ಯಶಸ್ವಿನಿ ವಿಮಾ ಯೋಜನೆ ಮರು ಜಾರಿಗೆ ಸರ್ಕಾರ ಚಿಂತನೆ

ಸದ್ಯದಲ್ಲೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು  ಸಹಕಾರ ಇಲಾಖೆಯ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ಕುರಿತು ಅವರ  ಗಮನಕ್ಕೆ ತರಲಾಗುವುದು

ಎಸ್​​ಟಿ ಸೋಮಶೇಖರ್​​

ಎಸ್​​ಟಿ ಸೋಮಶೇಖರ್​​

  • Share this:
ಚಾಮರಾಜನಗರ (ಆ.21) ರಾಜ್ಯದಲ್ಲಿ ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಚಾಮರಾಜನಗರದಲ್ಲಿ ಈ ವಿಷಯ ತಿಳಿಸಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಹಿಂದೆ ಆರೋಗ್ಯ ಸಚಿವರಾಗಿದ್ದ ರಮೇಶ್ ಕುಮಾರ್ ಅವರ ಅವಧಿಯಲ್ಲಿ ಯಶಸ್ವಿನಿ ಯೋಜನೆಯನ್ನು ಆಯುಷ್ಮಾನ್ ಯೋಜನೆ ಜೊತೆ ವಿಲೀನಗೊಳಿಸಲಾಗಿದೆ. ಈಗ ಅದನ್ನು ಪ್ರತ್ಯೇಕಿಸಲು  300 ಕೋಟಿ ರೂ ಬೇಕಾಗಿರುವುದರಿಂದ ಇಲಾಖೆಯವರು ಒಪ್ಪಿರಲಿಲ್ಲ,   ಬಿ.ಎಸ್. ಯಡಿಯೂರಪ್ಪ ಅವರು  ಮುಖ್ಯಮಂತ್ರಿ ಯಾಗಿದ್ದಾಗಲೇ ಎರಡು ಬಾರಿ ಬಜೆಟ್ ನಲ್ಲಿ ಸೇರಿಸಲು  ಪ್ರಯತ್ನಿಸಿದ್ದೆ, ಕಾರಣಾಂತರಗಳಿಂದ ಆಗಿರಲಿಲ್ಲ ಈಗ ಮತ್ತೆ ಮುಖ್ಯಮಂತ್ರಿ ಗಳ ಜೊತೆ ಚರ್ಚಿಸಿ ಈ ಯೋಜನೆಯನ್ನು ಮರು ಜಾರಿಗೊಳಿಸಲು ಅಪೇಕ್ಷಿಸಿದ್ದೇನೆ ಎಂದರು

ಸದ್ಯದಲ್ಲೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು  ಸಹಕಾರ ಇಲಾಖೆಯ ಪರಿಶೀಲನಾ ಸಭೆ ನಡೆಸಲಿದ್ದಾರೆ ಈ ಸಭೆಯಲ್ಲಿ ಅವರ  ಗಮನಕ್ಕೆ ತರಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಿದ್ದಪಡಿಸಿಕೊಳ್ಳಲಾಗಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು

ಚಾಮರಾಜನಗರ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರೆವಿಗೆ ಕ್ರಮ

ಚಾಮರಾಜನಗರ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ಚಿಂತನೆ ನಡೆಸಲಾಗಿದೆ ಎಂದು ಇದೇ ವೇಳೇ ಜಿಲ್ಲೆಯ ಕೋವಿಡ್ ನಿಯಂತ್ರಣ ಉಸ್ತುವಾರಿ ಸಚಿವರಾದ ಅವರು ತಿಳಿಸಿದರು.  ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಸ್ತುತ 0.95% ಪಾಸಿಟಿವ್ ದರ ಇದೆ. ಕಳೆದ  ಒಂದು ತಿಂಗಳಿಂದ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗಿತ್ತಿಲ್ಲ.  ಈ ಬಗ್ಗೆ ಮುಖ್ಯ ಮಂತ್ರಿಗಳಿಗೆ ವರದಿ ನೀಡಿ ವೀಕೆಂಡ್ ಕರ್ಫ್ಯೂ ತೆರವಿಗೆ ಕ್ರಮವಹಿಸಲು  ಜಿಲ್ಲಾಧಿಕಾರಿ ಗೆ ಸೂಚಿಸಲಾಗಿದೆ ಎಂದರು.

ಇದನ್ನು ಓದಿ: ಸೋಮವಾರದಿಂದ ಶಾಲಾ-ಕಾಲೇಜು ಆರಂಭ; ಹಳೆ ಬಸ್​ ಪಾಸ್​ನಲ್ಲಿ ಸಂಚರಿಸಲು ವಿದ್ಯಾರ್ಥಿಗಳಿಗೆ ಅವಕಾಶ

ಇದಲ್ಲದೆ ಗಡಿ ಜಿಲ್ಲೆಯಾಗಿರುವುದರಿಂದ ಪ್ರತಿದಿನ 25 ಸಾವಿರ ಮಂದಿಗೆ ಕೊರೋನಾ ವ್ಯಾಕ್ಸಿನ್ ನೀಡಲು ಆರೋಗ್ಯ ಇಲಾಖೆಗೆ ಮನವಿ  ಮಾಡಲಾಗಿದೆ  ಗಡಿ ಭಾಗದ ಹಳ್ಳಿಗಳಲ್ಲಿ  ಆದಷ್ಟು ಬೇಗ ಶೇಕಡಾ 100 ರಷ್ಟು ವ್ಯಾಕ್ಸಿನೇಷನ್‌  ಮಾಡಲು ಸೂಚಿಸಲಾಗಿದೆ ಎಂದರು. ಜೊತೆಗೆ ಸೋಮವಾರದಿಂದ ಜಿಲ್ಲೆಯಲ್ಲಿ  ಶಾಲೆಗಳ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶಾಲೆಗೆ ಹಾಜರಾಗುವ ಶೇಕಡಾ 100 ರಷ್ಟು ಶಿಕ್ಷಕರಿಗೆ ವ್ಯಾಕ್ಸಿನೇಷನ್ ಆಗಬೇಕು.  ಶಾಲೆಗಳಲ್ಲಿ ಎಲ್ಲಾ ರೀತಿಯ ಕೋವಿಡ್​​ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ.  ಯಾವುದೇ ರೀತಿಯ ಅಪಸ್ವರ ಬರದಂತೆ ಎಚ್ಚರಿಕೆ ವಹಿಸಲು ಕೂಡ ಸೂಚಿಸಲಾಗಿದೆ ಎಂದು  ತಿಳಿಸಿದರು.

ಚಾಮುಲ್ ಅಕ್ರಮ ನೇಮಕಾತಿ ತನಿಖೆ ಪೂರ್ಣ

ಚಾಮುಲ್ ನಲ್ಲಿ ನಡೆದಿರುವ ಅಕ್ರಮ ನೇಮಕಾತಿ ಹಗರಣದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ತನಿಖೆಗೆ ಸಹಕಾರ ಸಂಘಗಳ ಜಾಯಿಂಟ್ ರಿಜಿಸ್ಟ್ರಾರ್ ಅವರನ್ನು ನೇಮಿಸಲಾಗಿತ್ತು. ಎಸ್. ಎಸ್ಟಿ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆ ಎಂಬ ಆರೋಪ ಇದೆ, ಇದೀಗ ತನಿಖೆ ಪೂರ್ಣಗೊಂಡಿದೆ. ಇನ್ನು ಎರಡು ಮೂರು ದಿನಗಳಲ್ಲಿ ವರದಿ ಕೈ ಸೇರಲಿದ್ದು ವರದಿ ಕೈ ಸೇರಿದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದ ಅವರು,   ಮೈಮುಲ್ ನೇಮಕಾತಿ ಹಗರಣದ ಬಗ್ಗೆಯು  ಪ್ರತಿಕ್ರಿಯಿಸಿ,  ಎಲ್ಲವೂ ಬಗೆಹರಿದಿದೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Seema R
First published: