ಬೆಂಗಳೂರು (ಫೆಬ್ರವರಿ. 25); ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮತ್ತು ಕಳೆದ ಕೆಲ ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ಬಸ್ ಟಿಕೆಟ್ ದರ ಏರಿಸಲು ಮುಂದಾಗಿದೆ. ಶೇ.12ರಷ್ಟು ದರ ಹೆಚ್ಚಳವಾಗಲಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಚಾಲ್ತಿಗೆ ಬರಲಿದೆ ಎಂದು ಕೆಎಸ್ಆರ್ಟಿ ಮೂಲಗಳು ನ್ಯೂಸ್18ಗೆ ತಿಳಿಸಿದೆ.
ಕೆಎಸ್ಆರ್ಟಿಸಿ ವಾಯುವ್ಯ, ಈಶಾನ್ಯ ಹಾಗೂ ಬಿಎಂಟಿಸಿ ಸೇರಿದಂತೆ ಮೂರೂ ನಿಗಮಗಳ ಬಸ್ ಟಿಕೆಟ್ ದರವನ್ನೂ ಹೆಚ್ಚಿಸಲು ಸರ್ಕಾರ ನಿಶ್ಚಯಿಸಿದೆ. ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಕಳೆದ ಹಲವು ವರ್ಷಗಳಿಂದ ವಾರ್ಷಿಕ ನೂರಾರು ಕೋಟಿ ನಷ್ಟದಲ್ಲಿದೆ. ಆದರೂ ಈವರೆಗೆ ಟಿಕೆಟ್ ದರವನ್ನು ಏರಿಸಲಾಗಿರಲಿಲ್ಲ.
![ksrtc 01]()
ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸರ್ಕಾರ ಹೊರಡಿಸಿರುವ ಸುತ್ತೋಲೆ.
ಆದರೆ, ಈ ಬಾರಿ ನಷ್ಟದ ಪ್ರಮಾಣ ಅಧಿಕವಾಗಿದ್ದು, ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎನ್ನಲಾಗುತ್ತಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದ್ದು, ನಾಳೆಯಿಂದ ಬಸ್ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.
ಇದನ್ನೂ ಓದಿ : ಅಸೂಕ್ಷ್ಮ ನಾಯಕರನ್ನು ಆಯ್ಕೆ ಮಾಡಿದ ಫಲವನ್ನು ಜನ ಅನುಭವಿಸುತ್ತಿದ್ದಾರೆ; ದೆಹಲಿ ಹಿಂಸಾಚಾರಕ್ಕೆ ಚಿದಂಬರಂ ಕಿಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ