ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯದ ಆಡಳಿತ ಮಂಡಳಿ ಕಳೆದ 6 ತಿಂಗಳಿಂದ ಸುಮಾರು 45 ಸಾವಿರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಆದರೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನಹರಿಸುತ್ತಿಲ್ಲ.
ಹಾಸನ(ನ.11): ವಿದ್ಯುತ್ ಬಿಲ್ ಪಾವತಿ ಮಾಡದ ಹಿನ್ನೆಲೆ, ಇತಿಹಾಸ ಪ್ರಸಿದ್ಧ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯದ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ. ಹೀಗಾಗಿ ಪ್ರವಾಸಿ ತಾಣವಾದ ಹೊಯ್ಸಳೇಶ್ವರ ದೇವಾಲಯ ಕತ್ತಲಲ್ಲಿ ಇದೆ. ಹೀಗಾಗಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಹೊಯ್ಸಳೇಶ್ವರ ದೇವಾಲಯಕ್ಕೆ ಕತ್ತಲಲ್ಲೇ ಪೂಜೆ ಮಾಡಲಾಗುತ್ತಿದೆ. ಪ್ರತಿನಿತ್ಯ ದೇವಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರು ಕತ್ತಲಲ್ಲೇ ದೇವರ ದರ್ಶನ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇವಾಲಯದ ಒಳಗೆ ವಿದ್ಯುತ್ ಇಲ್ಲದ ಪರಿಣಾಮ ದೇವಾಲಯದ ಒಳಭಾಗದ ಶಿಲ್ಪಕಲೆ ವೀಕ್ಷಿಸಲಾಗದೆ ಪ್ರವಾಸಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯದ ಆಡಳಿತ ಮಂಡಳಿ ಕಳೆದ 6 ತಿಂಗಳಿಂದ ಸುಮಾರು 45 ಸಾವಿರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಆದರೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನಹರಿಸುತ್ತಿಲ್ಲ. ಮೂರು ತಿಂಗಳ ಹಿಂದಷ್ಟೇ ವಿದ್ಯುತ್ ಬಿಲ್ ಪಾವತಿಸದ ಕಾರಣ ಸೆಸ್ಕ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿತ್ತು. ಈ ವೇಳೆ ಬಿಲ್ ಪಾವತಿಸುವುದಾಗಿ ಹೇಳಿದ್ದರಿಂದ ಸೆಸ್ಕ್ ಮತ್ತೆ ಸಂಪರ್ಕ ಕಲ್ಪಿಸಿತ್ತು.
ಆದರೆ ಕೊಟ್ಟ ಮಾತಿನಂತೆ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಅಂದಿನಿಂದ ಬಿಲ್ ಬಾಕಿ ಇದ್ದು ಈಗ ನಿಯಮಾನುಸಾರ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ. ಹೀಗಾಗಿ ಕಳೆದ ಹತ್ತು ದಿನಗಳಿಂದ ದೇವಾಲಯಕ್ಕೆ ವಿದ್ಯುತ್ ಸಂಪರ್ಕ ಇಲ್ಲ.
ಇತಿಹಾಸ ಪ್ರಸಿದ್ಧ ಹೊಯ್ಸಳೇಶ್ವರ ದೇವಾಲಯದ ವಿದ್ಯುತ್ ಬಿಲ್ ಕಟ್ಟಲಾಗದಷ್ಟು ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆಯಾ ಎಂದು ಪ್ರವಾಸಿಗರು ಪ್ರಶ್ನಿಸುತ್ತಿದ್ದಾರೆ.
Published by:Latha CG
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ