ಹಾಸನದಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಕೈ ಹಿಡಿಯಲು ಸಿದ್ಧರಾದ ಜೆಡಿಎಸ್​ ಶಾಸಕ ಇವರೇ...

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಜೆಡಿಎಸ್​ ಶಾಸಕ ಎ.ಟಿ. ರಾಮಸ್ವಾಮಿ ಸಿದ್ದರಾಮಯ್ಯ ಜೊತೆ ಖಾಸಗಿಯಾಗಿ ಮಾತುಕತೆ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. 2 ಬಾರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಎ.ಟಿ. ರಾಮಸ್ವಾಮಿ ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

news18-kannada
Updated:November 19, 2019, 9:56 AM IST
ಹಾಸನದಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಕೈ ಹಿಡಿಯಲು ಸಿದ್ಧರಾದ ಜೆಡಿಎಸ್​ ಶಾಸಕ ಇವರೇ...
ಪ್ರಾತಿನಿಧಿಕ ಚಿತ್ರ
  • Share this:
ಹಾಸನ (ನ. 19): ರಾಜ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್​ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿತ್ತು. ಈ ವೇಳೆ ಹಾಸನದಲ್ಲಿ ತಮ್ಮ ಬದಲು ಜೆಡಿಎಸ್​ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡಿದ್ದ ಕಾಂಗ್ರೆಸ್​ ನಾಯಕ ಎ. ಮಂಜು ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಹಾಸನದಲ್ಲಿ ಜೆಡಿಎಸ್​ ಪಾರುಪತ್ಯವನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಎ. ಮಂಜು ಬಿಜೆಪಿ ಸೇರಿದ್ದು ಕಾಂಗ್ರೆಸ್​ಗೆ ದೊಡ್ಡ ಹೊಡೆತವನ್ನೇ ನೀಡಿತ್ತು.

ಇದೀಗ ಹಾಸನದಲ್ಲಿ ಮತ್ತೆ ಭಿನ್ನಮತ ಭುಗಿಲೇಳುವ ಸಾಧ್ಯತೆಯಿದ್ದು, ಪಕ್ಷದ ಆಂತರಿಕ ರಾಜಕೀಯದಿಂದ ಬೇಸತ್ತು ಜೆಡಿಎಸ್​ ಶಾಸಕ ಎ.ಟಿ. ರಾಮಸ್ವಾಮಿ ಕಾಂಗ್ರೆಸ್​ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದಕ್ಕೆ ಪುಷ್ಠಿ ನೀಡುವಂತೆ ಅರಕಲಗೂಡು ಜೆಡಿಎಸ್​ ಶಾಸಕ ಎ.ಟಿ. ರಾಮಸ್ವಾಮಿ ಈಗಾಗಲೇ 2 ಬಾರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ. ಹೀಗಾಗಿ, ಎ.ಟಿ. ರಾಮಸ್ವಾಮಿ ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವುದು ಖಚಿತ ಎನ್ನಲಾಗುತ್ತಿದೆ.

ಹೊಸಕೋಟೆಯಲ್ಲಿ ಮತದಾರರಿಗೆ ಆಮಿಷ; ಪದ್ಮಾವತಿ ಸುರೇಶ್​ಗೆ ಸೇರಿದ 53 ಕುಕ್ಕರ್​ಗಳು ಪೊಲೀಸರ ವಶಕ್ಕೆ

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಎ.ಟಿ. ರಾಮಸ್ವಾಮಿ ಸಿದ್ದರಾಮಯ್ಯ ಜೊತೆ ಖಾಸಗಿಯಾಗಿ ಮಾತುಕತೆ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. 2 ಬಾರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಎ.ಟಿ. ರಾಮಸ್ವಾಮಿ ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದಿಂದ ಅಂತರ ಕಾಯ್ದುಕೊಂಡಿದ್ದ ಎ.ಟಿ. ರಾಮಸ್ವಾಮಿ ಕಾಂಗ್ರೆಸ್​ನೊಂದಿಗೆ ಜೆಡಿಎಸ್​ ಕೈ ಜೋಡಿಸಿದ್ದಕ್ಕೆ ಹಲವು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇದೇ ರೀತಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿಯಿಂದ ಬೇಸರಗೊಂಡಿದ್ದ ಎ. ಮಂಜು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದೀಗ ಎ. ಟಿ. ರಾಮಸ್ವಾಮಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಎ.ಟಿ. ರಾಮಸ್ವಾಮಿ ಅಥವಾ ಕಾಂಗ್ರೆಸ್​ ಯಾವುದೇ ಸ್ಪಷ್ಟನೆ ನೀಡಿಲ್ಲ.

(ವರದಿ: ಡಿಜಿಎಂ ಹಳ್ಳಿ ಅಶೋಕ್)

First published:November 19, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ