. ಆದರೆ, ನಿನ್ನೆಯಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 220 ರೂ. ಏರಿಕೆಯಾಗುವ ಮೂಲಕ 48,220 ರೂ. ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ನಿನ್ನೆ 44,000 ರೂ. ಇದ್ದುದು ಇಂದು 44,200 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಮತ್ತೆ ಕುಸಿತ ಕಂಡಿದೆ. ಇಂದು 200 ರೂ. ಇಳಿಕೆ ಕಾಣುವ ಮೂಲಕ 1 ಕೆಜಿ ಬೆಳ್ಳಿಗೆ 68,500 ರೂ. ಆಗಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,190 ರೂ. ಇದ್ದುದು, ಇಂದು 46,240 ರೂ.ಗೆ ಏರಿಕೆ ಆಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,190 ರೂ. ಇದ್ದುದು ಇಂದು 47,240 ರೂ.ಗೆ ಏರಿಕೆ ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

    ಇದನ್ನೂ ಓದಿ: Karnataka Weather Today: ಕರಾವಳಿ ಸೇರಿ ಬಹುತೇಕ ಕಡೆ ಇನ್ನೂ 3 ದಿನ ಭಾರೀ ಮಳೆ; ನೆರೆಯ ರಾಜ್ಯಗಳಲ್ಲೂ ಮುಂಗಾರಿನ ಅಬ್ಬರ

    ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,220 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,200 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,000 ರೂ.ಗೆ ಸಮೀಪದಲ್ಲಿದೆ.

    ಭಾರತದಲ್ಲಿ ಬೆಳ್ಳಿ ದರ ಭಾರೀ ಇಳಿಕೆ ಕಂಡಿದೆ. ಇಂದು 1 ಕೆಜಿಗೆ 200 ರೂ. ಕಡಿಮೆಯಾಗಿದ್ದು, 68,500 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 68,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,900 ರೂ. ಆಸುಪಾಸಿನಲ್ಲಿದೆ.

    ಇದನ್ನೂ ಓದಿ: Tirath Singh Rawat Resign| ಅಧಿಕಾರ ವಹಿಸಿಕೊಂಡ 4 ತಿಂಗಳಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಉತ್ತರಾಖಂಡ ಸಿಎಂ!

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
    Published by:Sushma Chakre
    First published: