ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Assembly Election 2023) ಬಿಜೆಪಿ (BJP) ಹೊಸಬರಿಗೆ ಮಣೆ ಹಾಕಿ, ಹಿರಿಯರಿಗೆ ಟಿಕೆಟ್ ನಿರಾಕರಿಸಿತ್ತು. ಇದೇ ಪ್ರಯೋಗವನ್ನು ಲೋಕಸಭಾ ಚುನಾವಣೆಯಲ್ಲಿ (Loksabha Election 2024) ಪ್ರಯೋಗಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಪಕ್ಷಟಿಕೆಟ್ ನಿರಾಕರಿಸುವ ಮುನ್ನ ತಾವೇ ಚುನಾವಣಾ ನಿವೃತ್ತಿ ಘೋಷಿಸಿ ಗೌರವಯುತವಾಗಿ ಹೋಗೋದು ಉತ್ತಮ ಎಂಬ ಲೆಕ್ಕಾಚಾರವನ್ನು ಹಾಲಿ ಬಿಜೆಪಿ ಸಂಸದರು (BJP MP) ಮಾಡಿದ್ದಾರಂತೆ. ಇನ್ನು ಕೆಲ ಸಂಸದರು ಅನಾರೋಗ್ಯ ಮತ್ತು ವಯಸ್ಸಿನ ಕಾರಣ ನೀಡಿ ಚುನಾವಣೆಯಿಂದ ಹಿಂದೆ ಸರಿಯುವ ಸಾಧ್ಯತೆಗಳು ದಟ್ಟವಾಗಿವೆ. ಈಗಾಗಲೇ ಕೆಲವು ಸಂಸದರು ಬಹಿರಂಗವಾಗಿಯೇ ಸ್ಪರ್ಧೆ ಮಾಡದಿರುವ ನಿರ್ಧಾರ ಪ್ರಕಟಿಸಿದ್ದಾರೆ.
ಯಾರೆಲ್ಲಾ ಚುನಾವಣೆಯಿಂದ ಹಿಂದೆ ಸರಿಯಬಹುದು?
1.ವಿ.ಶ್ರೀನಿವಾಸ್ ಪ್ರಸಾದ್: ಚಾಮರಾಜನಗರ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್ ಅನಾರೋಗ್ಯ ಹಿನ್ನೆಲೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಅನ್ನೋದನ್ನು ಖಚಿತಪಡಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಹೊಸ ಅಭ್ಯರ್ಥಿ ಕಣಕ್ಕಿಳಿಯೋದು ಖಚಿತವಾಗಿದೆ.
2.ಅನಂತಕುಮಾರ್ ಹೆಗ್ಡೆ: ಉತ್ತರ ಕನ್ನಡದ ಸಂಸದರಾಗಿರುವ ಅನಂತಕುಮಾರ್ ಹೆಗ್ಡೆ ಒಂದು ಬಾರಿ ಕೇಂದ್ರ ಸಚಿವರು ಆಗಿದ್ದರು. ಕಳೆದ ಎರಡ್ಮೂರು ವರ್ಷಗಳಿಂದ ಸಂಸದರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕಾಗಿ ಸಂಸದರು ಚುನಾವಣೆಯಿಂದ ಹಿಂದೆ ಸರಿಯಬಹುದು ಎನ್ನಲಾಗುತ್ತಿದೆ.
3.ಜಿಎಸ್ ಬಸವರಾಜ್: ತುಮಕೂರು ಸಂಸದರಾಗಿರುವ ಜಿಎಸ್ ಬಸವರಾಜ್ ಚುನಾವಣೆಗೆ ಸ್ಪರ್ಧೆ ಮಾಡಬೇಕೋ ಅಥವಾ ಬೇಡವಾ ಅನ್ನೋ ಗೊಂದಲದಲ್ಲಿದ್ದಾರೆ.
4.ಪಿ.ಸಿ.ಗದ್ದಿಗೌಡರು: ಬಾಗಲಕೋಟೆಯ ಸಂಸದರಾದ ಪಿಸಿ ಗದ್ದಿಗೌಡರು ಸಹ ಚುನಾವಣೆಯಿಂದ ಹಿಂದೆ ಸರಿಯಬಹುದು ಎಂಬ ಮಾತುಗಳು ಬಿಜೆಪಿ ಅಂಗಳದಲ್ಲಿ ಕೇಳಿ ಬರುತ್ತಿವೆ.
5.ಬಿಎನ್ ಬಚ್ಚೇಗೌಡ: ಚಿಕ್ಕಬಳ್ಳಾಪುರದ ಕ್ಷೇತ್ರದ ಸಂಸದರಾಗಿರುವ ಬಚ್ಚೇಗೌಡರಿಗೆ 80 ವರ್ಷ ಮತ್ತು ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಶಾಸಕರಾಗಿದ್ದಾರೆ. ವಯಸ್ಸಿನ ಕಾರಣದಿಂದ ಟಿಕೆಟ್ ಸಿಗದಿರುವ ಸಾಧ್ಯತೆಗಳಿವೆ.
ಇದನ್ನೂ ಓದಿ: Loksabha Election ಮೇಲೆ ಕಣ್ಣಿಟ್ಟ ಸೋತ ಬಿಜೆಪಿ ಪ್ರಬಲ ನಾಯಕರು? ಯಾರಿಗೆ ಯಾವ ಕ್ಷೇತ್ರ ಬೇಕಂತೆ?
ದಕ್ಷಿಣ ಕನ್ನಡ ಕಗ್ಗಂಟು
ದಕ್ಷಿಣ ಕನ್ನಡ ಸಂಸದರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಸ್ಪರ್ಧೆ ಮಾಡಿದ್ರೆ ಎದುರಾಳಿಯಾಗಿ ಹಿಂದೂ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಇಲ್ಲಿ ಯಾರಿಗೆ ಬಿಜೆಪಿ ಟಿಕೆಟ್ ಸಿಗುತ್ತೆ ಅನ್ನೋ ಕುತೂಹಲ ಮನೆ ಮಾಡಿದೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಟಿಕಟ್ ಸಿಗದಿದ್ರೆ ರಾಜಕೀಯ ನಿವೃತ್ತಿ ಘೋಷಣೆ ಮಾಡೋದಾಗಿ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ