Harsha Murder: ಹರ್ಷನ ಕನಸಿನಂತೆ ಬಡ ಮಕ್ಕಳಿಗೆ ನೆರವು, ಗೋಶಾಲೆ ನಿರ್ಮಾಣ, ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ

ಸಹೋದರ ಹರ್ಷ ಹೆಸರಿನ ಚಾರಿಟೇಬಲ್ ಟ್ರಸ್ಟ್ ಮೂಲಕ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತೇವೆ. ಬಡವರಿಗೆ ಆರೋಗ್ಯಕ್ಕೆ ಸಹಾಯ ಮಾಡುತ್ತೇವೆ ಎಂದು ಅಶ್ವಿನಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹರ್ಷ

ಹರ್ಷ

  • Share this:
ಶಿವಮೊಗ್ಗ: ಮೃತ ಸಹೋದರ, ಭಜರಂಗದಳ ಕಾರ್ಯಕರ್ತ ಹರ್ಷನ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ (Charitable Trust) ಸ್ಥಾಪಿಸಿರುವುದಾಗಿ ಶಿವಮೊಗ್ಗದಲ್ಲಿ ಹರ್ಷ (Shivamogga Harsha Murder Case) ಅವರ ಸಹೋದರಿ ಅಶ್ವಿನಿ ತಿಳಿಸಿದ್ದಾರೆ. ಸಮಾಜದಲ್ಲಿನ ಬಡ ಮಕ್ಕಳಿಗೆ ಸಹಾಯ ಮಾಡಲು ಹರ್ಷನ ಹೆಸರಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪನೆ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಹರ್ಷನ ಸಾವಿನ ದುಃಖದಿಂದ ನಾವು ಇನ್ನು ಹೊರಬಂದಿಲ್ಲ. ಸರ್ಕಾರ, ಸಂಘ, ಸಂಸ್ಥೆಗಳಿಂದ ನಮ್ಮ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದರು. ಈ ಆರ್ಥಿಕ ಸಹಾಯದಿಂದ ಹರ್ಷನ ಕನಸಿನಂತೆ ಬಂದ ಹಣದಿಂದ ಟ್ರಸ್ಟ್ ಸ್ಥಾಪನೆ ಮಾಡಿದ್ದೇವೆ. ಟ್ರಸ್ಟ್​​ನಿಂದ ಬಡಮಕ್ಕಳಿಗೆ ನೆರವು ನೀಡುತ್ತೇವೆ ಎಂದು ಮೃತ ಹರ್ಷ ಅವರ ಸಹೋದರಿ ಅಶ್ವಿನಿ (Harsha Sister Ashwini) ಮಾಹಿತಿ ನೀಡಿದ್ದಾರೆ.

ಸಹೋದರ ಹರ್ಷ ಹೆಸರಿನ ಚಾರಿಟೇಬಲ್ ಟ್ರಸ್ಟ್ ಮೂಲಕ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತೇವೆ. ಬಡವರಿಗೆ ಆರೋಗ್ಯಕ್ಕೆ ಸಹಾಯ ಮಾಡುತ್ತೇವೆ ಎಂದು ಅಶ್ವಿನಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಯಾರೆಲ್ಲ ಇರಲಿದ್ದಾರೆ?
ಈ ಚಾರಿಟೇಬಲ್ ಟ್ರಸ್ಟ್​ಗೆ ನಾನು ಅಧ್ಯಕ್ಷೆಯಾಗಿದ್ದೇನೆ.  ಚಾರಿಟೇಬಲ್ ಟ್ರಸ್ಟ್​ಗೆ ಅಶ್ವಿನಿ ಅವರ ಸಹೋದರಿ ರಜನಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ವ್ಯವಸ್ಥಾಪಕ ಟ್ರಸ್ಟಿಯಾಗಿ ಜಿಪಂ ಮಾಜಿ ಸದಸ್ಯ ಹಾಗೂ ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್ ಕಾರ್ಯನಿರ್ವಹಿಸಲಿದ್ದಾರೆ. ಕಾರ್ಯದರ್ಶಿಯಾಗಿ ಸಚಿನ್ ರಾಯ್ಕರ್, ಜಂಟಿ ಕಾರ್ಯದರ್ಶಿಯಾಗಿ ಪುರುಷೋತ್ತಮ್ ಕೆ.ಕೆ., ಖಜಾಂಚಿಯಾಗಿ ಕೆ. ಫಣೀಶ್ ಇರಲಿದ್ದಾರೆ ಎಂದು ಮೃತ ಹರ್ಷ ಅವರ ಸಹೋದರಿ ಅಶ್ವಿನಿ ಅವರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​
ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ (Harsha Murder Case) ಸಂಬಂಧಿಸಿದ 10 ಆರೋಪಿಗಳನ್ನು (Accused) ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ (Judicial Custody) ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ (Police Custody) ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ (Shivamogga Central Prison) ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: Hijab ಧರಿಸಿ​ ಬಂದ್ರೆ ದ್ವಿತೀಯ ಪಿಯು ಪರೀಕ್ಷೆ ನೋ ಎಂಟ್ರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಪೊಲೀಸ್ ಕಸ್ಟಡಿಯಲ್ಲಿ ಆರೋಪಿಗಳು ಹರ್ಷನ ಕೊಲೆಗೆ ಸಂಬಂಧಿಸಿದ ವಿಷಯಗಳನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ. ಹರ್ಷನ ಕೊಲೆ ಬಳಿಕ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಸಹ ನಡೆದಿತ್ತು. ಬಂಧಿತ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ ನಿರ್ಬಂಧ (UPA) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

10 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ (Harsha Murder Case) ಸಂಬಂಧಿಸಿದ 10 ಆರೋಪಿಗಳನ್ನು (Accused) ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ (Judicial Custody) ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ (Police Custody) ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ (Shivamogga Central Prison) ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: Shivamogga Murder Case: ಹರ್ಷ ಕೊಲೆ: 10 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪೊಲೀಸ್ ಕಸ್ಟಡಿಯಲ್ಲಿ ಆರೋಪಿಗಳು ಹರ್ಷನ ಕೊಲೆಗೆ ಸಂಬಂಧಿಸಿದ ವಿಷಯಗಳನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ. ಹರ್ಷನ ಕೊಲೆ ಬಳಿಕ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಸಹ ನಡೆದಿತ್ತು. ಬಂಧಿತ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ ನಿರ್ಬಂಧ (UPA) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Published by:guruganesh bhat
First published: