• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • By Election; ಸಿಂದಗಿ, ಹಾನಗಲ್ ಉಪಚುನಾವಣೆ; ಎರಡೂ ಕ್ಷೇತ್ರಗಳಲ್ಲಿ ಮತದಾನ ಆರಂಭ: ಎರಡೂ ಕ್ಷೇತ್ರಗಳಲ್ಲಿ ಮತಗಾರರ ಸಂಖ್ಯೆ ಎಷ್ಟು?

By Election; ಸಿಂದಗಿ, ಹಾನಗಲ್ ಉಪಚುನಾವಣೆ; ಎರಡೂ ಕ್ಷೇತ್ರಗಳಲ್ಲಿ ಮತದಾನ ಆರಂಭ: ಎರಡೂ ಕ್ಷೇತ್ರಗಳಲ್ಲಿ ಮತಗಾರರ ಸಂಖ್ಯೆ ಎಷ್ಟು?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕಾಂಗ್ರೆಸ್ (Congress), ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೂರು ಪಕ್ಷಗಳಿಗೂ ಈ ಉಪ ಕದನ ಪ್ರತಿಷ್ಠೆಯಾಗಿದೆ. ಮತದಾರರು ಅಭ್ಯರ್ಥಿಗಳ ಹಣೆ ಬರಹವನ್ನು ಇವಿಎಂನಲ್ಲಿ ದಾಖಲಿಸುತ್ತಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭುಸನೂರು ಮತ್ತು ಜೆಡಿಎಸ್ ನಿಂದ ನಾಜೀಯಾ ಅಂಗಡಿ ಕಣದಲ್ಲಿದ್ದಾರೆ. ಇತ್ತ ಹಾನಗಲ್ ನಲ್ಲಿ ಕಾಂಗ್ರೆಸ್ ನಿಂದ  ಶ್ರೀನಿವಾಸ್ ವಿ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನ್  ಮತ್ತು ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧೆಯಲ್ಲಿದ್ದಾರೆ.

ಮುಂದೆ ಓದಿ ...
  • Share this:

ವಿಜಯಪುರ/ಹಾವೇರಿ: ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ (Sindagi) ಮತ್ತು ಹಾನಗಲ್ (Hangal)ವಿಧಾನಸಭಾ ಕ್ಷೇತ್ರಗಳಿಗೆ (By Election) ಇಂದು ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸುತ್ತಿದ್ದು, ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಕಾಂಗ್ರೆಸ್ (Congress), ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೂರು ಪಕ್ಷಗಳಿಗೂ ಈ ಉಪ ಕದನ ಪ್ರತಿಷ್ಠೆಯಾಗಿದೆ. ಮತದಾರರು ಅಭ್ಯರ್ಥಿಗಳ ಹಣೆ ಬರಹವನ್ನು ಇವಿಎಂನಲ್ಲಿ ದಾಖಲಿಸುತ್ತಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭುಸನೂರು ಮತ್ತು ಜೆಡಿಎಸ್ ನಿಂದ ನಾಜೀಯಾ ಅಂಗಡಿ ಕಣದಲ್ಲಿದ್ದಾರೆ. ಇತ್ತ ಹಾನಗಲ್ ನಲ್ಲಿ ಕಾಂಗ್ರೆಸ್ ನಿಂದ  ಶ್ರೀನಿವಾಸ್ ವಿ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನ್  ಮತ್ತು ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧೆಯಲ್ಲಿದ್ದಾರೆ.


ಸಿಂದಗಿ ವಿಧಾನಸಭಾ ಕ್ಷೇತ್ರ


ಬೆಳಗ್ಗೆ ೭ರಿಂದ ಸಂಜೆ ೭ರ ವರೆಗೆ ಉಪ ಚುನಾವಣೆಯ ಮತದಾನ ನಡೆಯಲಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಕೇಂದ್ರಗಳು ಆರಂಭಗೊಂಡಿದ್ದು, ಸಿಬ್ಬಂದಿ ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದ್ದಾರೆ. ಸಿಂದಗಿ ಚುನಾವಣೆಯಲ್ಲಿ ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.


1,20,844 ಪುರುಷ ಮತದಾರರು, 1,13,561 ಮಹಿಳಾ ಮತದಾರರು, 32 ಇತರೆ, 147 ಸರ್ವಿಸ್ ವೋಟರಗಳು ಮತ ಚಲಾಯಿಸಲಿದ್ದಾರೆ. 271 ಮತದಾನ ಕೇಂದ್ರಗಳನ್ನು ಹಾಗೂ 26 ಆಕ್ಸಿಲರಿ ಮತದಾನ ಕೇಂದ್ರಗಳು ಸೇರಿದಂತೆ ಒಟ್ಟು 297 ಮತದಾನ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ.


ಇದನ್ನೂ ಓದಿ:  Nalin Kumar Kateel: 'ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್': ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ


7 ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿದ್ದು,  22 ಸೆಕ್ಟರ್ ಆಫೀಸರ್ ಗಳು,   18 ಫ್ಲೈಯಿಂಗ್ ಸ್ಕ್ವೇಡ ತಂಡಗಳು, 21 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮತದಾನದ ವೇಳೆ 1308 ಸಿಬ್ಬಂದಿ ನಿಯೋಜಿಸಲಾಗಿದ್ದು, ಇದರಲ್ಲಿ 327 ಪಿಆರ್ ಓ, 327   ಎಪಿಆರ್ ಓ  ಹಾಗೂ  654  ಪಿ ಓ ಗಳನ್ನು ನಿಯೋಜಿಸಲಾಗಿದೆ.


ಪೊಲೀಸ್ ಸಿಬ್ಬಂದಿ ನೇಮಕ


ಸಿಂದಗಿಯ ಆರ್ .ಡಿ ಪಾಟೀಲ್ ಕಾಲೇಜಿನಲ್ಲಿ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರ  ಸ್ಥಾಪಿಸಲಾಗಿದೆ. ಮತದಾನ ಕರ್ತವ್ಯಕ್ಕಾಗಿ, ಸಿಬ್ಬಂದಿಗಳಿಗೆ  66 ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.


ಕಾನೂನು ಸುವ್ಯವಸ್ಥೆ ಕಾಪಾಡಲು ಡಿವೈಎಸ್ಪಿ-02, ಸಿಪಿಐ-4, ಪಿಎಸ್ಐ-22,   ಎಎಸ್ಐ-70, ಹೆಡ್ ಕಾನ್ಸ್ಟೇಬಲ್ ಮತ್ತು ಪೊಲೀಸ್ ಕಾನ್ಸ್ಟೇಬಲ್-477, ಡಿಎಆರ್-40, ಐ ಆರ್ ಬಿ-180, ಸಿಐಎಸ್ಎಫ್-185 ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.


ಹಾನಗಲ್ ವಿಧಾನಸಭಾ ಕ್ಷೇತ್ರ 


1,05,525 ಪುರುಷ ಮತದಾರರು, 98,953 ಮಹಿಳಾ ಮತದಾರರು, 83 ಸೇವಾ ಮತದಾರರು, ಮೂವರು ಇತರೆ ಮತದಾರರು ಸೇರಿದಂತೆ ಹಕ್ಕು ಚಲಾಯಿಸಲಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,04,564 ಮತದಾರರಿದ್ದಾರೆ.


ಇದನ್ನೂ ಓದಿ:  ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್


239 ಮೂಲ ಮತಗಟ್ಟೆಗಳು ಮತ್ತು 24 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 263 ಮತಗಟ್ಟೆಗಳು ಸಿದ್ಧಪಡಿಸಲಾಗಿದೆ.  263 ಮತಗಟ್ಟೆಗಳಲ್ಲಿ 1,155 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.


ಕ್ಷೇತ್ರದಲ್ಲಿರೋ 33 ಸೂಕ್ಷ್ಮ ಮತ್ತು 3 ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 121 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಒಂದು ವಿಕಲಚೇತನ ಸ್ನೇಹಿ ಮತಗಟ್ಟೆ ಮತ್ತು ಎರಡು ಸಖಿ ಮತಗಟ್ಟೆಗಳ ಸ್ಥಾಪನೆ ಸಹ ಮಾಡಲಾಗಿದೆ.


610 ಪೊಲೀಸ್ ಸಿಬ್ಬಂದಿ, ನಾಲ್ಕು ಡಿವೈಎಸ್ಪಿ, 11 ಸಿಪಿಐಗಳು, 29 ಪಿಎಸ್ಐಗಳು, 85 ಎಎಸ್ಐಗಳು, 481 ಜನ ಕಾನಸ್ಟೇಬಲ್ ಗಳು, 30 ಜನ ಮಹಿಳಾ ಸಿಬ್ಬಂದಿಗಳು, 90 ಜನ ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಆರ್ ಪಿಎಫ್ ಮತ್ತು 90 ಜನ ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಐಎಸ್ಎಫ್ ತಂಡ ನಿಯೋಜನೆ ಮಾಡಲಾಗಿದೆ.


ಮತದಾನ ಕೇಂದ್ರಗಳತ್ತ ಮತದಾರರ ಅಗಮನ


ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸುತ್ತಿದ್ದು, ತಮ್ಮ ಹಕ್ಕುಚಲಾಯಿಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಪ್ರಚಾರದ ವೇಳೆ ರಾಜಕೀಯ ನಾಯಕರು  ವೈಯಕ್ತಿಕವಾಗಿ ಟೀಕೆಗಳನ್ನು ಮಾಡಿದ್ದರು. ನವೆಂಬರ್ ಎರಡರಂದು ಮತ ಎಣಿಕೆ ನಡೆಯಲಿದೆ.

First published: