ಹಾಸನ (ನ. 16): ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನದ ಹಾಸನಾಂಬ ದೇವಾಲಯದಲ್ಲಿ ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯಲಾಗುತ್ತದೆ. ನ. 5ರಂದು ಹಾಸನಾಂಬಾ ದೇಗುಲದ ಬಾಗಿಲು ತೆರೆಯಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಹಾಸನಾಂಬೆ ದೇವಸ್ಥಾನ ತೆರೆದಿರುತ್ತದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಳ್ಳಂಬೆಳಗ್ಗೆಯೇ ತಮ್ಮ ಪತ್ನಿಯೊಂದಿಗೆ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.
ಹಾಸನಾಂಬೆ ದರ್ಶನದ ಕೊನೆಯ ದಿನವಾದ್ದರಿಂದ ಇಂದು ಬೆಳಗ್ಗೆ 6.45ರ ಸುಮಾರಿಗೆ ಹಾಸನಾಂಬೆ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ದೀಪಾವಳಿ ಹಬ್ಬದ ದಿನವೇ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಹಾಸನದಲ್ಲಿ ಹಾಸನಾಂಬೆ ದರ್ಶನ ಬಳಿಕ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿದ್ದು, ಇದೊಂದು ಪುಣ್ಯಕ್ಷೇತ್ರ. ನಂಬಿಕೆ ಎಂಬ ಪದಕ್ಕೆ ಪವಿತ್ರ ಧರ್ಮಕ್ಷೇತ್ರಗಳೇ ಸಾಕ್ಷಿ. ಹಾಸನಾಂಬೆ ದೇವಿ ರಾಜ್ಯದ ಜನತೆಯ ಎಲ್ಲರ ದುಃಖ ದೂರ ಮಾಡಲಿ. ನಮ್ಮಂಥವರಿಗೆ ರಾಜ್ಯದವರಿಗೆ ಇರುವ ಎಲ್ಲ ನೋವನ್ನು ಪರಿಹಾರ ಮಾಡಲಿ ಎಂದು ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Drug Case: ಡ್ರಗ್ ಪ್ರಕರಣ; ಸಿಸಿಬಿಯಿಂದ ಇಂದು ಮಾಜಿ ಸಚಿವರ ಮಗ ದರ್ಶನ್ ಲಮಾಣಿ ವಿಚಾರಣೆ
ಪಂಚಾಯಿತಿ ಚುನಾವಣೆ ನಡೆಯಬೇಕು ಎಂದು ನಮ್ಮ ಪಕ್ಷದವರು ಕೋರ್ಟ್‌ಗೆ ಹೋಗಿದ್ದೆವು. ಪಂಚಾಯಿತಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ನಾವು ಪ್ರವಾಸ ಮಾಡಿ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ. ಅಧಿಕಾರ ದುರುಪಯೋಗ ಆಗುತ್ತದೆ. ಆದರೂ ನಮ್ಮ ಹೋರಾಟವನ್ನು ನಾವು ಮಾಡಬೇಕು. ನಮ್ಮ ಜನರ ಮೇಲೆ ನಂಬಿಕೆ ಇದೆ. ಅವರು ತಡ ಆದರೂ ಗೌರವ ಕೊಡುತ್ತಾರೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ