Kodagu Rain: ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್​ ನೀರು ಹೊರಕ್ಕೆ

ಹಾರಂಗಿ ಜಲಾಶಯ 8.5 ಟಿಎಂಸಿ ಸಾಮರ್ಥಯವನ್ನು ಹೊಂದಿದೆ. ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ 6.5 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 4864 ಕ್ಯುಸೆಕ್ ನೀರು ಹರಿದು ಬರುತ್ತಿದೆ.

news18-kannada
Updated:July 17, 2020, 1:46 PM IST
Kodagu Rain: ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್​ ನೀರು ಹೊರಕ್ಕೆ
ಹಾರಂಗಿ ಜಲಾಶಯ
  • Share this:
ಕೊಡಗು (ಜು.17): ಜೂನ್​ ತಿಂಗಳಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಜುಲೈನಲ್ಲಿ ಚುರುಕಾಗಿದೆ. ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಆಗುತ್ತಿದೆ. ಅಂತೆಯೇ ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಬಹುತೇಕ ಭರ್ತಿಯಾಗಿದೆ.

ಹಾರಂಗಿ ಜಲಾಶಯ 8.5 ಟಿಎಂಸಿ ಸಾಮರ್ಥಯವನ್ನು ಹೊಂದಿದೆ. ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ 6.5 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 4864 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಟಿಎಂಸಿ ಅಡಿ ನೀರು ಅಗತ್ಯವಿರುವಾಗಲೇ ಜಲಾಶಯದಿಂದ 5 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹಾರಿಸಲಾಗುತ್ತಿದೆ.

ಕಳೆದ ಎರಡು ವರ್ಷಗಳಲ್ಲೂ ಹಾರಂಗಿ ಜಲಾಶಯದಿಂದ ತಡವಾಗಿ ನೀರು ಹರಿಸಲಾಗಿತ್ತು. ಜೊತೆಗೆ ಕಾವೇರಿ ನದಿಯಲ್ಲೂ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರಿಂದ ಜಲಾಶಯದ ನೀರು ಸಹ ನದಿಗೆ ಒಮ್ಮೆಲೆ ಸೇರಿ ಪ್ರವಾಹ ಉಂಟಾಗಿತ್ತು. ಇದರಿಂದ ಹತ್ತಾರು ಬಡಾವಣೆಗಳ ಸಾವಿರಾರು ಮನೆಗಳು ಪ್ರವಾಹದ ನೀರಿನಲ್ಲಿ ಮುಳುಗಿದ್ದವು.

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಲ್ಲಿ ಭಾರಿ ನೀರು ಸಂಗ್ರಹವಾಗುವ ಮೊದಲೇ ನದಿಗೆ ನೀರು ಹರಿಸುವಂತೆ ಸೂಚಿಸಿದ್ದಾರೆ. ಸದ್ಯ ಜಲಾಶಯದ ಮೂರು ಕ್ರೆಸ್ ಗೇಟ್ ಗಳನ್ನು ತೆಗೆದು 5 ಸಾವಿರ ಕ್ಯುಸೆಕ್ ನೀರನ್ನು ಜಲಾಶಯದಿಂದ ನದಿಗೆ ಹಾರಿಸಲಾಗುತ್ತಿದೆ.

ಮೂರು ದಿನಗಳಿಂದ ಮಳೆ:

ಕೊಡಗು ಭಾಗದಲ್ಲಿ ನಿರಂತರವಾಗಿ ಮೂರು ದಿನಗಳಿಂದ ಮಳೆ ಆಗುತ್ತಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿದೆ. ಇನ್ನು, ಮಳೆಗಾಲದ ಆರಂಭದಲ್ಲಿ ಅಲ್ಲಲ್ಲಿ ಗುಡ್ಡ-ಬೆಟ್ಟ ಕುಸಿದ ಬಗ್ಗೆ ವರದಿ ಆಗಿತ್ತು. ಈಗ ಭಾರೀ ಮಳೆ ಆಗುತ್ತಿದ್ದರೂ ಎಲ್ಲಿಯೂ ಅವಘಡ ಸಂಭವಿಸಿಲ್ಲ.
Published by: Rajesh Duggumane
First published: July 17, 2020, 1:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading