Election Results 2022: ಗುಜರಾತ್ (Gujarat) ಮತ್ತು ಹಿಮಾಚಲ ಪ್ರದೇಶದ (Himachal Pradesh) ಚುನಾವಣೆ ಫಲಿತಾಂಶದ ಅಂಕಿಗಳು ಪ್ರಕಟವಾಗುತ್ತಿವೆ. ಪ್ರಧಾನಿ ಮೋದಿ (PM Modi) ತವರು ಗುಜರಾತಿನಲ್ಲಿ ಮೋಡಿ ಮಾಡಿದ್ದು, ಮತ್ತೊಮ್ಮೆ ಕಮಲ ಅರಳಿದೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ. ಇತ್ತ ಹಿಮಾಚಲ ಪ್ರದೇಶದಲ್ಲಿ ಮ್ಯಾಜಿಕ್ ನಂಬರ್ ಆಸುಪಾಸಿನಲ್ಲಿಯೇ ಕಾಂಗ್ರೆಸ್ ಮತ್ತು ಬಿಜೆಪಿ (Congress And BJP Fight) ಸೆಣಸಾಟ ನಡೆಸುತ್ತಿವೆ. ಗುಜರಾತ್ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಕರ್ನಾಟಕದಲ್ಲಿಯೂ (Karnataka BJP Celebration) ಬಿಜೆಪಿ ಕಾರ್ಯಕರ್ತರು ಕೇಸರಿ ಬಣ್ಣ ಪರಸ್ಪರ ಎರಚಿಕೊಳ್ಳುತ್ತಾ ಸಂಭ್ರಮಿಸುತ್ತಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ (Former CM Siddaramaiah), ಬಿ.ಎಸ್.ಯಡಿಯೂರಪ್ಪ (Former BS Yediyurappa) ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವರು ತಮ್ಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಸಿದ್ದರಾಮಯ್ಯ, ಮಾಜಿ ಸಿಎಂ
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೇರಾನೇರ ಫೈಟ್ ನಡೆಯುತ್ತಿದೆ. ಗುಜರಾತಿನಲ್ಲಿ ಬಿಜೆಪಿ ಗೆಲ್ಲುತ್ತಿದೆ ಎಂಬ ಮಾಹಿತಿ ಇದೆ. ಗುಜರಾತ್ನಲ್ಲಿ AAP ಸ್ಪರ್ಧೆ ಮಾಡಿರುವ ಕಾರಣ ನಮ್ಮ ಮತಗಳ ವಿಂಗಡನೆ ಆಗಿದೆ. ಆದ್ದರಿಂದ ನಮಗೆ ಹಿನ್ನಡೆ ಆಗಿದೆ. ಗುಜರಾತ್ ಚುನಾವಣೆ ಫಲಿತಾಂಶ ನಮ್ಮ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ದೆಹಲಿಯಲ್ಲಿ ಯಾಕೆ ಬಿಜೆಪಿ ಗೆಲ್ಲಲಿಲ್ಲ ಎಂದು ಪ್ರಶ್ನೆ ಮಾಡಿದ ಸಿದ್ದರಾಮಯ್ಯವರು ಫಲಿತಾಂಶಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅಲ್ಲಿಯ ಸಮಸ್ಯೆಗಳು, ರಾಜಕೀಯ ಸನ್ನಿವೇಶಗಳು, ಆಡಳಿತ ಸೇರಿದಂತೆ ಹಲವು ಅಂಶಗಳು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದರು.
ಚುನಾವಣೆ ಫಲಿತಾಂಶದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಗುಜರಾತ್ ಫಲಿತಾಂಶ ನೋಡಿದರೆ ಪ್ರಧಾನಿ ಮೋದಿ ಅವರ ವರ್ಚಸ್ಸು ಹೇಗಿದೆ ಅನ್ನೋದು ಗೊತ್ತಾಗುತ್ತದೆ. ಗುಜರಾತ್ ಫಲಿತಾಂಶ ನಮಗೆ ಹುಮ್ಮಸ್ಸು ನೀಡಿದೆ. ಕರ್ನಾಟಕದಲ್ಲಿ ನಾವು 140 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಭವಿಷ್ಯ ನುಡಿದರು.
ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬಿರುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್ವೈ, ಸಿದ್ದರಾಮಯ್ಯ ಹೇಳುವ ಯಾವುದೇ ವಿಚಾರ ನಿಜವಲ್ಲ. ಸಿದ್ದರಾಮಯ್ಯ ಹೇಳೋದೇಲ್ಲ ಸುಳ್ಳು ಎಂದು ತಿರುಗೇಟು ನೀಡಿದರು.
ಹಿಮಾಚಲ ಪ್ರದೇಶದಲ್ಲಿ 5 ವರ್ಷಕ್ಕೆ ಒಮ್ಮೆ ಜನರು ಸರ್ಕಾರ ಬದಲಿಸುತ್ತಾರೆ. ನಮಗೆ 5ರಿಂದ 6 ಸೀಟುಗಳ ಹಿನ್ನೆಡೆಯಾಗಿದೆ. ಇನ್ನು ಅಂತಿಮ ಫಲಿತಾಂಶ ಬಂದಿಲ್ಲ. ಕಾಂಗ್ರೆಸ್ ಹಿಮಾಚಲದಲ್ಲಿ ಕೊಂಚ ಉಸಿರಾಡುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಅದು ಕೂಡ ನಿಂತು ಹೋಗಲಿದೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ: Janardhan Reddy: ರಾಜಕೀಯಕ್ಕೆ ಜನಾರ್ದನ ರೆಡ್ಡಿ ಪತ್ನಿ? ಹೊಸ ಪಕ್ಷ ಸ್ಥಾಪನೆ ಮಾಡ್ತಾರಾ?
ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ
ಗುಜರಾತ್ನಲ್ಲಿ ಇಷ್ಟು ಕಡಿಮೆ ಸ್ಥಾನ ಬರಬಹುದು ಅಂತ ಅಂದುಕೊಂಡಿರಲಿಲ್ಲ. ಆಮ್ ಆದ್ಮಿ ಪಾರ್ಟಿ ಗುಜರಾತಿನ ಕಾಂಗ್ರೆಸ್ ವೋಟ್ ಬ್ಯಾಂಕ್ ಪಡೆಯುವಲ್ಲಿ ಯಶಸ್ವಿ ಆಗಿದೆ. ಆಮ್ ಆದ್ಮಿ ಇಡೀ ಗುಜರಾತಿನಲ್ಲಿ ನಮ್ಮಿಂದ 10-15 ಸಾವಿರ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಚುನಾವಣೆ ಫಲಿತಾಂಶ ವಿಶ್ಲೇಷಣೆ ಮಾಡಿದರು.
ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ
ಗುಜರಾತ್ ಸಾಕಷ್ಟು ಅಭಿವೃದ್ಧಿಯಾಗಿದ್ದು, ಅಲ್ಲಿ ಹೋದರೆ ನಿಮಗೆ ಗೊತ್ತಾಗುತ್ತದೆ. ಇಡೀ ದೇಶಕ್ಕೆ ಮಾದರಿಯಾಗಿ ಅಭಿವೃದ್ಧಿ ಮಾಡಲಾಗಿದೆ. ಅದೇ ರೀತಿಯಲ್ಲಿ ನಾವು ನಮ್ಮ ರಾಜ್ಯದಲ್ಲೂ ಅಭಿವೃದ್ಧಿ ಮಾಡಿದ್ದೇವೆ. ಗುಜರಾತ್ ರೀತಿಯಲ್ಲಿ ನಾವೂ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಇದನ್ನೂ ಓದಿ: Gujarat Election Results 2022: ಗುಜರಾತ್ ಚುನಾವಣೆ ಫಲಿತಾಂಶ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರಿಗೆ ಶುರುವಾಯ್ತು ನಡುಕ!
ಗುಜರಾತ್ನಲ್ಲಿ ಪೇಜ್ ಪ್ರಮುಖ ರಚನೆ ಯಶಸ್ವಿಯಾಗಿದೆ. ನಮ್ಮ ರಾಜ್ಯದಲ್ಲೂ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಪೇಜ್ ಪ್ರಮುಖ ರಚಿಸಿದ್ದೇವೆ. ಪೂರ್ಣ ಬಹುಮತ ರಾಜ್ಯದಲ್ಲೂ ಬರಲಿದೆ. ಇಂದಿನ ಫಲಿತಾಂಶ ಇಡೀ ದೇಶಕ್ಕೆ ಸಂತೋಷ ತಂದಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇದೆ. ಅಲ್ಲಿಗೂ ಈ ಚುನಾವಣೆ ದಿಕ್ಸೂಚಿ ಆಗಲಿದೆ ಎಂದು ಅಭಿಪ್ರಾಯಪಟ್ಟರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ