Cabinet Meeting | ಮೀಸಲಾತಿ ಬೇಡಿಕೆ; ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ನಿರ್ಧಾರ

ಸಚಿವ ಸಂಪುಟ ಸಭೆಯಲ್ಲಿ ರಮೇಶ್ ರಾಜೀನಾಮೆ ಬಗ್ಗೆ ಏನು ಚರ್ಚೆ ಆಗಿಲ್ಲ. ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಅವರಿಂದ ರಾಜೀನಾಮೆ ಪಡೆದಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಈಗಾಗಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲಷ್ಟೇ ತನಿಖೆ ಆಗ್ತಿದೆ ಹೊರತು, ರಾಜ್ಯ ಮಟ್ಟದಲ್ಲಿ ಯಾವುದೇ ತನಿಖೆ ಮಾಡಿಸುವ ಬಗ್ಗೆ ನಿರ್ಧಾರ ಆಗಿಲ್ಲ ಎಂದು ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ​​ ಬೊಮ್ಮಾಯಿ

ಗೃಹ ಸಚಿವ ಬಸವರಾಜ​​ ಬೊಮ್ಮಾಯಿ

 • Share this:
  ಬೆಂಗಳೂರು: ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ (Cabinet Meeting) ಮುಕ್ತಾಯವಾಗಿದೆ.  ಸಭೆಯ ನಂತರ ಕಾನೂನು ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ (Basavaraja Bommai) ಸುದ್ದಿಗೋಷ್ಠಿ ನಡೆಸಿ, ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ಹಾಗೂ ತೆಗೆದುಕೊಳ್ಳಲಾದ ನಿರ್ಧಾರಗಳ ಬಗ್ಗೆ ತಿಳಿಸಿದರು. ಮೀಸಲಾತಿಗೆ ರಾಜ್ಯದಲ್ಲಿ ಹಲವು ಸಮುದಾಯಗಳಿಂದ ಒತ್ತಾಯ ಕೇಳಿಬರುತ್ತಿದೆ. ಮೀಸಲಾತಿ ಬಗ್ಗೆ ಉನ್ನತ ಮಟ್ಟದ ಸಮಿತಿ ರಚನೆ ಗೆ ನಿರ್ಧಾರ ಮಾಡಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು. 

  ಪಂಚಮಸಾಲಿಯನ್ನು 2ಎಗೆ ಸೇರಿಸಲು ಮನವಿ. ಕುರುಬ ಸಮುದಾಯವನ್ನು ಎಸ್ಟಿ  ಸೇರ್ಪಡೆಗೆ ಮನವಿ. ಒಕ್ಕಲಿಗರು ಮತ್ತು ವೀರಶೈವ ಲಿಂಗಾಯತ ಸಮುದಾಯದ ಕೆಲ ಪಂಗಡಗಳನ್ನು ಕೇಂದ್ರದ ಒಬಿಸಿಗೆ ಸೇರಿಸಲು ಮನವಿ ಬಂದಿದೆ. ಎಲ್ಲ ಸಮುದಾಯಗಳ ಮೀಸಲಾತಿ ಪರಿಗಣಿಸಿದರೆ ಶೇ.50 ದಾಟಲಿದೆ. ಮೀಸಲಾತಿ ಪ್ರಮಾಣ ಶೇ.50 ಹೆಚ್ವಿಸದಂತೆ ಸುಪ್ರೀಂ ಕೋರ್ಟ್ ಆದೇಶಗಳಿವೆ. ಈ ವಿಚಾರದಲ್ಲಿ ಗೊಂದಲಗಳೂ ಇವೆ. ಮೀಸಲಾತಿ ವಿಚಾರದಲ್ಲಿ ಉದ್ಭವಿಸಿರುವ ಗೊಂದಲಗಳು, ತೊಡಕುಗಳ ಬಗ್ಗೆ ಉನ್ನತಮಟ್ಟದ ಸಮಿತಿ‌ ವರದಿ‌ ಕೊಡಲಿದೆ. ಸಮಿತಿಗೆ ವರದಿ ಕೊಡಲು ಅವಧಿ ನಿಗದಿ ಮಾಡಿಲ್ಲ. ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

  ಇದನ್ನು ಓದಿ: Political sex tapes in Karnataka | ರಾಜ್ಯ ರಾಜಕಾರಣದಲ್ಲಿ ಕಾಮ ಪ್ರಸಂಗದ ಪ್ರಕರಣಗಳು!

  ಸಚಿವ ಸಂಪುಟದ ನಿರ್ಧಾರಗಳು

  • ಕರ್ನಾಟಕ ನಾಗರಿಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ) ತಿದ್ದುಪಡಿ ನಿಯಮಗಳು 2021 ಅನುಮೋದನೆ

  • ಸರ್ಕಾರಿ/ ಅನುದಾನಿತ ಆಯುಷ್ ಮಹಾವಿದ್ಯಾಲಯಗಳ ಬೋಧಕ‌ ಸಿಬ್ಬಂದಿ ವೇತನ ಪರಿಷ್ಕರಣೆಗೆ ಅನುಮೋದನೆ

  • ರಾಜ್ಯದ 774 ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿ.ಸಿ ಟಿವಿ ಕ್ಯಾಮರಾ ಮೇಲ್ದರ್ಜೆ 281 ಪೊಲೀಸ್ ಠಾಣೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಲು 18.50 ಕೋಟಿ ಆಡಳಿತಾತ್ಮಕ ಅನುಮೋದನೆ

  • ಕರ್ನಾಟಕ ಜಲಸಾರಿಗೆ ಮಂಡಳಿ ತಿದ್ದುಪಡಿ ವಿಧೇಯಕ 2021 ಕ್ಕೆ ಅನುಮೋದನೆ

  • ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕ, 2021 ಕ್ಕೆ ಆನುಮೋದನೆ

  • ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2020ಕ್ಕೆ ಅನುಮೋದನೆ

  • ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ರಾಯಚೂರು ಜಿಲ್ಲೆ, ಮಮ್ಮಿ ತಾಲ್ಲೂಕಿನ ಕೆರೆಗಳಿಗೆ ಕುಡಿಯುವ ನೀರು ಹಾಗೂ ಅಂತರ್ಜಲ ಅಭಿವೃದ್ಧಿ ಸಲುವಾಗಿ ಕೃಷ್ಣಾ ನದಿಯಿಂದ ಬಶ ನೀರಾವರಿ ಮೂಲಕ ನೀರನ್ನು ತುಂಬಿರುವ ರೂ. 457.18 ಕೋಟಿಗಳ ಆಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ

  • ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಅನುಕೂಲವಾಗುವ ದೃಷ್ಟಿಯಿಂದ ಬೆಂಗಳೂರಿನ ಹೆಚ್ ಎಸ್ ಆರ್ ಬಡಾವಣೆಯಲ್ಲಿ 59.00 ಕೋಟಿ ಅಂದಾಜು ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲು ಅನುಮೋದನೆ

  • ಕೋಲಾರ ಜಿಲ್ಲೆಯ, ಬಂಗಾರಪೇಟೆ ತಾಲ್ಲೂಕಿನಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ರೂ. 18.48 ಕೋಟಿಗಳಿಗೆ ಅನುಮೋದನೆ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಾವಣಗೆರೆ ಜಿಲ್ಲೆಯ, ಹೊನ್ನಾಳಿ ತಾಲ್ಲೂಕಿನ ಸಲವನಹಳ್ಳಿ ಹೊಸಕೊಪ್ಪ ಮತ್ತು ಇತರೆ 59 ಜನವಸತಿಗಳಿಗೆ ಜಲ ಜೀವನ್ ಯೋಜನೆಯಡಿ ಕುಡಿಯುವ ನೀರು ಯೋಜನೆ NABARD-RIDF ಅಡಿ 69.26 ಆಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.  ಜಾರಕಿಹೊಳಿ ಬಗ್ಗೆ ಚರ್ಚೆಯಾಗಿಲ್ಲ: ಬೊಮ್ಮಾಯಿ

  ಸಚಿವ ಸಂಪುಟ ಸಭೆಯಲ್ಲಿ ರಮೇಶ್ ರಾಜೀನಾಮೆ ಬಗ್ಗೆ ಏನು ಚರ್ಚೆ ಆಗಿಲ್ಲ. ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಅವರಿಂದ ರಾಜೀನಾಮೆ ಪಡೆದಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಈಗಾಗಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲಷ್ಟೇ ತನಿಖೆ ಆಗ್ತಿದೆ ಹೊರತು, ರಾಜ್ಯ ಮಟ್ಟದಲ್ಲಿ ಯಾವುದೇ ತನಿಖೆ ಮಾಡಿಸುವ ಬಗ್ಗೆ ನಿರ್ಧಾರ ಆಗಿಲ್ಲ ಎಂದು ಬೊಮ್ಮಾಯಿ ಹೇಳಿದರು.
  Published by:HR Ramesh
  First published: