ಬೆಂಗಳೂರು(ಜ.31): ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಮಾತನಾಡುವ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು (Tulu Laguage) ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ (Second Official Language) ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡುವಂತೆ ಆಳ್ವಾಸ್ ಶಿಕ್ಷಣ ಸಂಸ್ಥೆಯ (Alva's Educational Institutions)ಅಧ್ಯಕ್ಷ ಡಾ.ಮೋಹನ್ ಆಳ್ವ ನೇತೃತ್ವದ ಸಮಿತಿಗೆ ರಾಜ್ಯ ಸರಕಾರ ಸೂಚಿಸಿದೆ.
ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ?
ರಾಜ್ಯ ಸರ್ಕಾರ ರಚಿಸಿರುವ ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷತೆಯ ಈ ಸಮಿತಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಅಲ್ಲದೇ ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ.
ಇದನ್ನೂ ಓದಿ: Explained: ಗಾಂಧೀಜಿ ದೃಷ್ಟಿಯಲ್ಲಿ ಹಿಂದೂ ಎಂದರೆ ಯಾರು? ಯಾವ ರೀತಿ ಜೀವನವನ್ನು ನಡೆಸಬೇಕು?
ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ಮನವಿ
ತುಳು ಭಾಷೆಗೂ ಅಧಿಕೃತ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಲವು ಸಂಘ-ಸಂಸ್ಥೆಗಳು, ಸಾರ್ವಜನಿಕರಿಂದ ಸರಕಾರಕ್ಕೆ ಮನವಿ ಸಲ್ಲಿಕೆಯಾಗಿತ್ತು. ಅಲ್ಲದೆ ಹಲವು ಬಾರಿ ಟ್ವಿಟರ್ ಅಭಿಯಾನವನ್ನು ನಡೆಸಲಾಗಿತ್ತು. ಈ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಈ ಬಗ್ಗೆ ಕಾನೂನಿನ ಚೌಕಟ್ಟಿನಲ್ಲಿ ಆಗುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿ ವಾಸ್ತವಾಂಶದ ವರದಿ ಸೂಕ್ತ ಶಿಫಾರಸಿನೊಂದಿಗೆ ಸಲ್ಲಿಸಲು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಸೂಚಿಸಿತ್ತು. ಅದರಂತೆ ಇದೀಗ ಅಧ್ಯಯನ ಸಮಿತಿ ರಚಿಸಲಾಗಿದೆ. ಇನ್ನು ವಾರದೊಳಗೆ ವರದಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಈ ಸಮಿತಿಗೆ ಆದೇಶಿಸಿದ್ದಾರೆ.
ಇದನ್ನೂ ಓದಿ: Language Learning: ಹಲವಾರು ಭಾಷೆ ಕಲಿಯುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ನೋಡಿ
ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ.
— Sunil Kumar Karkala (@karkalasunil) January 30, 2023
ಸಚಿವರಿಂದ ಟ್ವೀಟ್
ಈ ಬಗ್ಗೆ ಟ್ಚೀಟ್ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ “ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧ್ಯಯನ ನಡೆಸಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ