HOME » NEWS » State » GOLD RATE TODAY GOLD PRICE DOWN FROM RECORD HIGH IN BENGALURU SILVER RATE TODAY SCT

Gold Rate Today: ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; 2 ಸಾವಿರ ರೂ. ಕುಸಿತ ಕಂಡ ಬೆಳ್ಳಿ ದರ

Gold Price Today: ಬೆಂಗಳೂರಿನಲ್ಲಿ 2 ದಿನಗಳ ಹಿಂದೆ 50,230 ರೂ. ಇದ್ದ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 49,800 ರೂ. ಆಗಿದೆ. ಭಾರತದಲ್ಲಿ ಮೂರ್ನಾಲ್ಕು ದಿನಗಳ ಹಿಂದೆ 67,000 ರೂ. ಇದ್ದ 1 ಕೆಜಿ ಬೆಳ್ಳಿ ಬೆಲೆ ಇಂದು 65,900 ರೂ. ಆಗಿದೆ.

news18-kannada
Updated:January 28, 2021, 10:47 AM IST
Gold Rate Today: ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; 2 ಸಾವಿರ ರೂ. ಕುಸಿತ ಕಂಡ ಬೆಳ್ಳಿ ದರ
ಚಿನ್ನ
  • Share this:
Gold Price Today | ಒಂದು ವಾರದಿಂದ ಭಾರತದಲ್ಲಿ 49 ಸಾವಿರದ ಆಸುಪಾಸಿನಲ್ಲಿದ್ದ ಚಿನ್ನದ ಬೆಲೆ ಇಂದು 48 ಸಾವಿರಕ್ಕೆ ಇಳಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 52,000 ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಇಂದು 49,800 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,650 ರೂ. ಆಗಿದೆ. ಭಾರತದಲ್ಲಿ ನಿನ್ನೆ 48,330 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಇಳಿಕೆಯಾಗಿದ್ದು, ಇಂದು 47,990 ರೂ. ಆಗಿದೆ. ನಿನ್ನೆ 49 ಸಾವಿರ ರೂ. ಇದ್ದ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,900 ರೂ. ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 2 ದಿನಗಳ ಹಿಂದೆ 50,230 ರೂ. ಇದ್ದ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 49,800 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,650 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 52,000 ರೂ. ದಾಟಿದೆ.

ಇದನ್ನೂ ಓದಿ: Schools Reopen: ಕರ್ನಾಟಕದಲ್ಲಿ ಫೆ. 1ರಿಂದ 6-9ನೇ ತರಗತಿ ಆರಂಭಕ್ಕೆ ಸರ್ಕಾರ ಚಿಂತನೆ; ಇಂದಿನ ಸಭೆಯಲ್ಲಿ ನಿರ್ಧಾರ

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಭಾರೀ ಇಳಿಕೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ 67,000 ರೂ. ಇದ್ದ 1 ಕೆಜಿ ಬೆಳ್ಳಿ ಬೆಲೆ ಇಂದು 65,900 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಳಿಕೆಯಾಗಿದ್ದು, ನಿನ್ನೆ 67,400 ರೂ. ಇದ್ದ ಬೆಲೆ ಇಂದು 66,800 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 70 ಸಾವಿರ ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
Published by: Sushma Chakre
First published: January 28, 2021, 10:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories