Govt Employees Strike: ಸಾರ್ವಜನಿಕರೇ ಗಮನಕ್ಕೆ; ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದ್ರೆ ಮಾತ್ರ ಪ್ರತಿಭಟನೆ ವಾಪಸ್ ಪಡೆಯೋದಾಗಿ ನೌಕರರು ಹೇಳಿದ್ದಾರೆ. ನಾಳೆಯೊಳಗೆ ಸರ್ಕಾರ ಆದೇಶ ಹೊರಡಿಸದೇ ಇದ್ದರೆ 6 ಲಕ್ಷ ಉದ್ಯೋಗಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

  • Share this:

ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು (Government Employees Strike) ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಲಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ ಪ್ರತಿಭಟನೆಗೆ (Protest) ಮುಂದಾಗಿರುವ ಹಿನ್ನೆಲೆ ನಾಳೆಯಿಂದ ಸರ್ಕಾರಿ ಸೇವೆಗಳಲ್ಲಿ (Service) ವ್ಯತ್ಯಯ ಉಂಟಾಗಲಿದೆ. ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ 36 ಇಲಾಖೆಗಳ ನೌಕರರು ನಾಳೆಯಿಂದ ಸೇವೆಗೆ ಗೈರು ಆಗಲಿದ್ದಾರೆ. ನಿನ್ನೆಯಿಂದಲೇ ಸರ್ಕಾರಿ ಕಚೇರಿಗಳ (Government Office) ಮುಂಭಾಗ ಪ್ರತಿಭಟನೆಯ ಪೋಸ್ಟರ್​​ಗಳನ್ನು ಅಂಟಿಸಲಾಗುತ್ತಿದೆ. ಮುಷ್ಕರಕ್ಕೆ ಕರೆ ನೀಡಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಕರ ಪತ್ರ ವಿತರಣೆ ಮಾಡಿ, ನಾಳೆಯಿಂದ ಕೆಲಸಕ್ಕೆ ಗೈರು ಹಾಜರಾಗಲು ಸೂಚನೆ ನೀಡಲಾಗಿದೆ.


ನಮ್ಮ ಬೇಡಿಕೆ ಈಡೇರುವವರೆಗೆ ಕೆಲಸಕ್ಕೆ ಬರೋದಿಲ್ಲ ಎಂದು ನೌಕರರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಮುಷ್ಕರ ಆರಂಭವಾದ್ರೆ ಜನರಿಗೆ ಸರ್ಕಾರಿ ಕಚೇರಿಗಳು ಬಂದ್ ಆಗಲಿವೆ. ಸರ್ಕಾರದ ಯೋಜನೆಗಳು, ಕಾಮಗಾರಿಗಳಿಗೆ ಹೊಡೆತ ಬೀಳಲಿದೆ.


ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳೇನು?


1.ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು, ದಿನಾಂಕ 1/7/2022 ರಿಂದ ಜಾರಿಗೆ ಬರುವಂತೆ ಶೇ.40 ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು.


2.ಪಂಜಾಬ್, ರಾಜಸ್ಥಾನ, ಛತ್ತಿಸ್ಘಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ NPS ರದ್ದುಪಡಿಸಿ, OPS ಯೋಜನೆಯನ್ನು ಜಾರಿಗೊಳಿಸಬೇಕು.


ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದ್ರೆ ಮಾತ್ರ ಪ್ರತಿಭಟನೆ ವಾಪಸ್ ಪಡೆಯೋದಾಗಿ ನೌಕರರು ಹೇಳಿದ್ದಾರೆ. ನಾಳೆಯೊಳಗೆ ಸರ್ಕಾರ ಆದೇಶ ಹೊರಡಿಸದೇ ಇದ್ದರೆ 6 ಲಕ್ಷ ಉದ್ಯೋಗಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.


ನಾಳೆ ಯಾವೆಲ್ಲಾ ಇಲಾಖೆಗಳು ಬಂದ್ ಆಗಲಿವೆ?


ವಿಧಾನಸೌಧದ ಎಲ್ಲಾ ಕಚೇರಿಗಳು ಬಂದ್, ಸಚಿವಾಲಯದ ಎಲ್ಲಾ ಕಚೇರಿಗಳು, ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ  ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್, ಆರೋಗ್ಯ ಇಲಾಖೆ, ಕಂದಾಯ ಇಲಾಖೆ


 ನಾಳೆ ಬೆಂಗಳೂರಿನ ಜನರಿಗೆ ಯಾವ ಸೇವೆ ಸಿಗಲ್ಲ‌?


ಬಿಬಿಎಂಪಿಯ ಎಲ್ಲಾ ಕಚೇರಿಗಳು ಬಂದ್, ಕಂದಾಯ ಇಲಾಖೆ ಬಂದ್, ಜಿಲ್ಲಾಧಿಕಾರಿಗಳ ಕಚೇರಿ ಬಂದ್, ಜಲಮಂಡಳಿ ಬಂದ್, ನೀರು ಸರಬರಾಜು ತೊಂದರೆ ಸಾಧ್ಯತೆ, ಬಿಬಿಎಂಪಿ ಆಸ್ಪತ್ರೆಗಳು ಬಂದ್, ಪ್ರಾಥಮಿಕ ಆರೋಗ್ಯ ಕೇಂದ್ರ ಬಂದ್


ಸರ್ಕಾರ ಕಣ್ಮುಚ್ಚಿ ಕುಳಿತಿದೆ


ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ನಮ್ಮ ಬೇಡಿಕೆಗಳು ಈಡೇರದಿದ್ರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡುತ್ತೇವೆ. ನೌಕರರು ಸಹ ಕರ್ತವ್ಯಕ್ಕೆ ಹಾಜರಾಗಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಬೇಡಿಕೆ ಈಡೇರಿಸುವತ್ತ ಗಮನ ನೀಡುತ್ತಿಲ್ಲ ಎಂದು ಬೇಸರ ಹೊರ ಹಾಕಿದರು.




ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ


ಶಾಲಾ-ಕಾಲೇಜು, ಆಸ್ಪತ್ರೆಯೂ ಸೇರಿದಂತೆ ಇತರೆ ಸಂಸ್ಥೆಗಳಲ್ಲಿಯ ನೌಕರರು ಗೈರು ಆಗಲಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಲು ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದ್ರೆ ಮಾತ್ರ ಪ್ರತಿಭಟನೆ ಹಿಂಪಡೆದುಕೊಳ್ಳಲಾಗುತ್ತದೆ ಎಂದು ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.


ಇದನ್ನೂ ಓದಿ: Medical Student: ಏಳನೇ ಅಂತಸ್ತಿನಿಂದ ಜಿಗಿದು ಪ್ರಾಣ ಕಳೆದುಕೊಂಡ MBBS ಟಾಪರ್ ವಿದ್ಯಾರ್ಥಿ


ಪ್ರತಿಭಟನೆ ಬೇಡ ಎಂದ ಸಿಎಂ ಬೊಮ್ಮಾಯಿ


ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಸರ್ಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

Published by:Mahmadrafik K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು