HOME » NEWS » State » GOLD RATE TODAY CHECK LATEST GOLD PRICE SILVER RATE IN BANGALORE SCT

Gold Rate Today: ಬೆಂಗಳೂರಿನಲ್ಲಿ 49 ಸಾವಿರ ದಾಟಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ ಕೊಂಚ ಹೆಚ್ಚಳ

Gold Silver Price: ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ಇಂದು 49,650 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,510 ರೂ. ಆಗಿದೆ.

news18-kannada
Updated:January 19, 2021, 9:43 AM IST
Gold Rate Today: ಬೆಂಗಳೂರಿನಲ್ಲಿ 49 ಸಾವಿರ ದಾಟಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ ಕೊಂಚ ಹೆಚ್ಚಳ
ಚಿನ್ನ
  • Share this:
Gold Rate Today | ಮೂರ್ನಾಲ್ಕು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಇಳಿಮುಖವಾಗಿದೆ. 4 ದಿನಗಳ ಹಿಂದೆ 49 ಸಾವಿರವಿದ್ದ ಚಿನ್ನದ ದರ ಇಂದು 48,970 ರೂ. ಆಗಿದೆ. ಇನ್ನು, ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 52,000 ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ಇಂದು 49,650 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,510 ರೂ. ಆಗಿದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ Gold Rate ಇಳಿಕೆಯಾಗಿದ್ದು, 48,460 ರೂನಿಂದ 47,970 ರೂ.ಗೆ ಇಳಿದಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಇಳಿಕೆಯಾಗಿದ್ದು, 48,970 ರೂ. ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 49,650 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,510 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ನಾಲ್ಕೈದು ದಿನಗಳಿಂದ ಚಿನ್ನದ ಬೆಲೆ ಬೆಂಗಳೂರಿನಲ್ಲಿ ಏರಿಕೆಯಾಗುತ್ತಲೇ ಇದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 52,500 ರೂ. ದಾಟಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು; ಹಲ್ಲೆಗೆ ಯತ್ನಿಸಿದ ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಇಳಿಕೆಯಾಗಿದೆ. 3 ದಿನಗಳ ಹಿಂದೆ 66,600 ರೂ. ಇದ್ದ 1 ಕೆಜಿ ಬೆಳ್ಳಿ ಬೆಲೆ ಇಂದು 65,600 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಗೆ 65,600 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 70 ಸಾವಿರ ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
Published by: Sushma Chakre
First published: January 19, 2021, 9:43 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories