Hubballi: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್​​​ ಸಿಗ್ನಲ್, ನಗರದೆಲ್ಲೆಡೆ ಸಂಭ್ರಮಾಚರಣೆ

ಹುಬ್ಬಳ್ಳಿಯಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆಬಿದ್ದಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಾಲಿಕೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಸದನ ಸಮಿತಿ ನೀಡಿದ ವರದಿ ಅನ್ವಯ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಪಾಲಿಕೆಯ ನಿರ್ಧಾರಕ್ಕೆ ಎಲ್ಲರೂ ಸಂಭ್ರಮಾಚರಣೆ ನಡೆಸ್ತಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

  • Share this:
ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ (Idgah Ground) ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಪಾಲಿಕೆ ಮತ್ತು ಹಿಂದೂಪರ ಸಂಘಟನೆಗಳ ನಡುವೆ ಹಗ್ಗ ಜಗ್ಗಾಟದ ಬಳಿಕ ಇಂದು ಸಭೆ ನಡೆಯಿತು. ಸಭೆಯ ಬಳಿಕ ಪಾಲಿಕೆ ಅಧಿಕಾರಿಗಳು ಗಣೇಶ ಹಬ್ಬಕ್ಕೆ (Ganesha Festival) ಅವಕಾಶ ನೀಡಿದರು. ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ಕೊಟ್ಟರು. ಹುಬ್ಬಳ್ಳಿ ಪಾಲಿಕೆಯ ನಿರ್ಧಾರವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸ್ವಾಗತಿಸಿದ್ದಾರೆ. ಇದರ ನಡುವೆ ಈದ್ಗಾ ಮೈದಾನದಲ್ಲಿ ಅವಕಾಶ ಸಿಗುತ್ತಿದ್ದಂತೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಹುಬ್ಬಳ್ಳಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು. ಇನ್ನು ಮೈದಾನದ ಸುತ್ತ ಭಾರೀ ಭದ್ರತೆ ಕೈಗೊಳ್ಳಲಾಗಿದೆ.

ಹುಬ್ಬಳ್ಳಿಯಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆಬಿದ್ದಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಾಲಿಕೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಸದನ ಸಮಿತಿ ನೀಡಿದ ವರದಿ ಅನ್ವಯ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಪಾಲಿಕೆಯ ನಿರ್ಧಾರಕ್ಕೆ ಎಲ್ಲರೂ ಸಂಭ್ರಮಾಚರಣೆ ನಡೆಸ್ತಿದ್ದಾರೆ.

ಗಣೇಶ ಹಬ್ಬವನ್ನು ಸೌಹಾರ್ದತೆಯಿಂದ ಮಾಡೋಣ- ಪ್ರಹ್ಲಾದ್ ಜೋಶಿ
ಪಾಲಿಕೆ ಅನುಮತಿ ನೀಡಿದ್ದಕ್ಕೆ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಒಳ್ಳೆಯ ನಿರ್ಣಯ ತೆಗೆದುಕೊಂಡಿದೆ. ಪಾಲಿಕೆಯ ನಿರ್ಣಯವನ್ನ ನಾನು ಸ್ವಾಗತ ಮಾಡುತ್ತೇನೆ. ಸೌಹಾರ್ದತೆಯಿಂದ ಗಣೇಶೋತ್ಸವ ಆಚರಣೆ ಮಾಡುವುದು ಸೂಕ್ತ ಎಂದರು.

Green signal for Ganesha installation at Hubballi Idgah Maidan celebration all over the city
ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಭದ್ರತೆ


ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಎಡಿಜಿಪಿಗೆ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸಹ ನಾನು ಸೂಕ್ತ ಸಲಹೆ ನೀಡಿದ್ದೇನೆ. ಈಗಾಗಲೇ ಎಲ್ಲಾ ರೀತಿಯ ಕಾನೂನು ಸುವ್ಯವಸ್ಥೆ ಆಗಿದೆ. ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಭದ್ರತೆ ಕಾರ್ಯ ನಡೆಯುತ್ತಿದೆ ಅಂತಾ ಪ್ರಹ್ಲಾದ್ ಜೋಶಿ ತಿಳಿಸಿದರು.

ಇದನ್ನೂ ಓದಿ: ಮಂಗಳೂರು ಗಣಪನ ಅಮೆರಿಕಾ ಪ್ರಯಾಣ!

ಗಣೇಶ ಹಬ್ಬವನ್ನು ಸೌಹಾರ್ದತೆಯಿಂದ ಮಾಡೋಣ. ಇದರಿಂದ ನಾವು ಕಳೆದುಕೊಳ್ಳುವುದೇನೂ ಇಲ್ಲ. ಎಲ್ಲಾ ಶಾಸಕರು, ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಜನ ಯಾವುದೇ ಉದ್ವೇಗಕ್ಕೊಳಗಾಗದೇ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಅಂತಾ ಪ್ರಹ್ಲಾದ್ ಜೋಶಿ ಹೇಳಿದರು.

ಪ್ರಮೋದ್ ಮುತಾಲಿಕ್ ಸಂಭ್ರಮಾಚರಣೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದ್ದಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಹುಬ್ಬಳ್ಳಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯ್ತು. ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

ಇದು ನನ್ನ ಹಲವು ವರ್ಷಗಳ ಕನಸು- ಪ್ರಮೋದ್ ಮುತಾಲಿಕ್
ಪಾಲಿಕೆ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಆ ಬೇಡಿಕೆ ಈಡೇರಿದೆ. ಆರು ಸಂಘಟನೆಗಳ ಪೈಕಿ ಯಾರಿಗೆ ಅವಕಾಶ ಕೊಟ್ಟರು ಸ್ವಾಗತಿಸುತ್ತೇವೆ. ಎಲ್ಲರೂ ಕೂಡಿ ಮೂರು ದಿನ ಗಣೇಶೋತ್ಸವ ಮಾಡ್ತೇವೆ ಅಂತಾ ಪ್ರಮೋದ್ ಮುತಾಲಿಕ್ ಹೇಳಿದರು.

ಇದನ್ನೂ ಓದಿ: ಗಣೇಶ ಹಬ್ಬದಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ, ಬಿಬಿಎಂಪಿ ಆದೇಶ

ಎಲ್ಲಾ ಸಂಘಟನೆಗಳು ಸೇರಿ ಗಣೇಶೋತ್ಸವ ರೂಪುರೇಷೆ ಸಿದ್ಧ ಮಾಡ್ತೇವೆ. ಆದರೆ ಗಣೇಶ ಪ್ರತಿಷ್ಠಾಪನೆಗೆ ಕಾಂಗ್ರೆಸ್ ವಿರೋಧ ಮಾಡ್ತಿರೋದು ಸರಿಯಲ್ಲ. ನಮ್ಮ ಗಣೇಶನಿಗೆ ವಿರೋಧಿಸುವವರೇ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಗೂ ವಿರೋಧ ಮಾಡಲಿ. ವಿನಾಕಾರಣ ವಿವಾದ ಮಾಡೋದನ್ನ ಕಾಂಗ್ರೆಸ್ ಬಿಡಲಿ ಅಂತಾ ಮುತಾಲಿಕ್ ಹೇಳಿದರು.

ಈದ್ಗಾ ಮೈದಾನದ ಸುತ್ತ ಭಾರೀ ಭದ್ರತೆ
ಮುನ್ನೆಚ್ಚರಿಕಾ ಕ್ರಮವಾಗಿ ಮಹಾನಗರ ಪಾಲಿಕೆ ಈದ್ಗಾ ಮೈದಾನದ ಸುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. 11 ದಿನಗಳ ಕಾಲ ಸಿಸಿ ಕ್ಯಾಮರಾ ಕಣ್ಗಾವಲು ಹಾಕಲಾಗಿದೆ. ಒಟ್ಟು ಏಳು ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಜೊತೆಗೆ ಮೈದಾನದ ಎಲ್ಲಾ ಗೇಟ್ ಬಂದ್ ಮಾಡಿ, ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದೆ. ಈದ್ಗಾ ಮೈದಾನದ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಹುಬ್ಬಳ್ಳಿ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.
Published by:Thara Kemmara
First published: