ಮುಖ್ಯಮಂತ್ರಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಂ ಲಕ್ಷ್ಮೀನಾರಾಯಣ ನೇಮಕ

ಕಳೆದ ವರ್ಷ ಮೇ 17ರಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಲಕ್ಷ್ಮೀನಾರಾಯಣ ಅವರು ಸಿಎಂ ಪ್ರಧಾನ ಕಾರ್ಯದರ್ಶಿಯಾಗಿದ್ದರು.

Ganesh Nachikethu | news18
Updated:July 29, 2019, 6:37 PM IST
ಮುಖ್ಯಮಂತ್ರಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಂ ಲಕ್ಷ್ಮೀನಾರಾಯಣ ನೇಮಕ
ಬಿ.ಎಸ್​. ಯಡಿಯೂರಪ್ಪ.
  • News18
  • Last Updated: July 29, 2019, 6:37 PM IST
  • Share this:
ಬೆಂಗಳೂರು(ಜುಲೈ.29): ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರ ನೂತನ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಂ ಲಕ್ಷ್ಮೀನಾರಾಯಣ ಅವರನ್ನು ನೇಮಕ ಮಾಡಲಾಗಿದೆ. 

ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಜಯ ಗಳಿಸಬೇಕೆಂದು ಬಿಜೆಪಿ ಪಣತೊಟ್ಟಿತ್ತು. ಹೇಗಾದರೂ ಸರಿ ಸೋತ ಕ್ಷೇತ್ರಗಳಿಗೆ ಹೊಸ ಮುಖಗಳು ಇಲ್ಲವೇ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂಬ ನಿರ್ಧರಿಸಿತ್ತು. ಇದರ ಭಾಗವಾಗಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಅವರನ್ನು ಅಭ್ಯರ್ಥಿಯನ್ನಾಗಿಸುವ ಮಾತುಗಳೂ ಕೇಳಿ ಬಂದಿದ್ದವು.

ನಿವೃತ್ತ ಐಎಎಸ್​​ ಅಧಿಕಾರಿ ಎಂ ಲಕ್ಷ್ಮೀನಾರಾಯಣ ಅವರು ಈಗಾಗಲೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಸಮಾಜ ಕಲ್ಯಾಣ, ಲೋಕೋಪಯೋಗಿ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಜತೆಗೆ ಬಿಬಿಎಂಪಿ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ಬಿಜೆಪಿ ಸರಕಾರದ ಅವಧಿಯಲ್ಲಿ ಒಮ್ಮೆ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ಕಳೆದ ವರ್ಷ ಮೇ 17ರಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಲಕ್ಷ್ಮೀನಾರಾಯಣ ಅವರು ಸಿಎಂ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಮತ್ತೆ ಬಿಜೆಪಿ ಬಹುಮತ ಸಾಬೀತು ಮಾಡಲಾಗದ ಕಾರಣ ಸರ್ಕಾರ ಪತನವಾಗಿತ್ತು. ಈಗ ಮತ್ತೊಮ್ಮೆ ಬಿ.ಎಸ್​​ ಯಡಿಯೂರಪ್ಪನವರು ಸಿಎಂ ಆಗಿದ್ಧಾರೆ. ಹಾಗಾಗಿ ಎಂ ಲಕ್ಷ್ಮೀನಾರಾಯಣ ಅವರನ್ನು ಮತ್ತೆ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಗೌರವದೊಂದಿಗೆ ಜೈಪಾಲ್​​ ರೆಡ್ಡಿ ಅಂತ್ಯಕ್ರಿಯೆ; ಮಾಜಿ ಸಿಎಂ ಸಿದ್ದರಾಮಯ್ಯ, ರಮೇಶ್​​ ಕುಮಾರ್​​ ಭಾಗಿ

ಇದರ ಬೆನ್ನಲ್ಲೇ ರಾಜ್ಯದ ಆಡಳಿತ ಯಂತ್ರಕ್ಕೆ ಕತ್ತರಿ ಪ್ರಯೋಗಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇಂದು ರಾತ್ರಿಯೊಳಗೆ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ ಮಾಡುವ ಸಾಧ್ಯತೆಯಿದೆ. ಸದ್ಯ ಆಯಕಟ್ಟಿನ ಜಾಗದಲ್ಲಿರುವ ಹಲವು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಯಡಿಯೂರಪ್ಪ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
-------------
First published: July 29, 2019, 6:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading