ಕಲಬುರ್ಗಿ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಮೋಡ ಬಿತ್ತನೆಗೆ ಚಿಂತನೆ - ಪ್ರಿಯಾಂಕ ಖರ್ಗೆ

news18
Updated:August 15, 2018, 3:35 PM IST
ಕಲಬುರ್ಗಿ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಮೋಡ ಬಿತ್ತನೆಗೆ ಚಿಂತನೆ - ಪ್ರಿಯಾಂಕ ಖರ್ಗೆ
news18
Updated: August 15, 2018, 3:35 PM IST
ಶಿವರಾಮ ಅಸುಂಡಿ, ನ್ಯೂಸ್ 18 ಕನ್ನಡ

ಕಲಬುರ್ಗಿ( ಆಗಸ್ಟ್ 15) :  ಕಲಬುರ್ಗಿ ಜಿಲ್ಲೆಯಲ್ಲಿ ಶೇ. 65 ರಿಂದ 70 ರಷ್ಟು ಮಳೆ ಕೊರತೆ ಎದುರಾಗಿದ್ದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯ ತೀವ್ರ ಕೊರತೆಯಿಂದಾಗಿ ಬೆಳೆಗಳು ಒಣಗಲಾರಂಭಿಸಿವೆ. ಎರಡು ದಿನಗಳಿಂದ ಕೆಲವೆಡೆ ಅಲ್ಪ-ಸ್ವಲ್ಪ ಮಳೆಯಾಗಿದೆ. ಆದರೆ ಒಂದು ವಾರದಲ್ಲಿ ಸಮರ್ಪಕ ಮಳೆ ಬಾರದೇ ಇದ್ದಲ್ಲಿ ಬೆಳೆಗಳಿಗೆ ಸಂಕಷ್ಟ ಎದುರಾಗಲಿದೆ ಎಂದರು. 

ಈ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಕುರಿತಾಗಿಯೂ ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚಿಸಲಾಗಿದೆ. ಒಂದೆರಡು ದಿನ ಕಾದು ನೋಡಿ ಮೋಡ ಬಿತ್ತನೆ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ ಖರ್ಗೆ ತಿಳಿಸಿದರು. 

ಭೀಮಾ ನದಿಗೆ ನೀರು ಬಾರದೇ ಇರುವ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ ಖರ್ಗೆ, ಮಹಾರಾಷ್ಟ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಆಗಷ್ಟ್ 17 ರಂದು ನಾನೇ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು. ಭೀಮಾ ನದಿಗೆ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ ಖರ್ಗೆ ಇದೇ ಸಂದರ್ಭದಲ್ಲಿ ತಿಳಿಸಿದರು.
First published:August 15, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ