ಸಿದ್ದರಾಮಯ್ಯ ಭ್ರಷ್ಟಾಚಾರಿಯಲ್ಲ, ಅತ್ಯುತ್ತಮ ಆಡಳಿತಗಾರ; ಕಡು ವೈರಿಯನ್ನು ಹಾಡಿ ಹೊಗಳಿದ ಎಚ್. ವಿಶ್ವನಾಥ್!

ಸಿದ್ದರಾಮಯ್ಯ ಒಳ್ಳೆಯ ಆಡಳಿತಗಾರ. ಆ ಕಾರಣದಿಂದಲೇ ಅಧಿಕಾರದಲ್ಲಿ ಇಲ್ಲದಿದ್ದರೂ ರಾಜ್ಯದ ಜನತೆ ಸಿದ್ದರಾಮಯ್ಯರನ್ನು ಪ್ರೀತಿಸುತ್ತಾರೆ. ವಿಪಕ್ಷದವರೂ ಅವರನ್ನು ಇಷ್ಟಪಡುತ್ತಾರೆ. ನಾನೂ ಸಿದ್ದರಾಮಯ್ಯ ಅವರನ್ನು ಇಷ್ಟಪಡುತ್ತೇನೆ ಎನ್ನುವ ಮೂಲಕ ಎಚ್​. ವಿಶ್ವನಾಥ್​ ಅಚ್ಚರಿ ಮೂಡಿಸಿದ್ದಾರೆ.

news18-kannada
Updated:November 23, 2019, 2:26 PM IST
ಸಿದ್ದರಾಮಯ್ಯ ಭ್ರಷ್ಟಾಚಾರಿಯಲ್ಲ, ಅತ್ಯುತ್ತಮ ಆಡಳಿತಗಾರ; ಕಡು ವೈರಿಯನ್ನು ಹಾಡಿ ಹೊಗಳಿದ ಎಚ್. ವಿಶ್ವನಾಥ್!
ಎಚ್​. ವಿಶ್ವನಾಥ್​- ಸಿದ್ದರಾಮಯ್ಯ
  • Share this:
ಮೈಸೂರು (ನ. 23): ರಾಜಕೀಯದಲ್ಲಿ ಯಾರಿಗೆ ಯಾರು ಬೇಕಾದರೂ ಶತ್ರುವಾಗಬಹುದು, ಯಾರು ಯಾವಾಗ ಬೇಕಾದರೂ ಮಿತ್ರನಾಗಬಹುದು. ಇಂತಹ ಪವಾಡಗಳು ರಾಜಕಾರಣದಲ್ಲಿ ಆಗಾಗ ನಡೆಯುತ್ತಲೇ ಇರುತ್ತವೆ. ಕರ್ನಾಟಕದಲ್ಲೂ ಅಂಥದ್ದೊಂದು ಅಚ್ಚರಿಯ ಸಂಗತಿ ನಡೆದಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡಾಗಲೂ ಸಿದ್ದರಾಮಯ್ಯ ಇದ್ದ ಕಡೆ ಕಾಲನ್ನೂ ಇಡದ ಅನರ್ಹ ಶಾಸಕ ಎಚ್. ವಿಶ್ವನಾಥ್ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ!

ಸಿದ್ದರಾಮಯ್ಯ ಮತ್ತು ಎಚ್. ವಿಶ್ವನಾಥ್ ಯಾವ ಮಟ್ಟಿಗಿನ ವೈರಿಗಳು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಸಮನ್ವಯ ಸಮಿತಿ ಸಭೆಗೆ ಆಗ ಜೆಡಿಎಸ್​ ರಾಜ್ಯಾಧ್ಯಕ್ಷರಾಗಿದ್ದ ಎಚ್. ವಿಶ್ವನಾಥ್ ಅವರನ್ನು ಹೊರಗಿಟ್ಟು ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದರು. ಈ ಬಗ್ಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಎಚ್​. ವಿಶ್ವನಾಥ್​ ನೇರವಾಗಿಯೇ ಆಕ್ರೋಶ ಹೊರಹಾಕಿದ್ದರು. ಇಬ್ಬರೂ ಎಷ್ಟೋ ಬಾರಿ ಸಾರ್ವಜನಿಕ ಸಭೆಗಳಲ್ಲೇ ಬಹಿರಂಗವಾಗಿ ಟೀಕಾಪ್ರಹಾರ ನಡೆಸಿಕೊಂಡ ಉದಾಹರಣೆಗಳು ಬೇಕಾದಷ್ಟಿವೆ. ಆದರೆ, ಇಂದು ಹುಣಸೂರಿನಲ್ಲಿ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿ ಎಚ್​. ವಿಶ್ವನಾಥ್​ ತಮ್ಮ ರಾಜಕೀಯ ವೈರಿ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ನನಗೂ ಸಿದ್ದರಾಮಯ್ಯ ಎಂದರೆ ಇಷ್ಟ ಎಂದ ಹಳ್ಳಿಹಕ್ಕಿ!:

ಸಿದ್ದರಾಮಯ್ಯ ಭ್ರಷ್ಟಾಚಾರಿಯಲ್ಲ, ಅವರೊಬ್ಬ ಒಳ್ಳೆಯ ಆಡಳಿತಗಾರ. ಆ ಕಾರಣದಿಂದಲೇ ಅಧಿಕಾರದಲ್ಲಿ ಇಲ್ಲದಿದ್ದರೂ ರಾಜ್ಯದ ಜನತೆ ಸಿದ್ದರಾಮಯ್ಯರನ್ನು ಪ್ರೀತಿಸುತ್ತಾರೆ. ವಿಪಕ್ಷದವರೂ ಅವರನ್ನು ಇಷ್ಟಪಡುತ್ತಾರೆ. ನಾನೂ ಸಿದ್ದರಾಮಯ್ಯ ಅವರನ್ನು ಇಷ್ಟಪಡುತ್ತೇನೆ. ನಾನು ದೇವೇಗೌಡರ ಫೋಟೋವನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡುತ್ತೇನೆ. ಜೀವ ಇರೋವರೆಗೂ ದೇವೇಗೌಡರಿಗೆ ಪೂಜೆ ಮಾಡುತ್ತೇನೆ. ನನಗೆ ರಾಜಕೀಯ ಸ್ಥೈರ್ಯ ಕೊಟ್ಟಿದ್ದೇ ದೇವೇಗೌಡರು ಎಂದು ಬಿಜೆಪಿ ಸೇರ್ಪಡೆಯಾಗಿ ಹುಣಸೂರು ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್​. ವಿಶ್ವನಾಥ್ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ವಿಧಾನಸಭಾ ಉಪಚುನಾವಣೆಗೆ ದಿನಗಣನೆ; ಹುಣಸೂರಿನಲ್ಲಿ ಇಂದು ಮೂರೂ ಪಕ್ಷಗಳಿಂದ ಭರ್ಜರಿ ಪ್ರಚಾರ

ಇದೇ ಮೊದಲ ಬಾರಿಗೆ ಟೀಕೆ ಬಿಟ್ಟು ಎದುರಾಳಿಗಳನ್ನು ಹೊಗಳಿರುವ ಎಚ್. ವಿಶ್ವನಾಥ್ ಪ್ರಚಾರದ ವೇಳೆ ಭಾವುಕರಾಗಿದ್ದಾರೆ. ನಾನು ಸ್ವಾಭಿಮಾನಕ್ಕಾಗಿ ರಾಜೀನಾಮೆ ನೀಡಿದ್ದೇನೆ.ಈ ಕುರುಬನನ್ನು ಗೆಲ್ಲಿಸಿದ್ದು ನಾವು ಎಂದು ಹಂಗಿಸುತ್ತಿದ್ದರು. ನಿಮ್ಮ ಜಾತಿಯವರು ನನ್ನ ಮತ ಹಾಕಿ ಗೆಲ್ಲಿಸಿಲ್ಲ ಎಂದು ಹೀಯಾಳಿಸುತ್ತಿದ್ದರು. ಅದಕ್ಕಾಗಿ ನೋವಾಗಿ ಪಕ್ಷ ಬಿಟ್ಟೆ ಎಂದು ಹೇಳಿದ್ದಾರೆ.

ನಾನು ಸಿಎಂ ಕುಮಾರಸ್ವಾಮಿ ಅವರನ್ನು ನೋಡಲು ಸ್ಟಾರ್ ಹೋಟೆಲ್ ಬಳಿ ಹೋಗಬೇಕಿತ್ತು. ನನ್ನನ್ನು ಹೋಟೆಲ್ ಗೇಟ್​ನಲ್ಲಿ ನಿಲ್ಲಿಸುತ್ತಿದ್ದರು. ಇದನ್ನು ಸಹಿಸಲಾರದೆ ಪಕ್ಷ ಬಿಟ್ಟೆ.ಸಿದ್ದರಾಮಯ್ಯ ಜೆಡಿಎಸ್ ಬಿಟ್ಟ ರೀತಿಯಲ್ಲೇ ಸ್ವಾಭಿಮಾನಕ್ಕಾಗಿ ನಾನು ಪಕ್ಷ ಬಿಟ್ಟೆ ಎಂದು ಹುಣಸೂರಿನಲ್ಲಿ ಅನರ್ಹ ಶಾಸಕ ಎಚ್. ವಿಶ್ವನಾಥ್ ತಾವು ಜೆಡಿಎಸ್​ಗೆ ರಾಜೀನಾಮೆ ನೀಡಿದ ಕಾರಣವನ್ನು ಬಹಿರಂಗಪಡಿಸಿದ್ದಾರೆ.
First published: November 23, 2019, 2:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading