ದಸರಾ ಸಂಭ್ರಮ 2019: ಗೋಲ್ಡನ್​ ಸ್ಟಾರ್​ ಗಣೇಶ್​ರಿಂದ ಈ ಬಾರಿ ಯುವ ದಸರಾ ಉದ್ಘಾಟನೆ

ದಸರಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮದ ಮೊದಲ ಪೋಸ್ಟರ್​ನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮವನ್ನು ಸ್ಯಾಂಡಲ್​ವುಡ್​ ಗೋಲ್ಡನ್​ ಸ್ಟಾರ್​ ಗಣೇಶ್​ ರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

Seema.R
Updated:September 11, 2019, 2:35 PM IST
ದಸರಾ ಸಂಭ್ರಮ 2019: ಗೋಲ್ಡನ್​ ಸ್ಟಾರ್​ ಗಣೇಶ್​ರಿಂದ ಈ ಬಾರಿ ಯುವ ದಸರಾ ಉದ್ಘಾಟನೆ
ನಟ ಗಣೇಶ್​
  • Share this:
ಮೈಸೂರು (ಸೆ.11): ಸಾಂಸ್ಕೃತಿಕ ನಗರಿಯಲ್ಲಿ ದಿನದಿಂದ ದಿನಕ್ಕೆ ದಸರಾ ಸಂಭ್ರಮ ಹೆಚ್ಚುತ್ತಿದ್ದು, ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.

ಇನ್ನು ದಸರಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮದ ಮೊದಲ ಪೋಸ್ಟರ್​ನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮವನ್ನು ಸ್ಯಾಂಡಲ್​ವುಡ್​ ಗೋಲ್ಡನ್​ ಸ್ಟಾರ್​ ಗಣೇಶ್​ ರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

ಇಂದು ಯುವ ದಸರೆಯ ಪೋಸ್ಟರ್​ ಬಿಡುಗಡೆ ಮಾಡಿದ ಸಚಿವರಾದ ಸಿ.ಟಿ.ರವಿ, ವಿ.ಸೋಮಣ್ಣ ಸೆ. 17ರಿಂದ 25ರವರೆಗೆ ಯುವ ದಸರಾ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

dasara poster
ಯುವ ದಸರಾ ಪೋಸ್ಟರ್​​


 

ಮೈಸೂರಿನ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ನಡೆಯಲಿದ್ದು,ಪ್ರತಿ ದಿನ ಸಂಜೆ 5:30 ರಿಂದ  ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ  ಯುವ ದಸರಾ ಕಾರ್ಯಕ್ರಮದಲ್ಲಿ  278 ಕಾಲೇಜು ವಿದ್ಯಾರ್ಥಿಗಳು  ಭಾಗಿಯಾಗಲಿದ್ದಾರೆ. ಕಿರು ನಾಟಕ, ಮೈಮ್, ನೃತ್ಯ, ಭರತನಾಟ್ಯ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.  ಇನ್ನು ಈ ಬಾರಿ ಉತ್ತರ ಕರ್ನಾಟಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ದೂರದ ಊರು, ಹೊರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಪಿವಿ ಸಿಂಧು ಬದಲು ನಟ ಗೋಲ್ಡನ್​ ಸ್ಟಾರ್​ ಗಣೇಶ್​ಈ ಹಿಂದೆ ಯುವ ದಸರಾ ಉದ್ಘಾಟನೆಗೆ ಚಿನ್ನದ ಹುಡುಗಿ ಬ್ಯಾಡ್ಮಿಂಟನ್​ ತಾರೆ ಪಿವಿ ಸಿಂಧು ಅವರನ್ನು ಆಹ್ವಾನಿಸಲಾಗಿತ್ತು. ಸಿಎಂ ಬಿಎಸ್​ ಯಡಿಯೂರಪ್ಪ ಅಧಿಕೃತವಾಗಿ ಸಿಂಧು ಅವರಿಗೆ ಆಹ್ವಾನ ನೀಡಿದ್ದರು. ಸಿಂಧು ಅವರು ಟೂರ್ನಿಮೆಂಟ್​ ಇರುವುದರಿಂದ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗಿಯಾಗಲು ಸಾಧ್ಯವಿಲ್ಲ. ಯುವ ದಸರಾ ನಡೆಯುವ ದಿನದೊಳಗೆ ಒಮ್ಮೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದ್ದರು.

First published:September 11, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading