• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಖಾಸಗಿ ಶಿಕ್ಷಕರಿಗೆ ಸಹಾಯಕ್ಕಾಗಿ ಸರ್ಕಾರದ ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಖಾಸಗಿ ಶಿಕ್ಷಕರಿಗೆ ಸಹಾಯಕ್ಕಾಗಿ ಸರ್ಕಾರದ ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಸಚಿವ ಸುರೇಶ್​ ಕುಮಾರ್

ಸಚಿವ ಸುರೇಶ್​ ಕುಮಾರ್

ದಾಖಲಾತಿ ಮೂಲಕ ಸಂಗ್ರಹವಾದ ಹಣವನ್ನು ಶಿಕ್ಷಕರ ವೇತನಕ್ಕೆ ಬಳಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಎರಡನೇ ಹಂತದಲ್ಲಿ ಶಿಕ್ಷಕರಿಗೆ ಸರ್ಕಾರದಿಂದ ಯಾವ ರೀತಿಯ ಸಹಾಯ ನೀಡಬೇಕೆಂದು ಪರಿಶೀಲನೆ ನಡೆಸಲಾಗುತ್ತಿದೆ

  • Share this:

ಬೆಂಗಳೂರು(ಸೆಪ್ಟೆಂಬರ್​. 11): ಖಾಸಗಿ ಶಿಕ್ಷಕರಿಗೆ ಸಹಾಯಕ್ಕಾಗಿ ಸರ್ಕಾರದ ಚಿಂತನೆ ಮಾಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು‌. ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ-2020 ಮತ್ತು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿ, ಕಳೆದ ವರ್ಷ ಶಿಕ್ಷಕರ ದಿನಾಚರಣೆಯಲ್ಲಿ ಭರವಸೆ ನೀಡಿದಂತೆ ಶಿಕ್ಷಕ-ವಿದ್ಯಾರ್ಥಿಸ್ನೇಹಿ ಶಿಕ್ಷಕರ ವರ್ಗಾವಣಾ ನೀತಿಯನ್ನು ಜಾರಿಗೆ ತಂದಿದ್ದು, ವರ್ಗಾವಣಾ ಪ್ರಕ್ರಿಯೆ ಜಾರಿಯಲ್ಲಿದೆ. ಕೊರೋನಾ ಹಿನ್ನೆಲೆಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಬೇಕೆಂಬುದು ಸರ್ಕಾರದ ಚಿಂತನೆಯಾಗಿದ್ದು, ಮೊದಲ ಹಂತದಲ್ಲಿ ಈ ಶಿಕ್ಷಕರಿಗೆ ವೇತನ ದೊರೆಯುವಂತಾಗಲು ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಆದೇಶ ನೀಡಲಾಗಿದೆ ಎಂದರು. 


ದಾಖಲಾತಿ ಮೂಲಕ ಸಂಗ್ರಹವಾದ ಹಣವನ್ನು ಶಿಕ್ಷಕರ ವೇತನಕ್ಕೆ ಬಳಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಎರಡನೇ ಹಂತದಲ್ಲಿ ಶಿಕ್ಷಕರಿಗೆ ಸರ್ಕಾರದಿಂದ ಯಾವ ರೀತಿಯ ಸಹಾಯ ನೀಡಬೇಕೆಂದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.


ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕರನ್ನು ಮುಖ್ಯಮಂತ್ರಿಯವರು ಸನ್ಮಾನಿಸಿ  ಗೌರವಿಸಿದರು


ಎನ್ಇಪಿ ಅನುಷ್ಠಾನ 34 ವರ್ಷಗಳ ನಂತರ ರೂಪಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿ ರಾಷ್ಟ್ರದ ಶಿಕ್ಷಣ ನೀತಿಯಾಗಿದ್ದು, ಅದನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಶಿಕ್ಷಕರು ಮತ್ತು ಅಧಿಕಾರಿ ವರ್ಗ ಅದರ ಯಶಸ್ಸಿಗೆ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದರು.


ಅಂಕಪಟ್ಟಿ ಸುರಕ್ಷತೆ ತಂತ್ರಜ್ಞಾನ ಬ್ಲಾಕ್ ಚೈನ್ ಟೆಕ್ನಾಲಜಿ ಮೂಲಕ ಎಸ್. ಎಸ್. ಎಲ್. ಸಿ. ಅಂಕಪಟ್ಟಿಗಳ ಮಾಹಿತಿ ಪಡೆಯುವ ಸರ್ಟಿಫಿಕೇಟ್ ಚೈನ್ ತಂತ್ರಾಂಶವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಕೊರೋನಾ ಸಂದರ್ಭದಲ್ಲಿ ಬೋಧನೆಗಾಗಿ ರೂಪಿಸಲಾದ ಕಕಲಿಕಾ ಸಂವರ್ಧನಾ ಮಾರ್ಗಸೂಚಿ ಪುಸ್ತಿಕೆಗಳನ್ನು ಸಿಎಂ ಬಿಡುಗಡೆ ಮಾಡಿದರು.


ಇದನ್ನೂ ಓದಿ :  ಶಾಸಕಿಯಾದ ಮೇಲೆ ಸಂಘರ್ಷಗಳು ಹೆಚ್ಚಾಗಿವೆ - ನನಗೆ ಯಾರು ಕಷ್ಟ ಕೊಡುತ್ತಿದ್ದಾರಂತ ನಿಮಗೇ ಗೊತ್ತು : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್


20 ಪ್ರಾಥಮಿಕ ಶಾಲಾ ಶಿಕ್ಷಕರು, 10 ಪ್ರೌಢಶಾಲಾ ಶಿಕ್ಷಕರು, ಓರ್ವ ವಿಶೇಷ ಶಿಕ್ಷಕರು, 10 ಮಂದಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು, ರಾಷ್ಟ್ರಪ್ರಶಸ್ತಿ ಪಡೆದ ರಾಜ್ಯದ ಮೂವರು ಶಿಕ್ಷಕರನ್ನು ಮುಖ್ಯಮಂತ್ರಿಯವರು ಸನ್ಮಾನಿಸಿ  ಗೌರವಿಸಿದರು.


ರಾಜ್ಯ ಸರ್ಕಾರದ ಶೈಕ್ಷಣಿಕ ಸುಧಾರಣೆಗಳ ಸಲಹೆಗಾರರಾದ ಪ್ರೊ. ಎಂ.ಆರ್.  ದೊರೆಸ್ವಾಮಿ, ಶಾಸಕರಾದ ವೈ.ಎಸ್. ನಾರಾಯಣಸ್ವಾಮಿ, ಅರುಣಶಹಾಪುರ, ಅ. ದೇವೇಗೌಡ, ಹನುಮಂತ ನಿರಾಣಿ ಮತ್ತಿತರರು ಭಾಗವಹಿಸಿದ್ದರು.

top videos
    First published: