ಮೀಸಲಾತಿ ಕುರಿತ ಸುಪ್ರೀಂ ತೀರ್ಪಿನಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು; ಸಿದ್ದರಾಮಯ್ಯ ಒತ್ತಾಯ

ಬಿಜೆಪಿ ಸರ್ಕಾರ ದಲಿತರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿಲ್ಲ. ಅವರಿಗೆ ನಿಜಕ್ಕೂ ಶೋಷಿತರ ಬಗ್ಗೆ ಕಾಳಜಿ ಇದ್ದರೆ, ಕೂಡಲೇ ಈ ಕುರಿತು ಅಪೀಲು ಹಾಕಬೇಕು, ಸುಪ್ರೀಂ ಕೋರ್ಟ್​ ತೀರ್ಪನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಷ್ಟ್ರಾದ್ಯಂತ ಈ ಕುರಿತು ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

  • Share this:
ಬೆಂಗಳೂರು (ಫೆಬ್ರವರಿ 17); ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪು ಆಘಾತಕಾರಿಯಾಗಿದ್ದು, ಈ ಕುರಿತು ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮೀಸಲಾತಿ ವಿಚಾರದ ಕುರಿತಾಗಿ ಇಂದು ಸುದ್ದಿಗಾರರ ಜೊತೆಗೆ ಮಾತನಾಡಿರುವ ಸಿದ್ದರಾಮಯ್ಯ, "ಮೀಸಲಾತಿಯನ್ನು ರದ್ದು ಮಾಡಿದರೆ ಮೂಲಭುತ ಹಕ್ಕನ್ನು ಕಿತ್ತುಕೊಂಡ ಹಾಗಾಗುತ್ತೆ. ಇದು ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧಿಯಾದದ್ದು, ಹೀಗಾಗಿ ಕೂಡಲೇ ಈ ಕುರಿತು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಈ ತೀರ್ಪನ್ನು ಮರುಶೀಲಿಸುವಂತೆ ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸಬೇಕು" ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, "ಬಿಜೆಪಿ ಸರ್ಕಾರ ದಲಿತರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿಲ್ಲ. ಅವರಿಗೆ ನಿಜಕ್ಕೂ ಶೋಷಿತರ ಬಗ್ಗೆ ಕಾಳಜಿ ಇದ್ದರೆ, ಕೂಡಲೇ ಈ ಕುರಿತು ಅಪೀಲು ಹಾಕಬೇಕು, ಸುಪ್ರೀಂ ಕೋರ್ಟ್​ ತೀರ್ಪನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಷ್ಟ್ರಾದ್ಯಂತ ಈ ಕುರಿತು ಪ್ರತಿಭಟನೆ ನಡೆಸಲಾಗುವುದು" ಎಂದು ಎಚ್ಚರಿಸಿದ್ದಾರೆ.

ಅಧಿವೇಶನಕ್ಕೆ ಮಾಧ್ಯಮಗಳ ನಿರ್ಬಂಧ ಸರಿಯಲ್ಲ:

ರಾಜ್ಯದ ವಿಧಾನಮಂಡಲ ಅಧಿವೇಶನಕ್ಕೆ ಮಾಧ್ಯಮಗಳನ್ನು ನಿರ್ಬಂಧಿಸಿರುವ ವಿಚಾರವನ್ನು ಖಂಡಿಸಿರುವ ಸಿದ್ದರಾಮಯ್ಯ, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಎಂಬುದು ನಾಲ್ಕನೇಯ ಅಂಗ. ಮಾಧ್ಯಮದ ಎದುರು ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸುವುದರಲ್ಲಿ ತಪ್ಪೇನಿದೆ? ಸದನದ ಒಳಗಿನ ಚರ್ಚೆ ಮಾಧ್ಯಮದ ಮೂಲಕ ಜನರಿಗೆ ತಲುಪಬೇಕು. ಹೀಗಾಗಿ ಮಾಧ್ಯಮಗಳನ್ನು ಸದನದ ಒಳಗೆ ನಿರ್ಬಂಧಿಸಿರುವ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ತೀರ್ಮಾನವನ್ನು ನಾನು ಖಂಡಿಸುತ್ತೇನೆ" ಎಂದಿದ್ದಾರೆ.

ಇದನ್ನೂ ಓದಿ : ಕನ್ನಡಿಗ ವಕೀಲ ಸಂಜಯ್ ಹೆಗ್ಡೆಗೆ ಶಾಹೀನ ಬಾಗ್ ಪ್ರತಿಭಟನಾಕಾರರ ಮನವೊಲಿಸಲು ಸುಪ್ರೀಂಕೋರ್ಟ್ ಮನವಿ
First published: