HOME » NEWS » State » GOLD RATE TODAY CHECK LATEST GOLD PRICE AND SILVER RATE HERE GOLD RATE IN BANGALORE SCT

Gold Rate Today: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿಯ ದರವೆಷ್ಟು?

Gold Silver Price Today: ಬೆಂಗಳೂರಿನಲ್ಲಿ 3 ದಿನಗಳ ಹಿಂದೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 51,050ಕ್ಕೆ ಏರಿಕೆಯಾಗಿದೆ.

news18-kannada
Updated:January 8, 2021, 3:53 PM IST
Gold Rate Today: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿಯ ದರವೆಷ್ಟು?
ಚಿನ್ನ
  • Share this:
ಕಳೆದ ವಾರ ಭಾರತದಲ್ಲಿ 10 ಗ್ರಾಂಗೆ 49,300 ರೂ. ಇದ್ದ ಚಿನ್ನದ ಬೆಲೆ ಇಂದು 49,720 ರೂ. ಆಗಿದೆ. ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,610 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 46,410 ರೂ. ಇದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,720 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,720 ರೂ. ಆಗಿದೆ. ಇದು ಆಯಾ ನಗರಗಳಲ್ಲಿ ವ್ಯತ್ಯಾಸವಾಗಲಿದೆ.

ಬೆಂಗಳೂರಿನಲ್ಲಿ 2 ದಿನಗಳ ಹಿಂದೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 50,610ಕ್ಕೆ ಏರಿಕೆಯಾಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 46,410 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. 3 ದಿನಗಳಿಂದ ಬೆಂಗಳೂರಿನಲ್ಲಿ ಕಡಿಮೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ.

ಇದನ್ನೂ ಓದಿ: Sonia Gandhi: 23 ರೆಬೆಲ್ ನಾಯಕರೊಂದಿಗೆ ಸೋನಿಯಾ ಗಾಂಧಿ ಇಂದು ಮಹತ್ವದ ಸಭೆ

ಭಾರತದಲ್ಲಿ ಬೆಳ್ಳಿಯ ಬೆಲೆ ಸತತ 3 ದಿನಗಳಿಂದ ಒಂದೇ ರೀತಿಯಲ್ಲಿದೆ. 1 ಕೆಜಿ ಬೆಳ್ಳಿಗೆ ನಿನ್ನೆ 65,610 ರೂ. ಇದ್ದುದು ಇಂದು 67,700 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಗೆ 67,500 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ಭುವನೇಶ್ವರ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ ಭಾರೀ ಹೆಚ್ಚಳವಾಗಿದ್ದು, 1 ಕೆಜಿಗೆ 71,000 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. 10 ದಿನಗಳಿಂದ ಚಿನ್ನದ ಬೆಲೆಯಲ್ಲೂ ಏರಿಳಿತಗಳು ಉಂಟಾಗುತ್ತಿದೆ.
Published by: Sushma Chakre
First published: December 19, 2020, 11:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories