HOME » NEWS » State » GOLD RATE TODAY GOLD PRICES TODAY DIP BY RECORD HIGH IN INDIA GOLD RATE IN BANGALORE SILVER PRICE IN BENGALURU SCT

Gold Rate Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Gold Silver Price Today: 2 ದಿನಗಳ ಹಿಂದೆ 10 ಗ್ರಾಂಗೆ 50,000 ರೂ. ದಾಟಿದ್ದ ಚಿನ್ನದ ದರ ಇದೀಗ 1 ಸಾವಿರ ರೂ. ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 3 ದಿನಗಳ ಹಿಂದೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 51,270 ರೂ. ಇದ್ದ ಬೆಲೆ ಇಂದು 50,840ಕ್ಕೆ ಇಳಿಕೆಯಾಗಿದೆ.

news18-kannada
Updated:January 8, 2021, 3:48 PM IST
Gold Rate Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಚಿನ್ನ
  • Share this:
Gold Price Today | ಕಳೆದೊಂದು ವಾರದಿಂದ ಹೆಚ್ಚಾಗುತ್ತಲೇ ಇದ್ದ ಚಿನ್ನದ ಬೆಲೆ 2 ದಿನಗಳಿಂದ ಕೊಂಚ ಕಡಿಮೆಯಾಗಿದೆ. 2 ದಿನಗಳ ಹಿಂದೆ 10 ಗ್ರಾಂಗೆ 50,000 ರೂ. ದಾಟಿದ್ದ ಚಿನ್ನದ ದರ ಇದೀಗ 1 ಸಾವಿರ ರೂ. ಕಡಿಮೆಯಾಗಿದೆ. 3 ದಿನಗಳ ಹಿಂದೆ ಭಾರತದಲ್ಲಿ 10 ಗ್ರಾಂಗೆ 50,370 ರೂ. ಇದ್ದ ಚಿನ್ನದ ಬೆಲೆ ಇಂದು 49,780 ರೂ. ಆಗಿದೆ. ಆದರೆ, ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರ ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.  ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,840 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 46,610 ರೂ. ಇದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,780 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,780 ರೂ. ಆಗಿದೆ.

ಚಿನ್ನದ ಬೆಲೆ ನಗರದಿಂದ ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 3 ದಿನಗಳ ಹಿಂದೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 51,270 ರೂ. ಇದ್ದ ಬೆಲೆ ಇಂದು 50,840ಕ್ಕೆ ಇಳಿಕೆಯಾಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 46,610 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಇನ್ನೂ ಏರಿಕೆಯಾಗುತ್ತಲೇ ಇದೆ.

ಇದನ್ನೂ ಓದಿ: 4 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಮರವೇರಿದ ಕೋತಿ; ಮಂಗನ ಕೈಯಲ್ಲಿ ಚೂರು ಚೂರಾಯ್ತು ಗರಿ ಗರಿ ನೋಟು!

ಭಾರತದಲ್ಲಿ ಬೆಳ್ಳಿಯ ಬೆಲೆಯಲ್ಲೂ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿಗೆ 4 ದಿನಗಳ ಹಿಂದೆ 70,700 ರೂ. ಇದ್ದುದು ಇಂದು 66,600 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಬೆಳ್ಳಿ ಬೆಲೆ ಕೊಂಚ ಕಡಿಮೆಯಾಗಿದ್ದು, ಇಂದು 1 ಕೆಜಿ ಬೆಳ್ಳಿಗೆ 66,600 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ಭುವನೇಶ್ವರ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ ಮತ್ತೆ ಹೆಚ್ಚಳವಾಗಿದ್ದು, 1 ಕೆಜಿಗೆ 70,900 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. 10 ದಿನಗಳಿಂದ ಚಿನ್ನದ ಬೆಲೆಯಲ್ಲೂ ಏರಿಳಿತಗಳು ಉಂಟಾಗುತ್ತಿದೆ.
Published by: Sushma Chakre
First published: December 24, 2020, 9:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories