HOME » NEWS » State » GOLD SILVER PRICE GOLD RATE IN INDIA SILVER PRICES RECORD HIGH IN BENGALURU SCT

Gold Silver Price: ಬೆಂಗಳೂರಿನಲ್ಲಿ ದಾಖಲೆ ಮಟ್ಟಕ್ಕೇರಿದ ಬೆಳ್ಳಿ ದರ; ಚಿನ್ನದ ಬೆಲೆಯಲ್ಲೂ ಏರಿಕೆ

Gold Price Today: ಬೆಂಗಳೂರಿನಲ್ಲಿ ಇಂದು 24 ಗ್ರಾಂ ಚಿನ್ನದ ಬೆಲೆ 49,970 ರೂ. ಆಗಿದೆ. ಬೆಳ್ಳಿ ದರದಲ್ಲೂ ದಾಖಲೆಯ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಬೆಳ್ಳಿ ಬೆಲೆ 70 ಸಾವಿರ ರೂ. ದಾಟಿದೆ.

news18-kannada
Updated:February 1, 2021, 10:29 AM IST
Gold Silver Price: ಬೆಂಗಳೂರಿನಲ್ಲಿ ದಾಖಲೆ ಮಟ್ಟಕ್ಕೇರಿದ ಬೆಳ್ಳಿ ದರ; ಚಿನ್ನದ ಬೆಲೆಯಲ್ಲೂ ಏರಿಕೆ
ಚಿನ್ನ
  • Share this:
Gold Rate Today | ಕಳೆದೊಂದು ವಾರದಿಂದ ಭಾರತದಲ್ಲಿ ಚಿನ್ನದ ಬೆಲೆ ಒಂದೇ ರೀತಿಯಲ್ಲಿದೆ. ನಿನ್ನೆ 48,960 ರೂ. ಇದ್ದ ಚಿನ್ನದ ದರ ಇಂದು 10 ರೂ. ಏರಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 52,000 ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ ಇಂದು 24 ಗ್ರಾಂ ಚಿನ್ನದ ಬೆಲೆ 49,970 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,820 ರೂ. ಆಗಿದೆ. ಬೆಳ್ಳಿ ದರದಲ್ಲೂ ದಾಖಲೆಯ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಬೆಳ್ಳಿ ಬೆಲೆ 70 ಸಾವಿರ ರೂ. ದಾಟಿದೆ.

ಭಾರತದಲ್ಲಿ ನಿನ್ನೆ 47,960 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 47,970 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,970 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 49,970 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,820 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 52,000 ರೂ. ದಾಟಿದೆ.

ಇದನ್ನೂ ಓದಿ: Rape - ಶೃಂಗೇರಿ ಬಳಿ 15 ವರ್ಷದ ಬಾಲಕಿ ಮೇಲೆ 30 ಮಂದಿಯಿಂದ ಅತ್ಯಾಚಾರ

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ದಾಖಲೆಯ ಏರಿಕೆಯಾಗಿದೆ. ನಿನ್ನೆ 69,800 ರೂ. ಇದ್ದ 1 ಕೆಜಿ ಬೆಳ್ಳಿ ದರ ಇಂದು 73,300 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿಯೂ ಭಾರೀ ಏರಿಕೆಯಾಗಿದ್ದು, ಇಂದು 70,300 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 74,500 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
Youtube Video
ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
Published by: Sushma Chakre
First published: February 1, 2021, 10:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories