ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: ಹದಿನೈದು ತಿಂಗಳ ಪ್ರೋತ್ಸಾಹ ಧನ ಬಿಡುಗಡೆಗೆ ಮುಂದಾದ ರಾಜ್ಯ ಸರ್ಕಾರ

ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದ್ದರು. ಕಳೆದ ವರ್ಷವೂ ಜೂನ್ ತಿಂಗಳಲ್ಲಿ ಕೂಡ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಅದರಂತೆಯೇ ಮತ್ತೆ ಈ ವರ್ಷವೂ ನಡೆದ ಪ್ರತಿಭಟನೆಯಲ್ಲಿ 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

news18-kannada
Updated:January 11, 2020, 8:53 AM IST
ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: ಹದಿನೈದು ತಿಂಗಳ ಪ್ರೋತ್ಸಾಹ ಧನ ಬಿಡುಗಡೆಗೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರಿನ ಪ್ರತಿಭಟನೆಯಲ್ಲಿ ಸೇರಿರುವ ಆಶಾ ಕಾರ್ಯಕರ್ತೆಯರು
  • Share this:
ಬೆಂಗಳೂರು(ಜ.11): ಇತ್ತೀಚೆಗಷ್ಟೇ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಹೋರಾಟ ಕೈಗೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕಳೆದ 15 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ ಪ್ರೋತ್ಸಾಹ ಧನ ಬಿಡುಗಡೆ ಮಾಡುವುದಾಗಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಜನವರಿ 3ನೇ ತಾರಿಕಿನಂದು ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ನತ್ತ ಹೊರಟ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. 'ಗುಲಾಬಿ ತಂಡ'ದ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಈಗಾಗಲೇ ಸರ್ಕಾರ ಭರವಸೆಯೂ ನೀಡಿತ್ತು. ಹಾಗಾಗಿ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಜಯ ಸಿಕ್ಕಂತಾಗಿತ್ತು. ಬೆಂಗಳೂರಿನಲ್ಲಿ ಪ್ರತಿಭಟನೆ ಕೈಬಿಟ್ಟ ಮೇಲೆಯೂ ಕೆಲಸಕ್ಕೆ ಹಾಜರಾಗದೆ ಜಿಲ್ಲಾ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಹೋರಾಟ ಮುಂದುವರಿಸಿದ್ದರು. ಈ ಮಧ್ಯೆಯೇ ಆಶಾ ಕಾರ್ಯಕರ್ತೆಯರೊಂದಿಗೆ ತಮ್ಮ 15 ತಿಂಗಳ ಪ್ರೋತ್ಸಾಹ ಧನ ಬಿಡುಗಡೆ ಮಾಡುವುದಾಗಿ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ.

ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದ್ದರು. ಕಳೆದ ವರ್ಷವೂ ಜೂನ್ ತಿಂಗಳಲ್ಲಿ ಕೂಡ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಅದರಂತೆಯೇ ಮತ್ತೆ ಈ ವರ್ಷವೂ ನಡೆದ ಪ್ರತಿಭಟನೆಯಲ್ಲಿ 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದರು.

ಈ ಹಿಂದೆಯೇ ಆಶಾ ಕಾರ್ಯಕರ್ತೆಯರ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದರು. ಆಶಾ ಕಾರ್ಯಕರ್ತೆಯರು ತುಂಬ ಕಷ್ಟಪಟ್ಟಿದ್ದಾರೆ. ಅವರ ಜೊತೆ ನಾನು ಚರ್ಚಿಸಿದ್ದೇನೆ. ಕೇಂದ್ರ ಮತ್ತು ರಾಜ್ಯದ ವೇತನವನ್ನು ಒಂದೇ ದಿನ ಬಿಡುಗಡೆ ಮಾಡಲು ಸಮ್ಮತಿ ನೀಡಿದ್ದೇನೆ. ಪ್ರತಿ ತಿಂಗಳು 10ನೇ ತಾರೀಕಿನೊಳಗೆ ವೇತನ ನೀಡಲಾಗುವುದು. ದಯವಿಟ್ಟು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಶ್ರೀರಾಮುಲು ಮನವಿ ಮಾಡಿದ್ದರು.

ಇದನ್ನೂ ಓದಿ:  ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ಇನ್ನಿಲ್ಲ

12 ಸಾವಿರ ರೂ. ಮಾಸಿಕ ವೇತನ ನೀಡಬೇಕು ಎಂದು ಆಗ್ರಹ ಮಾಡಲಾಗಿತ್ತು. ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ವೇತನ ನೀಡಲು ನಾನು ಬದ್ಧನಾಗಿದ್ದೇನೆ. ನಾನೆಷ್ಟು ದಿನ ಸಚಿವನಾಗಿರ್ತೀನೋ ಗೊತ್ತಿಲ್ಲ.ಆದರೆ 10 ಸಾವಿರ ವೇತನ ಕೊಡಲು ಸಿದ್ಧನಿದ್ದೇನೆ. ಈ ಬಗ್ಗೆ ಸಿಎಂ ಜೊತೆ ನಾನು ಚರ್ಚಿಸುತ್ತೇನೆ. ಆಶಾ ಕಾರ್ಯಕರ್ತರ ಜೊತೆ ನಾನಿದ್ದೇನೆ. ಸಾಧ್ಯವಾದಷ್ಟು ಅವರ ಬೇಡಿಕೆಗಳನ್ನು ಈಡೇರಿಸುತ್ತೇನೆ. 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುತ್ತೇನೆ. ಲಿಖಿತ ರೂಪದಲ್ಲಿ ಭರವಸೆ ನೀಡಲು ಸಿದ್ಧ. ಆಶಾ ಕಾರ್ಯಕರ್ತೆಯರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಬಜೆಟ್​ವರೆಗೆ ಕಾಯಬೇಕು. ಈಗ 1 ಸಾವಿರ ರೂ. ಹೆಚ್ಚಳಕ್ಕೆ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದ್ದರು.
First published:January 11, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ