ಎಸ್​ಟಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕುರಿತು ಶೀಘ್ರ ತೀರ್ಮಾನ; ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ

ಮೈತ್ರಿ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಿದ ವಾಲ್ಮೀಕಿ ಸಮಾಜದವರು ಹಾಗೂ ಈ ಸಮಾಜದ ಮಠಾಧೀಶರು ತಮಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಂತೆ ಹೆಚ್ಚಿನ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ತಮ್ಮ ಸಮಾಜದ ಎಲ್ಲಾ 17 ಶಾಸಕರೂ ಪಕ್ಷಭೇದ ಇಲ್ಲದೆ ರಾಜೀನಾಮೆ ನೀಡಲಿದ್ದಾರೆ ಎಂದು ಸರ್ಕಾರಕ್ಕೆ ಬೆದರಿಕೆ ಒಡ್ಡಿದ್ದರು.

MAshok Kumar | news18-kannada
Updated:October 13, 2019, 1:43 PM IST
ಎಸ್​ಟಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕುರಿತು ಶೀಘ್ರ ತೀರ್ಮಾನ; ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ
ಸಿಎಂ ಬಿ.ಎಸ್. ಯಡಿಯೂರಪ್ಪ
  • Share this:
ಬೆಂಗಳೂರು (ಅಕ್ಟೋಬರ್ 13); ಸಮಾಜದಲ್ಲಿ ಹಿಂದುಳಿದಿರುವ ಎಸ್ ಟಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ನೀಡುವ ಕುರಿತು ಶೀಘ್ರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಭರವಸೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್​ನಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಎಸ್​ಟಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ನೀಡಬೇಕು ಎಂಬುದು ಈ ಸಮಾಜದ ಕಳೆದ ಹಲವು ದಶಕಗಳ ಕೂಗು. ಈ ಕುರಿತು ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ನೀಡಿದ್ದಾರೆ. ಈ ವರದಿ ಕುರಿತು ಚರ್ಚೆ ನಡೆಸಿದ ನಂತರ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸುವ ಕುರಿತು ಶೀಘ್ರದಲ್ಲಿ ತೀರ್ಮಾನ ಮಾಡಲಾಗುವುದು.

ಅಲ್ಲದೆ, ವಾಲ್ಮೀಕಿ ಸಮಾಜದ ಏಳಿಗೆಗಾಗಿ ಫೆಬ್ರವರಿ ಬಜೆಟ್​ನಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ” ಎಂದು ಸಿಎಂ ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.


ಮೈತ್ರಿ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಿದ ವಾಲ್ಮೀಕಿ ಸಮಾಜದವರು ಹಾಗೂ ಈ ಸಮಾಜದ ಮಠಾಧೀಶರು ತಮಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಂತೆ ಹೆಚ್ಚಿನ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ತಮ್ಮ ಸಮಾಜದ ಎಲ್ಲಾ 17 ಶಾಸಕರೂ ಪಕ್ಷಭೇದ ಇಲ್ಲದೆ ರಾಜೀನಾಮೆ ನೀಡಲಿದ್ದಾರೆ ಎಂದು ಸರ್ಕಾರಕ್ಕೆ ಬೆದರಿಕೆ ಒಡ್ಡಿದ್ದರು. ನಂತರ ಅಂದಿನ ಸಿಎಂ ಕುಮಾರಸ್ವಾಮಿ ಎಸ್​ಟಿ ಸಮಾಜದ ಈ ಪ್ರಸ್ತಾವನೆಯನ್ನು ಸರ್ಕಾರ ಪರಿಗಣಿಸುವುದಾಗಿ ತಿಳಿಸಿದ ನಂತರ ಪ್ರತಿಭಟನೆಯನ್ನು ಕೈಬಿಡಲಾಗಿತ್ತು.

ಇದನ್ನೂ ಓದಿ : ಸಿಎಂ ಕಾರ್ಯಕ್ರಮಗಳಿಗೂ ಮಾಧ್ಯಮಗಳಿಗೆ ನಿರ್ಬಂಧ; ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪತ್ರಕರ್ತರ ಧರಣಿ

First published:October 13, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading