ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯದಕ್ಕೆ (SC ST Community) ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ. ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸಚಿವ ಸಂಪುಟ (Cabinet Ministers) ಹೊರಡಿಸಿದ್ದ ಸುಗ್ರೀವಾಜ್ಞೆಗೆ (Ordinance) ರಾಜ್ಯಪಾಲರು ಅಂಕಿತ (Governor Signature) ಹಾಕಿದ್ದಾರೆ. ಈ ಕುರಿತು ಭಾನುವಾರ ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಎಸ್ಸಿ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಎಸ್ಟಿ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಹಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಆಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದು ಗೊತ್ತಿದೆ. ಇದಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
ಮೀಸಲಾತಿ ಪ್ರಮಾಣ ಶೇ 3 ರಿಂದ 7ಕ್ಕೆ ಏರಿಕೆ
ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಸಲಾಗಿದೆ.
ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ
ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರಿಗೆ ನನ್ನ ಕೃತಜ್ಞತೆ
ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಹಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
ಇದನ್ನೂ ಓದಿ: Ramya: ರಾಹುಲ್ ಗಾಂಧಿ ಜೊತೆ ವೇದಿಕೆ ಮೇಲೆ ಕೂರಲು ಸಿಗಲಿಲ್ಲ ಕುರ್ಚಿ; ರಮ್ಯಾ ಫುಲ್ ಗರಂ
ನಾಳೆಯಿಂದಲೇ ಮೀಸಲಾತಿ ಹೆಚ್ಚಳ
ನಾಳೆಯಿಂದಲೇ(ಅಕ್ಟೋಬರ್ 24) ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳವಾಗಲಿದೆ. ಮೀಸಲಾತಿ ಹೆಚ್ಚಳ ಸಂಬಂಧ ಗೆಜೆಟ್ ನೋಟಿಫಿಕೇಶನ್ ಪ್ರಕಟವಾಗಿದೆ. ಇದರೊಂದಿಗೆ ಎಸ್ಸಿ ಸಮುದಾಯದ ಮೀಸಲಾತಿ ಶೇ.15ರಿಂದ ಶೇ.17ಕ್ಕೆ ಹೆಚ್ಚಳವಾಗಲಿದ್ದು, ಎಸ್ಟಿ ಸಮುದಾಯದ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಳವಾಗಲಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಎಸ್ಸಿ, ಎಸ್ಟಿಗೆ ಹೆಚ್ಚುವರಿ ಮೀಸಲಾತಿ ದೊರೆಯಲಿದೆ.
ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ; ರಾಜಕೀಯಕ್ಕೂ ಕಮ್ ಬ್ಯಾಕ್ ಮಾಡ್ತಾರಾ ಪದ್ಮಾವತಿ?
ಎಸ್ಸಿ ವರ್ಗಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್ಟಿ ವರ್ಗಕ್ಕೆ ಶೇ.3ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿದೆ. ಇತ್ತೀಚೆಗೆ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಕೈಗೊಂಡಿರುವ ನಿರ್ಧಾರವನ್ನು ಅನುಷ್ಠಾನಗೊಳಿಸಲು ಸುಗ್ರೀವಾಜ್ಞೆ ಹೊರಡಿಸುವುದಕ್ಕೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿತ್ತು. ಇದೀಗ ಸುಗ್ರೀವಾಜ್ಞೆಗೆ ರಾಜ್ಯಪಾಲರ ಮುದ್ರೆ ಬಿದ್ದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ