• Home
 • »
 • News
 • »
 • state
 • »
 • Bhavani Revanna: ಹಾಸನದಲ್ಲಿ ನಾನೇ ಜೆಡಿಎಸ್​ ಅಭ್ಯರ್ಥಿ; ವೇದಿಕೆಯಲ್ಲಿ ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ

Bhavani Revanna: ಹಾಸನದಲ್ಲಿ ನಾನೇ ಜೆಡಿಎಸ್​ ಅಭ್ಯರ್ಥಿ; ವೇದಿಕೆಯಲ್ಲಿ ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ

ಭವಾನಿ ರೇವಣ್ಣ

ಭವಾನಿ ರೇವಣ್ಣ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ತಾವೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.​ಡಿ ರೇವಣ್ಣ ಅವರ ಪತ್ನಿ, ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ.

 • News18 Kannada
 • 5-MIN READ
 • Last Updated :
 • Hassan, India
 • Share this:

ಹಾಸನ: 2023ರ ವಿಧಾನಸಭಾ ಚುನಾವಣೆಯ (Karnataka Elections 2023) ಹತ್ತಿರವಾಗುತ್ತಿದ್ದಂತೆ ಹಾಸನ ವಿಧಾನಸಭಾ (Hassan Constituency) ಕ್ಷೇತ್ರವು ರಾಜ್ಯದ ಗಮನ ಸೆಳೆಯುತ್ತಿದೆ. ಹಾಸನ ಕ್ಷೇತ್ರದಲ್ಲಿ ಈ ಬಾರಿ ಯಾರು ಜೆಡಿಎಸ್​ ಅಭ್ಯರ್ಥಿಯಾಗುತ್ತಾರೆ ಎಂಬ ಕುತೂಹಲ ಕ್ಷೇತ್ರದ ಜನರನ್ನು ಕಾಡುತ್ತಿದೆ. ಈ ನಡುವೆ ತಾವೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.​ಡಿ ರೇವಣ್ಣ (HD Revanna) ಅವರ ಪತ್ನಿ, ಭವಾನಿ ರೇವಣ್ಣ (Bhavani Revanna) ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಅಲ್ಲದೇ ಶೀಘ್ರದಲ್ಲೇ ಪಟ್ಟಿಯಲ್ಲಿ ಹೆಸರು ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಹಾಸನದಿಂದ ರೇವಣ್ಣ ಸ್ಪರ್ಧೆ ಮಾಡುತ್ತಾರಾ? ಭವಾನಿ ರೇವಣ್ಣ ಅವರು ಅಭ್ಯರ್ಥಿ ಆಗುತ್ತಾರಾ ಎಂಬ ಚರ್ಚೆ ಹಲವು ದಿನಗಳಿಂದ ಜೋರಾಗಿದೆ. ಇದರೊಂದಿಗೆ ಶಾಸಕ ಪ್ರೀತಂ ಗೌಡ (MLA Preetham Gowda) ಅವರ ಸವಾಲನ್ನು ಜೆಡಿಎಸ್ ಸ್ವೀಕಾರ ಮಾಡುತ್ತಾ ಎಂಬ ಕುತೂಹಲವೂ ಹಲವರನ್ನು ಕಾಡುತ್ತಿತ್ತು.


ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟ ಆಗಲಿದೆ


ಇಂದು ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇನಹಳ್ಳಿ ಗ್ರಾಮದಲ್ಲಿ ಅಣ್ಣಪ್ಪಸ್ವಾಮಿ ದೇವಾಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಭವಾನಿ ರೇವಣ್ಣ ಅವರು, ರೇವಣ್ಣ ಅವರು ಇಂಧನ ಮಂತ್ರಿಯಾಗಿದ್ದಾಗ ಅನುಕೂಲ ಮಾಡಿಕೊಟ್ಟಿದ್ದಾರೆ ಅಂತ ಈಗ ಗೊತ್ತಾಯ್ತು. ಅವರು ಮಂತ್ರಿಯಾಗಿದ್ದಾಗ ಇಡೀ ಜಿಲ್ಲೆಯ ಕೆಲಸಗಳನ್ನು ಮಾಡಿ ಕೊಟ್ಟಿದ್ದಾರೆ.


ಇದನ್ನೂ ಓದಿ: Prajwal Revanna: JDS ಕಾರ್ಯಕರ್ತರಿಂದ ಎಚ್‌ಡಿ ರೇವಣ್ಣ ಮನೆಗೆ ಮುತ್ತಿಗೆ! ಪ್ರಜ್ವಲ್ ರೇವಣ್ಣ ಹೇಳಿದ್ದೇನು?


ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಕ್ಷೇತ್ರವಾಗಿ ಕೆಲವು ಕೆಲಸ, ಕಾರ್ಯಗಳು ಉಳಿದುಕೊಂಡಿವೆ. ಚುನಾವಣೆ ಇನ್ನೇನು ಹತ್ತಿರ ಬಂದಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ಎಲ್ಲರೂ ಕೂಡ ಮಾತನಾಡಿಕೊಂಡು ನಿರ್ಣಯ ತಗೊಂಡಿದ್ದಾರೆ. ಹಾಗಾಗಿ ಇನ್ನು ಸ್ವಲ್ಪ ದಿವಸದಲ್ಲೇ ನಮ್ಮ ಹೆಸರು ಕೂಡ ಹೇಳುತ್ತಾರೆ. ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ.


ಭವಾನಿ ರೇವಣ್ಣ


ಕಳೆದ ಒಂದು ವರ್ಷದಿಂದ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸಕ್ರಿಯ


ಕಳೆದ ಒಂದು ವರ್ಷದಿಂದ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಅಲ್ಲದೇ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಕೂಡ ನಿರಂತರವಾಗಿ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಈಗಾಗಲೇ ಜೆಡಿಎಸ್​ 2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ.


ಇದನ್ನೂ ಓದಿ: Hassan: IIT ಜಾಗದ ವಿವಾದ;  ಯಾರೋ ಒಬ್ಬರು ಹೇಳಿದಂತೆ ಸರ್ಕಾರ ನಡೆಸಲು ಆಗಲ್ಲ- ಹೆಚ್​​ಡಿ ರೇವಣ್ಣಗೆ ಪ್ರೀತಂ ಗೌಡ ಟಾಂಕ್


ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ 8 ಕ್ಷೇತ್ರ ಗಳಿಗೆ ಮಾತ್ರ ಅಭ್ಯರ್ಥಿಗಳ ಪ್ರಕಟ ಮಾಡಲಾಗಿತ್ತು. ಮೊದಲ ಪಟ್ಟಿಯಲ್ಲಿ ಶಾಸಕ ಜಿಟಿ ದೇವೇಗೌಡ ಅವರು ತಮ್ಮ ಮಗನಿಗೆ ಟಿಕೆಟ್​ ಕೊಡಿಸುವಲ್ಲಿ ಸಕ್ಸಸ್ ಆಗಿದ್ದರು.
ಇತ್ತ ರಾಮನಗರದಲ್ಲಿ ಮಗನಿಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ ಮಾಡಿದ್ದರು. ರಾಮನಗರದ ಟಿಕೆಟ್​ನಲ್ಲಿ ನಿಖಿಲ್​ ಕುಮಾರಸ್ವಾಮಿಗೆ ನೀಡೋದಾಗಿ ಹಿಂದೆ ಅನಿತಾ ಕುಮಾರಸ್ವಾಮಿ ಘೋಷಿಸಿದ್ದರು ಅದರಂತೆ ಅಧಿಕೃತವಾಗಿ ಪಟ್ಟಿಯಲ್ಲಿ ಪ್ರಕಟಿಸಲಾಗಿತ್ತು.  ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದ ಬಳಿಕ ಮಾತನಾಡಿದ್ದ ಕುಮಾರಸ್ವಾಮಿ ಅವರು, ಈಗ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯೇ ಫೈನಲ್​ ಅಲ್ಲ. ಟಿಕೆಟ್​ ಪಡೆದ ಅಭ್ಯರ್ಥಿಗಳು ಕ್ಷೇತ್ರದಲ್ಲಿ ನಿರಂತರವಾಗಿ ಕೆಲಸ ಮಾಡಬೇಕು. ಯಾರು ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡುವುದಿಲ್ಲವೋ ಅಂತ ಅಭ್ಯರ್ಥಿಗಳನ್ನು ಕೈಬಿಡಲಾಗುತ್ತದೆ. ಈ ಬಗ್ಗೆ ಅಭ್ಯರ್ಥಿಗಳಿಗೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದರು.

Published by:Sumanth SN
First published: