ಬಾಕಿ ವೇತನಕ್ಕೆ ಆಗ್ರಹಿಸಿ ಶ್ರೀರಾಮುಲು ಮನೆಮುಂದೆ ನೌಕರರ ಧರಣಿ; ಇಬ್ಬರು ಪ್ರತಿಭಟನಾಕಾರರು ಆಸ್ಪತ್ರೆಗೆ ದಾಖಲು

ಸಚಿವ ಶ್ರೀರಾಮುಲು ಮನೆಮುಂದೆ ಪ್ರತಿಭಟನೆ ನಡೆಸುತ್ತಿರುವವರನ್ನು ಬಂಧಿಸಿ, ಬಳ್ಳಾರಿಯ ವಾಲ್ಮೀಕಿ ಭವನದಲ್ಲಿ ಇರಿಸಲಾಗಿತ್ತು. ಈ ವೇಳೆ ಕಲಬುರ್ಗಿಯ ಸಿದ್ದಮ್ಮ ಮತ್ತು ಬೀದರ್​ನ ನಾಗಮ್ಮ ಎಂಬ ಇಬ್ಬರು ಮಹಿಳೆಯರು ಅಸ್ವಸ್ಥರಾಗಿದ್ದಾರೆ.

ಶ್ರೀರಾಮುಲು

ಶ್ರೀರಾಮುಲು

  • Share this:
ಬಳ್ಳಾರಿ (ಫೆ. 12): ಆರೋಗ್ಯ ಸಚಿವ ಬಿ. ಶ್ರೀರಾಮುಲು ಮನೆಮುಂದೆ ಮಂಗಳವಾರದಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ಪ್ರತಿಭಟನೆ ಮುಂದುವರೆಸಿದ್ದಾರೆ. ಈ ವೇಳೆ ಇಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮ್ಮನ್ನು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ನೌಕರರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮನ್ನು ನಿವೃತ್ತಿಯವರೆಗೆ ಉದ್ಯೋಗದಲ್ಲಿ ಮುಂದುವರೆಸಬೇಕು, 8 ತಿಂಗಳ ಬಾಕಿ ವೇತನವನ್ನು ಪಾವತಿಸಬೇಕು ಎಂದು ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಧರಣಿ ನಡೆಸುತ್ತಿದ್ದಾರೆ. ಆರೋಗ್ಯ ಸಚಿವರ ಮನೆಮುಂದೆ ಧರಣಿ ನಡೆಸುತ್ತಿದ್ದ 300ಕ್ಕೂ ಹೆಚ್ಚು ಜನರನ್ನು ಮಂಗಳವಾರ ಬಂಧಿಸಲಾಗಿತ್ತು.

ಇದನ್ನೂ ಓದಿ: ಕುತೂಹಲ ಮೂಡಿಸಿದ ಶ್ರೀರಾಮುಲು-ಅಮಿತ್ ಶಾ ಭೇಟಿ; ನಡೆದ ಚರ್ಚೆಯಾದರೂ ಏನು?

ಪ್ರತಿಭಟನಾಕಾರರನ್ನು ಬಂಧಿಸಿ, ಬಳ್ಳಾರಿಯ ವಾಲ್ಮೀಕಿ ಭವನದಲ್ಲಿ ಇರಿಸಲಾಗಿತ್ತು. ಈ ವೇಳೆ ಕಲಬುರ್ಗಿಯ ಸಿದ್ದಮ್ಮ ಮತ್ತು ಬೀದರ್​ನ ನಾಗಮ್ಮ ಎಂಬ ಇಬ್ಬರು ಮಹಿಳೆಯರು ಅಸ್ವಸ್ಥರಾಗಿದ್ದಾರೆ. ಆ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಕೂಡ ಪ್ರತಿಭಟನೆ ಮುಂದುವರೆಯಲಿದ್ದು, ಅಹಿತಕರ ಘಟನೆ ನಡೆಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿಯಾಗಿ ಪೊಲೀಸರನನ್ನು ನೇಮಕ ಮಾಡಲಾಗಿದೆ.

ಬೆಂಗಳೂರು, ವಿಜಯಪುರ, ಮಂಗಳೂರು, ಕಲಬುರ್ಗಿ, ಹಾಸನ, ಚಿಕ್ಕಮಗಳೂರು ಸೇರಿ ರಾಜ್ಯ ನಾನಾ ಭಾಗಗಳಿಂದ ಬಂದಿರುವ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ 300 ಮಂದಿಯನ್ನು ನಿನ್ನೆ ರಾತ್ರಿ ಬಂಧಿಸಲಾಗಿತ್ತು.
First published: