ಬೆಂಗಳೂರು; ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದ್ದಾರೆ.
ಇದನ್ನು ಓದಿ: ಜ.15ಕ್ಕೆ ಎರಡು ದಿನಗಳ ಕಾಲ ಅಮಿತ್ ಶಾ ರಾಜ್ಯ ಪ್ರವಾಸ; ಭೇಟಿ ವೇಳೆ ಸಂಪುಟ ಪುನಾರಚನೆ ಚರ್ಚೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ